More

    ಲಂಚ ಪ್ರಕರಣದಲ್ಲಿ ಸಿಕ್ಕಿಹಾಕಿಕೊಂಡಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಜಾಮೀನು

    ಬೆಂಗಳೂರು: ಕೆಎಸ್ಡಿಎಲ್ ಗುತ್ತಿಗೆಯಲ್ಲಿ ಲಂಚ ಪಡೆದ ಆರೋಪದ ಮೇಲೆ ಮಾರ್ಚ್ 27 ರಂದು ಬಂಧನವಾಗಿದ್ದ ಮಾಡಾಳ್ ವಿರೂಪಾಕ್ಷಪ್ಪಗೆ ಈಗ ಜಾಮೀನು ಸಿಕ್ಕಿದೆ.

    ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಅವರ ಪುತ್ರ ಕೆಎಸ್ಡಿಎಲ್ ಗುತ್ತಿಗೆಯಲ್ಲಿ ಅವ್ಯವಹಾರ ಮಾಡಿದ್ದಕ್ಕಾಗಿ ಸಿಕ್ಕಿಬಿದ್ದಿದ್ದರು. ನಂತರ ಅನೇಕ ರಾಜಕೀಯ ಬೆಳವಣಿಗೆಗಳು ನಡೆದು ಮಾಡಾಳ್ ವಿರೂಪಾಕ್ಷಪ್ಪ ಕೆಲ ದಿನಗಳ ಕಾಲ ಕಣ್ಮರೆ ಆದ ಘಟನೆಯೂ ನಡೆದಿತ್ತು. ಆ ಸಂದರ್ಭದಲ್ಲೇ ಅವರು ತಮ್ಮ ಶಾಸಕ ಸ್ಥಾನಕ್ಕೆ ರಾಜೀನಾಮೆಯನ್ನೂ ನೀಡಿದ್ದರು.

    ಇದೀಗ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯದಿಂದ ಮಾಡಾಳ್ ವಿರೂಪಾಕ್ಷಪ್ಪಗೆ ಷರತ್ತುಬದ್ದ ಜಾಮೀನು ಸಿಕ್ಕಿದ್ದು ನ್ಯಾ. ಜಯಂತ್ ಕುಮಾರ್ ಅವರು ಈ ಆದೇಶವನ್ನು ಹೊರಡಿಸಿದ್ದಾರೆ. ಜಾಮೀನು ನೀಡುವಾಗ ನ್ಯಾಯಮೂರ್ತಿಗಳು 5 ಷರತ್ತುಗಳನ್ನ ವಿಧಿಸಿದ್ದಾರೆ.

    ಈ ಹಿನ್ನೆಲೆಯಲ್ಲಿ ಅವರು 3 ವಾರಕ್ಕೆ ಒಮ್ಮೆ ಲೋಕಾಯುಕ್ತ ಕಚೇರಿಗೆ ಹಾಜರಾಗಬೇಕಾಗಿದ್ದು ಪಾಸ್‌ಪೋರ್ಟ್ ನ್ನ ಸರೆಂಡರ್ ಮಾಡುವಂತೆ‌ ಷರತ್ತು ವಿಧಿಸಲಾಗಿದೆ. ಅದಲ್ಲದೇ 5 ಲಕ್ಷ ರೂಪಾಯಿಯ ಬಾಂಡ್ ಹಾಗೂ ಇಬ್ಬರ ಶ್ಯೂರಿಟಿ ನೀಡುವಂತೆ‌ ಷರತ್ತು ಹಾಕಲಾಗಿದೆ.

    ಪಿಎಫ್ಐ, ಎಸ್ ಡಿಪಿಐ ಜತೆ ಕಾಂಗ್ರೆಸ್ ಆಂತರಿಕ ಒಪ್ಪಂದವೇನು?: ಬಿಜೆಪಿ ರಾಷ್ಟ್ರೀಯ ವಕ್ತಾರ

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts