More

    ಏ.2ರಂದು ಮದ್ದೂರಿನಲ್ಲಿ ಮೈತ್ರಿ ಪಕ್ಷದ ಸಮನ್ವಯ ಸಭೆ: ಪೂರ್ವಭಾವಿ ಸಭೆಯಲ್ಲಿ ಮನ್ಮುಲ್‌ ನಿರ್ದೇಶಕ ಸ್ವಾಮಿ ಮಾಹಿತಿ

    ಮದ್ದೂರು: ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಪಕ್ಷಗಳ ಸಮನ್ವಯ ಸಭೆಯ ಏ.2ರಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಪಟ್ಟಣದಲ್ಲಿ ಆಯೋಜಿಸಲಾಗಿದೆ ಎಂದು ಬಿಜೆಪಿ ಮುಖಂಡರೂ ಆದ ಮನ್ಮುಲ್ ನಿರ್ದೇಶಕ ಎಸ್.ಪಿ. ಸ್ವಾಮಿ ತಿಳಿಸಿದರು.
    ಪಟ್ಟಣದ ಮಳವಳ್ಳಿ ರಸ್ತೆಯಲ್ಲಿರುವ ಬಿಜೆಪಿ ಕಚೇರಿಯಲ್ಲಿ ಶನಿವಾರ
    ನಡೆದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
    ಸಭೆಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ, ಜೆಡಿಎಸ್ ನ ಜಿಲ್ಲೆಯ ಹಾಲಿ ಮತ್ತು ಮಾಜಿ ಶಾಸಕರು, ಬಿಜೆಪಿ ಪಕ್ಷದ ಮುಖಂಡರು ಗಳು ಭಾಗವಹಿಸಲಿರುವುದರಿಂದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕೆಂದು ಕೋರಿದರು.
    ಬಿಜೆಪಿ ಪಕ್ಷದ ರಾಷ್ಟ್ರೀಯ ನಾಯಕರ ಸೂಚನೆಯಂತೆ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಎನ್.ಡಿ.ಎ ಅಭ್ಯರ್ಥಿಯ ಗೆಲುವುವಿಗೆ ಶ್ರಮಿಸಬೇಕು. ಮುಖ್ಯವಾಗಿ ನರೇಂದ್ರ ಮೋದಿ ಅವರು 3 ನೇ ಬಾರಿಗೆ ದೇಶದ ಪ್ರಧಾನಿಯಾಗಬೇಕಾಗಿದೆ. ಅದನ್ನು ಗಮನದಲ್ಲಿಟ್ಟುಕೊಂಡು ಮದ್ದೂರು ವಿಧಾನ ಸಭಾ ವ್ಯಾಪ್ತಿಯಲ್ಲಿ ಮೈತ್ರಿ ಧರ್ಮ ಪಾಲನೆ ಮಾಡುವ ಮೂಲಕ ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಪಾಠವನ್ನು ಕಲಿಸಬೇಕಾಗಿದೆ ಎಂದರು.
    ನರೇಂದ್ರ ಮೋದಿ ಅವರ ಆಡಳಿತ ದೇಶ ಅಭಿವೃದ್ಧಿ ಪಥದಲ್ಲಿ ಶರವೇಗವಾಗಿ ಬೆಳೆದಿದೆ. ರಾಷ್ಟ್ರದ ಅಭಿವೃದ್ಧಿ ದೇಶಗಳ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವುದಕ್ಕೆ ಅವರ ದಕ್ಷ ಹಾಗೂ ಪ್ರಾಮಾಣಿಕ ಆಡಳಿವೇ ಕಾರಣ ಎಂದರು.
    ಬಿಜೆಪಿ ತಾಲೂಕು ಘಟಕದ ಅಧ್ಯಕ್ಷ ಶಿವದಾಸ್ ಸತೀಶ್, ಟಿಎಪಿಸಿಎಂಎಸ್ ಅಧ್ಯಕ್ಷ ಮಹದೇವು, ಜಿ.ಪಂ ಮಾಜಿ ಸದಸ್ಯ ಬೋರಯ್ಯ, ಮುಖಂಡರಾದ ಚಿಕ್ಕ ಅಂಕನಹಳ್ಳಿ ಮನು, ಡಾಬಾ ಕಿಟ್ಟಿ, ಹಾಗಲಹಳ್ಳಿ ರಘು, ಎಂ.ಸಿ.ಸಿದ್ದು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts