More

    ಮದ್ದೂರಮ್ಮನವರ ಕೊಂಡೋತ್ಸವ ವೈಭವ: ಸಾವಿರಾರು ಭಕ್ತರು ಭಾಗಿ

    ಮದ್ದೂರು: ಪಟ್ಟಣದ ಪುರಾಣ ಪ್ರಸಿದ್ಧ ಹಾಗೂ ಅಧಿದೇವತೆ ಶ್ರೀ ಮದ್ದೂರಮ್ಮನವರ ಕೊಂಡೋತ್ಸವ ಸಂಭ್ರಮದಿಂದ ನೆರವೇರಿತು.
    ಮಂಗಳವಾರ ಬೆಳಗ್ಗೆ 10.30 ಗಂಟೆಗೆ ಶ್ರೀ ಮದ್ದೂರಮ್ಮ ಮಠಮನೆ ದೇವಸ್ಥಾನದಲ್ಲಿ ಹೋಮ, ಹವನ ನೆರವೇರಿತು. 2.30ಕ್ಕೆ ಶ್ರೀ ಎಲ್ಲಮ್ಮ ದೇವಿಗೆ ಚಂದ್ರಭಂಡಾರ ಸೇವೆ ಸಲ್ಲಿಸಲಾಯಿತು. ಸಂಜೆ 4 ಗಂಟೆಗೆ ಗ್ರಾಮಸ್ಥರಿಂದ ಕೊಂಡ ಬಂಡಿ ಉತ್ಸವ ಪ್ರಮುಖ ಬೀದಿಗಳಲ್ಲಿ ನಡೆಯಿತು. ಸಂಜೆ 6.30ಕ್ಕೆ ಶ್ರೀ ಮದ್ದೂರಮ್ಮನವರ ಮೂಲ ದೇಗುಲದಲ್ಲಿ ಅಭಿಷೇಕ, ಹೋಮ, ಹವನ ಹಾಗೂ ಮಹಾಮಂಗಳಾರತಿ, ತೀರ್ಥಪ್ರಸಾದ ವಿನಿಯೋಗ ಮಾಡಲಾಯಿತು.
    ರಾತ್ರಿ 11.30ಕ್ಕೆ ಕೊಂಡಕ್ಕೆ ಪೂಜೆ ಸಲ್ಲಿಸಿ ಅಗ್ನಿ ಸ್ಪರ್ಶ ಮಾಡಲಾಯಿತು. ರಾತ್ರಿ 1 ಗಂಟೆಗೆ ಮಠಮನೆಯಿಂದ ಮಂಗಳವಾದ್ಯದೊಂದಿಗೆ ಶಿಂಷಾ ನದಿಗೆ ಬಂದು ನದಿಯ ದಡದಲ್ಲಿ ಶ್ರೀ ಮದ್ದೂರಮ್ಮನವರಿಗೆ 101 ಚಂದ್ರಭಂಡಾರ ಎಡೆ ಪೂಜೆ, ಹೂ ಹೊಂಬಾಳೆ ಪೂಜೆ, ಕರಗ ಪೂಜೆ ಸಲ್ಲಿಸಲಾಯಿತು. ಬಳಿಕ ಊರಿನ ಪ್ರಮುಖ ಬೀದಿಗಳಲ್ಲಿ ಭವ್ಯ ಮೆರವಣಿಗೆಯೊಂದಿಗೆ ಮಠದ ಮನೆಗೆ ಕರ ತರಲಾಯಿತು. ಬುಧವಾರ ಬೆಳಗ್ಗೆ ಜೇಷ್ಠ ನಕ್ಷತ್ರ ಶುಭ ಬ್ರಾಹ್ಮಿ ಮಹೂರ್ತದಲ್ಲಿ ಕೊಂಡೋತ್ಸವ ಶಾಸ್ತ್ರೋಕ್ತವಾಗಿ ಅದ್ದೂರಿಯಾಗಿ ನಡೆಯಿತು.
    ದೇಗುಲದ ಆವರಣದಲ್ಲಿ ಶ್ರೀ ಮದ್ದೂರಮ್ಮನವರ ದೇವರ ಪಟ ಹೊತ್ತ ಅರ್ಚಕ ಶಿವಣ್ಣ ಯಶಸ್ವಿಯಾಗಿ ಕೊಂಡ ಹಾಯ್ದರು. ಕೊಂಡೋತ್ಸವಕ್ಕೆ ಆಗಮಿಸಿದ್ದ ಸಾವಿರಾರು ಭಕ್ತರ ಉದ್ಘೋಷ ಮುಗಿಲು ಮುಟ್ಟಿತ್ತು. ಜಿಲ್ಲೆ ಹಾಗೂ ರಾಜ್ಯದ ವಿವಿಧ ಭಾಗಗಳಿಂದ ಆಗಮಿಸಿದ ಹೆಚ್ಚಿನ ಸಂಖ್ಯೆಯ ಭಕ್ತರನ್ನು ನಿಯಂತ್ರಿಸಲು ಪೊಲೀಸರು ಹರಸಾಹಸ ಪಡುವಂತಾಗಿತ್ತು. ಕೊಂಡೋತ್ಸವ ಅಂಗವಾಗಿ ದೇವಾಲಯಲ್ಲಿ ವಿಶೇಷ ಧಾರ್ಮಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts