More

    22ರಂದು ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರದಾನ

    ಮಂಗಳೂರು: ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದಲ್ಲಿ ಅತ್ಯುತ್ತಮ ಕೊಡುಗೆ ನೀಡಿರುವ ಪದವಿ ಹಾಗೂ ಪತ್ರಿಕೋದ್ಯಮ ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಮೀಡಿಯಾ ಅಲ್ಯೂಮ್ನಿ ಅಸೋಸಿಯೇಶನ್(ಮಾಮ್) ಆಫ್ ಮಂಗಳಗಂಗೋತ್ರಿ ಸಂಘಟನೆ ವತಿಯಿಂದ ಪ್ರತಿವರ್ಷದಂತೆ ನೀಡಲಾಗುವ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ ಪ್ರದಾನ ಕಾರ್ಯಕ್ರಮ ನ. 22ರಂದು ಬೆಳಗ್ಗೆ 10.30ಕ್ಕೆ ಮಂಗಳೂರಿನ ಪ್ರೆಸ್‌ಕ್ಲಬ್‌ನಲ್ಲಿ ನಡೆಯಲಿದೆ.

    ಅಕ್ಷರಸಂತ, ಪದ್ಮಶ್ರೀ ಪುರಸ್ಕೃತ ಹರೇಕಳ ಹಾಜಬ್ಬ ಪ್ರಶಸ್ತಿ ಪ್ರದಾನ ಮಾಡಲಿದ್ದು, ಮುಖ್ಯಅತಿಥಿಯಾಗಿ ಹೊಸದಿಗಂತ ಪತ್ರಿಕೆಯ ಹಿರಿಯ ವರದಿಗಾರ ಗುರುವಪ್ಪ ಎನ್.ಟಿ.ಬಾಳೇಪುಣಿ ಭಾಗವಹಿಸುವರು.

    ಪ್ರಶಸ್ತಿ ವಿಜೇತರು: ಪತ್ರಿಕೋದ್ಯಮ ಸ್ನಾತಕೋತ್ತರ ವಿಭಾಗದಲ್ಲಿ ಮೂಡುಬಿದಿರೆ ಆಳ್ವಾಸ್ ಕಾಲೇಜಿನ ಶ್ರೀರಕ್ಷಾ ರಾವ್ ಪುನರೂರು ಪ್ರಶಸ್ತಿ ಪಡೆದವರು. ಮೂಲ್ಕಿ ಸಮೀಪ ಪುನರೂರಿನವರು. ಸ್ನಾತಕೋತ್ತರ ಪದವಿ ಅಧ್ಯಯನದ ವೇಳೆ ಉತ್ತಮ ಬರಹಗಾರಿಕೆ ಮೂಲಕ ಗುರುತಿಸಿಕೊಂಡವರು. ಆಳ್ವಾಸ್ ಸಂಸ್ಥೆಯಲ್ಲಿ ಸಾಂಸ್ಕೃತಿಕ ದತ್ತು ಸ್ವೀಕಾರ ಯೋಜನೆ ಅಡಿ ಪತ್ರಿಕೋದ್ಯಮ ಕೋರ್ಸ್‌ಗೆ ಆಯ್ಕೆಯಾದವರು. ಆಳ್ವಾಸ್ ರಂಗ ಅಧ್ಯಯನದ ವಿದ್ಯಾರ್ಥಿನಿ. ಚಂಡೀಘಡದಲ್ಲಿ 2019ರಲ್ಲಿ ನಡೆದ ರಾಷ್ಟ್ರಮಟ್ಟದ ಯವಜನೋತ್ಸವದಲ್ಲಿ ನಾಟಕದಲ್ಲಿ ದ್ವಿತೀಯ ಬಹುಮಾನ ಪಡೆದಿದ್ದಾರೆ. ಬೀದಿ ನಾಟಕ, ತುಳು, ಕನ್ನಡ ನಾಟಕಗಳಲ್ಲಿ ಅಭಿನಯಿಸಿದ್ದಾರೆ. ಸದ್ಯ ಬೆಂಗಳೂರಿನ ಮಸ್ತ್ ಮಗಾ ಡಾಟ್ ಕಾಂ ಡಿಜಿಟಲ್ ಮಾಧ್ಯಮದಲ್ಲಿ ನಿರೂಪಕಿಯಾಗಿದ್ದಾರೆ.

