ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಪ್ರತಿಭಟನೆ

ಮದ್ದೂರು: ವಿವಿಧ ಬೇಡಿಕೆ ಈಡೇರಿಸುವಂತೆ ಒತ್ತಾಯಿಸಿ ಕಸ್ತೂರಿ ಕರ್ನಾಟಕ ಜನಪರ ವೇದಿಕೆ ಕಾರ್ಯಕರ್ತರು ಪಟ್ಟಣದ ತಾಲೂಕು ಕಚೇರಿಗೆ ಮುತ್ತಿಗೆ ಹಾಕಿ ಪ್ರತಿಭಟನೆ ಮಾಡಿದರು.

ಪ್ರತಿಭಟನೆಯ ನೇತೃತ್ವ ವಹಿಸಿದ್ದ ವೇದಿಕೆ ರಾಜ್ಯಾಧ್ಯಕ್ಷ ರಮೇಶ್‌ಗೌಡ ಮಾತನಾಡಿ, ಶಿಂಷಾನದಿ ಪಾತ್ರದಲ್ಲಿ ನಡೆಯುತ್ತಿರುವ ಅಕ್ರಮ ಮರಳು ಗಣಿಗಾರಿಕೆಗೆ ಕಡಿವಾಣ ಹಾಕಬೇಕು. ಮುಂಗಾರು ಹಂಗಾಮಿನ ಬೆಳೆ ನಷ್ಟ ಪರಿಹಾರವನ್ನು ಜಿಲ್ಲೆಯ ಎಲ್ಲ ತಾಲೂಕುಗಳಿಗೂ ವಿಸ್ತರಿಸಬೇಕು. ತಾಲೂಕಿನ ಸಕ್ಕರೆ ಕಾರ್ಖಾನೆಗಳಿಗೆ ಕಬ್ಬು ಸರಬರಾಜು ಮಾಡಿದ ಕಬ್ಬು ಬೆಳೆಗಾರರಿಗೆ ಬಾಕಿ ಹಣ ನೀಡಬೇಕು ಎಂದು ಒತ್ತಾಯಿಸಿದರು.

ತಹಸೀಲ್ದಾರ್ ಗೀತಾ ಮನವಿ ಸ್ವೀಕರಿಸಿ ಮಾತನಾಡಿ, ಆದ್ಯತೆ ಮೇರೆಗೆ ಸಮಸ್ಯೆಗಳನ್ನು ಬಗೆ ಹರಿಸಲಾಗುವುದು ಎಂದು ಭರವಸೆ ನೀಡಿದ ನಂತರ ಪ್ರತಿಭಟನೆ ಹಿಂಪಡೆಲಾಯಿತು. ವೇದಿಕೆಯ ಜಿಲ್ಲಾಧ್ಯಕ್ಷ ವಿ.ಸಿ.ಉಮಾಶಂಕರ್, ಉಪಾಧ್ಯಕ್ಷ ಮಹಾಲಿಂಗು, ಪ್ರಧಾನ ಕಾರ್ಯದರ್ಶಿ ಉಮೇಶ್, ನಗರ ಅಧ್ಯಕ್ಷ ಮಿಲ್ಟ್ರಿ ಕುಮಾರ್, ಮುಖಂಡರಾದ ಚೇತನ್, ನಂದೀಶ್, ಶಂಕರ್, ಸಿದ್ದೇಗೌಡ, ಅರುಣ್‌ಕುಮಾರ್ ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *