ಉಳ್ಳವರು ನೊಂದವರ ಆಶಾಕಿರಣವಾಗಲಿ

ಮದ್ದೂರು: ಉಳ್ಳವರು ಸಮಾಜಮುಖಿ ಕಾರ್ಯ ಮಾಡುವ ಮೂಲಕ ನೊಂದವರ ಬಾಳಿಗೆ ಆಶಾಕಿರಣವಾಗಬೇಕು ಎಂದು ಜಿಲ್ಲಾ ಉಸ್ತುವಾರಿ ಸಚಿವ ಸಿ.ಎಸ್.ಪುಟ್ಟರಾಜು ತಿಳಿಸಿದರು.

ತಾಲೂಕಿನ ಸೋಮನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಶ್ರೀ ಸೋಮೇಶ್ವರ ಫರ್ಟಿಲೈಜಸರ್ ಆವರಣದಲ್ಲಿ ಶ್ರೀನಿಧಿಗೌಡ ಸಾಮಾಜಿಕ ಹಾಗೂ ಸಾಂಸ್ಕೃತಿಕ ಸೇವಾ ಟ್ರಸ್ಟ್ ವತಿಯಿಂದ ಶ್ರೀನಿಧಿಗೌಡರ 24ನೇ ಜನ್ಮದಿನದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದರು.

ಇದೇ ವೇಳೆ ಶಾಲೆಯ 10 ಸಾವಿರ ವಿದ್ಯಾರ್ಥಿಗಳಿಗೆ ಉಚಿತ ನೋಟ್‌ಬುಕ್, ಲೇಖನಿ ಸಾಮಗ್ರಿ ವಿತರಿಸಲಾಯಿತು. ರಕ್ತದಾನ, ನೇತ್ರದಾನ, ಅಂಗದಾನ ನೋಂದಣಿ, ಆರೋಗ್ಯ ತಪಾಸಣೆ, 1ಸಾವಿರ ಮಹಿಳೆಯರಿಗೆ ಉಚಿತ ಕಂಬಳಿ ವಿತರಿಸಲಾಯಿತು. ವಿವಿಧ ಕ್ಷೇತ್ರದ ಸಾಧಕರನ್ನು ಸನ್ಮಾನಿಸಲಾಯಿತು.

ಆದಿಚುಂಚನಗಿರಿ ವೈದ್ಯಕೀಯ ಮಹಾವಿದ್ಯಾಲಯ, ಬಿಜಿಎಸ್ ಅಪೊಲೋ ಆಸ್ಪತ್ರೆ ತಜ್ಞ ವೈದ್ಯರು 8 ಸಾವಿರಕ್ಕೂ ಹೆಚ್ಚು ಜನರ ಆರೋಗ್ಯ ತಪಾಸಣೆ ನಡೆಸಿ ಉಚಿತ ಔಷಧ ವಿತರಿಸಿದರು. 800 ಜನ ರಕ್ತದಾನ ಮಾಡಿದರು.

ಶಿರಾ ಸ್ಪಟಿಕಪುರಿ ಮಹಾಸಂಸ್ಥಾನದ ಪೀಠಾಧ್ಯಕ್ಷ ನಂಜಾವದೂತ ಸ್ವಾಮೀಜಿ ಆಶೀರ್ವಚನ ನೀಡಿದರು. ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಶ್ರೀ ಪ್ರಸನ್ನನಾಥ ಸ್ವಾಮೀಜಿ, ಪುರುಷೋತ್ತಮನಂದನಾಥ ಸ್ವಾಮೀಜಿ, ವಿಧಾನ ಪರಿಷತ್ ಸದಸ್ಯರಾದ ಕೆ.ಟಿ.ಶ್ರೀಕಂಠೇಗೌಡ, ಮರಿತಿಬ್ಬೇಗೌಡ, ಜಿಪಂ ಅಧ್ಯಕ್ಷೆ ನಾಗರತ್ನ ಸ್ವಾಮಿ, ಉಪಾಧ್ಯಕ್ಷೆ ಗಾಯತ್ರಿ ರೇವಣ್ಣ, ಸದಸ್ಯರಾದ ಯೋಗೇಶ್, ಬೋರಯ್ಯ, ಮರಿಹೆಗಡೆ, ಮಾಜಿ ಸದಸ್ಯ ಸಾದೊಳಲು ಕೃಷ್ಣೇಗೌಡ, ಸೇವಾಟ್ರಸ್ಟ್ ಅಧ್ಯಕ್ಷ ಎಸ್.ಪಿ. ಸ್ವಾಮಿ, ಮುಖಂಡರಾದ ಮಾದನಾಯಕನಹಳ್ಳಿ ರಾಜಣ್ಣ, ಎನ್.ಆರ್.ಪ್ರಕಾಶ್, ಸಿ.ಕೆ.ಸ್ವಾಮಿಗೌಡ, ಸಾದೊಳಲು ಮಹೇಶ್ ಭಾಗವಹಿಸಿದ್ದರು.