More

    ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯ

    ಮದ್ದೂರು: ಕಟ್ಟಡ ನಿರ್ಮಾಣ ಕಾರ್ಮಿಕರಿಗೆ ಶೈಕ್ಷಣಿಕ ಸಹಾಯಧನ ಬಿಡುಗಡೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಫೆಡರೇಷನ್ ಮದ್ದೂರು ತಾಲೂಕು ಸಮಿತಿ ವತಿಯಿಂದ ಸೋಮವಾರ ಪಟ್ಟಣದ ಕಾರ್ಮಿಕ ನಿರೀಕ್ಷರ ಕಚೇರಿ ಮುಂದೆ ಪ್ರತಿಭಟನೆ ನಡೆಸಲಾಯಿತು.

    ಸಹಾಯಧನ ಹಾಗೂ ವಿವಿಧ ಬೇಡಿಕೆಗಳನ್ನ್ನು ಈಡೇರಿಸದ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗಿಆಕ್ರೋಶ ವ್ಯಕ್ತಪಡಿಸಿದರು. ಸಂಘದ ಕಾರ್ಯದರ್ಶಿ ವಿ.ಶಿವಕುಮಾರ್ ಮಾತನಾಡಿ, 2011-23ನೇ ಸಾಲಿನ ಶೈಕ್ಷಣಿಕ ಸಹಾಯಧನವನ್ನು ಕೂಡಲೇ ಬಿಡುಗಡೆ ಮಾಡಬೇಕು. 2021-22ನೇ ಸಾಲಿನಲ್ಲಿ 1.5 ಲಕ್ಷ ಫಲಾನುಭವಿಗಳಿಗೆ ಬಾಕಿ ಉಳಿಸಿಕೊಂಡಿರುವ ಶೈಕ್ಷಣಿಕ ಸಹಾಯಧನ ನೀಡಬೇಕು. 2023-24 ನೇ ಸಾಲಿನ ಶೈಕ್ಷಣಿಕ ವರ್ಷ ಆರಂಭವಾಗಿರುವ ಹಿನ್ನೆಲೆಯಲ್ಲಿ ಸಹಾಯಧನಕ್ಕಾಗಿ ಅರ್ಜಿ ಆಹ್ವಾನಿಸಬೇಕು ಎಂದು ಒತ್ತಾಯಿಸಿದರು.

    ಲ್ಯಾಪ್‌ಟ್ಯಾಪ್, ಟ್ಯಾಬ್ ಸೇರಿದಂತೆ ಯವುದೇ ವಿಧವಾದ ಖರೀದಿಗಳನ್ನು ನಿಲ್ಲಿಸಬೇಕು. ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದಿರುವ ಎಲ್ಲ ರೀತಿಯ ಖರೀದಿ ವ್ಯವಹಾರಗಳನ್ನು ತನಿಖೆಗೆ ಆದೇಶಿಸಬೇಕು ಹಾಗೂ ಭ್ರಷ್ಟಾಚಾರದಲ್ಲಿ ಭಾಗಿಯಾದವರ ಮೇಲೆ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹ ಮಾಡಿದರು.

    ನಮ್ಮ ಬೇಡಿಕೆಗಳನ್ನು ಶೀಘ್ರವಾಗಿ ಈಡೇರಿಸದೆ ಹೋದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ರೂಪಿಸಲಾಗುವುದು ಎಂದು ಅಧಿಕಾರಿಗಳಿಗೆ ಎಚ್ಚರಿಕೆ ನೀಡಿದರು. ಕಚೇರಿಯ ಡಾಟಾ ಆಪರೇಟರ್ ಬಿ.ಸುಮಾ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು. ಪ್ರತಿಭಟನೆಯಲ್ಲಿ ನಂದೀಶ್, ನಿಂಗೇಗೌಡ, ರಾಮಕೃಷ್ಣ, ಮಹೇಶ್, ಮಂಟೇಸ್ವಾಮಿ, ಬಸವರಾಜು, ಬಸವರಾಜು, ಆನಂದ, ಸುರೇಶ್, ಕೃಷ್ಣೇಗೌಡ, ಸುಮಂತ್‌ಕುಮಾರ್, ಹರೀಶ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts