ಪಲ್ಸ್ ಪೋಲಿಯೋ ಜಾಗೃತಿ ಜಾಥಾ

ಮದ್ದೂರು: ಪಟ್ಟಣದಲ್ಲಿ ಪಲ್ಸ್ ಪೋಲಿಯೋ ಲಸಿಕೆ ಹಾಕಿಸಲು ಹಮ್ಮಿಕೊಂಡಿದ್ದ ಜಾಗೃತಿ ಜಾಥಾಕ್ಕೆ ತಾಲೂಕು ಪಂಚಾಯಿತಿ ಉಪಾಧ್ಯಕ್ಷ ಬೆಕ್ಕಳಲೆ ರಘು ಚಾಲನೆ ನೀಡಿದರು.

ತಾಲೂಕು ವೈದ್ಯಾಧಿಕಾರಿ ಡಾ.ಆಶಾಲತಾ ಮಾತನಾಡಿ, ತಾಲೂಕಿನಲ್ಲಿ ಮಾ.10ರಿಂದ 13ರ ನತಕ 4 ದಿನಗಳು ಒಂದು ಸುತ್ತಿನ ಪಲ್ಸ್ ಪೋಲಿಯೋ ಲಸಿಕೆ ಹಾಕುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಪಟ್ಟಣದ ಬಸ್‌ನಿಲ್ದಾಣ, ರೈಲ್ವೆ ನಿಲ್ದಾಣ ಸೇರಿದಂತೆ ತಾಲೂಕಿನಾದ್ಯಂತ 113 ಬೂತ್‌ಗಳನ್ನು ಮಾಡಲಾಗಿದೆ. 5 ವರ್ಷದೊಳಗಿನ ಎಲ್ಲ ಮಕ್ಕಳಿಗೆ ತಪ್ಪದೆ ಪಾಲಕರು ಲಸಿಕೆ ಹಾಕಿಸಬೇಕು ಎಂದು ಮನವಿ ಮಾಡಿದರು.
ವಿದ್ಯಾರ್ಥಿಗಳು ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಮಾಡಿ ಪಲ್ಸ್ ಪೋಲಿಯೋ ಲಸಿಕೆ ಮಹತ್ವದ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮಾಡಿಸಿದರು. ಆರೋಗ್ಯ ಇಲಾಖೆಯ ಅಧಿಕಾರಿ ಶಿವಾನಂದ್, ರೋಟರಿ ಸಂಸ್ಥೆಯ ಅಕ್ಷರಂ ವೆಂಕಟೇಶ್, ತಿಪ್ಪೂರು ರಾಜೇಶ್, ಬಸವರಾಜು, ಮಣಿ ಸಿಸ್ಟರ್, ರಾಜೇಶ್ ಹಾಜರಿದ್ದರು.