    ಪದವಿ ವಿಭಾಗದಲ್ಲಿ ಪ್ರಸ್ತುತ ಆಳ್ವಾಸ್ ಕಾಲೇಜಿನಲ್ಲಿ ಸ್ನಾತಕೋತ್ತರ ದ್ವಿತೀಯ ವರ್ಷದ ಪದವಿ ಓದುತ್ತಿರುವ ದುರ್ಗಾ ಪ್ರಸನ್ನ ಅವರಿಗೆ ಪ್ರಥಮ ಪ್ರಶಸ್ತಿ. ಮೂಲತಃ ಕಾಸರಗೋಡು ಜಿಲ್ಲೆಯ ಪೆರ್ಲದವರು. ಪದವಿ ವಿದ್ಯಾಭ್ಯಾಸವನ್ನು ಕೂಡ ಆಳ್ವಾಸ್‌ನಲ್ಲಿಯೇ ಪೂರೈಸಿದ್ದಾರೆ. ವಿವಿಧ ಪತ್ರಿಕೆಗಳಲ್ಲಿ 60ಕ್ಕೂ ಅಧಿಕ ಲೇಖನ ಬರೆದಿದ್ದಾರೆ. ಕನ್ನಡ ಹಾಗೂ ತುಳು ವಿಕಿಪೀಡಿಯದ ಸಕ್ರಿಯ ಸಂಪಾದಕಿ ಹಾಗೂ ತರಬೇತುದಾರರಾಗಿದ್ದಾರೆ. ಸುದ್ದಿವಾಣಿ ವೆಬ್‌ಸೈಟ್‌ನ ಸಂಪಾದಕಿಯಾಗಿದ್ದಾರೆ.

    ಪ್ರಜ್ನಾ ಓಡಿಲ್ನಾಳ ದ್ವಿತೀಯ ಪ್ರಶಸ್ತಿ ಪಡೆದಿದ್ದಾರೆ. ಬೆಳ್ತಂಗಡಿ ತಾಲೂಕಿನ ಓಡಿಲ್ನಾಳ ಗ್ರಾಮದವರು. ಎಸ್‌ಡಿಎಂ ಕಾಲೇಜಿನಲ್ಲಿ ಪತ್ರಿಕೋದ್ಯಮ ಪದವಿ ಪೂರೈಸಿದವರು. ಪ್ರಸ್ತುತ ವಿವೇಕಾನಂದ ಕಾಲೇಜು ಪುತ್ತೂರಿನಲ್ಲಿ ಸ್ನಾತಕೋತ್ತರ ಪದವಿಯ ದ್ವಿತೀಯ ವರ್ಷದ ಪತ್ರಿಕೋದ್ಯಮ ವಿದ್ಯಾರ್ಥಿನಿ. ಪುತ್ತೂರಿನ ಸ್ಥಳೀಯ ವಾಹಿನಿ ಝೂಮ ಇನ್ ಟಿವಿಯಲ್ಲಿ ನಿರೂಪಕಿ ಹಾಗೂ ವರದಿಗಾರ್ತಿ. ನಿರೂಪಕಿ, ಬರಹಗಾರ್ತಿಯಾಗಿ ಗುರುತಿಸಿಕೊಂಡವರು.

    ಮಾಮ್ ಕುರಿತು: ಮೀಡಿಯಾ ಅಲ್ಯೂಮ್ನಿ ಅಸೋಸಿಯೇಷನ್ ಆಫ್ ಮಂಗಳಗಂಗೋತ್ರಿ, ಮಂಗಳೂರು ವಿಶ್ವವಿದ್ಯಾಲಯದ ಪತ್ರಿಕೋದ್ಯಮ ವಿಭಾಗದ ಹಳೆ ವಿದ್ಯಾರ್ಥಿಗಳ ಸಂಘಟನೆಯಾಗಿದ್ದು, 2015ರಲ್ಲಿ ಸ್ಥಾಪನೆಗೊಂಡಿದೆ. ಪತ್ರಿಕೋದ್ಯಮ ಶಿಕ್ಷಣ ಮತ್ತು ಉದ್ಯಮ ಕ್ಷೇತ್ರದೊಂದಿಗೆ ಶಿಕ್ಷಣ ವ್ಯವಸ್ಥೆ, ವಿದ್ಯಾರ್ಥಿಗಳನ್ನು ಬೆಸೆಯುವ ಸೇತುವಾಗಿ ಕೆಲಸ ಮಾಡುತ್ತಿದೆ. ಪತ್ರಿಕೋದ್ಯಮ ಕ್ಷೇತ್ರಕ್ಕೆ ವಿದ್ಯಾರ್ಥಿ ಹಂತದ ಕೊಡುಗೆ ನೀಡಿದವರನ್ನು ಗುರುತಿಸಿ ಗೌರವಿಸುವ ಕಾರ್ಯಕ್ರಮದ ಭಾಗವಾಗಿ ‘ಮಾಮ್ ಇನ್‌ಸ್ಪೈರ್ ಅವಾರ್ಡ್’ನ್ನು ಪ್ರತಿ ವರ್ಷ ನೀಡುತ್ತಾ ಬಂದಿದೆ. ಹಲವು ಸಾಮಾಜಿಕ, ಶೈಕ್ಷಣಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿದೆ. ಪತ್ರಿಕೋದ್ಯಮ ಶಿಕ್ಷಣಕ್ಕೆ ಬೇಕಾದ ಸುಧಾರಣೆಗಳ ಕುರಿತು ಇತ್ತೀಚೆಗೆ ಮಂಗಳೂರು ವಿಶ್ವವಿದ್ಯಾಲಯಕ್ಕೆ ಸಮಗ್ರ ಸಲಹೆ ಒಳಗೊಂಡ ಪ್ರಸ್ತಾವ ಸಲ್ಲಿಸಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts