More

    ಕ್ರೀಡೆಯಿಂದ ಒತ್ತಡ ಕಡಿಮೆ

    ಮದ್ದೂರು: ಸರ್ಕಾರಿ ನೌಕರರು ಕ್ರೀಡೆ, ವ್ಯಾಯಾಮ ಹಾಗೂ ಧ್ಯಾನವನ್ನು ನಿರಂತರವಾಗಿ ಮಾಡುವ ಮೂಲಕ ಒತ್ತಡವನ್ನು ಕಡಿಮೆ ಮಾಡಿಕೊಂಡು ಆರೋಗ್ಯಕರ ಹಾಗೂ ನೆಮ್ಮದಿಯ ಜೀವನ ನಡೆಸಬೇಕು ಎಂದು ಶಾಸಕ ಕೆ.ಎಂ.ಉದಯ್ ಸಲಹೆ ನೀಡಿದರು.

    ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಶನಿವಾರ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಿಂದ ಆಯೋಜಿಸಿದ್ದ ತಾಲೂಕು ಮಟ್ಟದ ಕ್ರೀಡಾಕೂಟ ಹಾಗೂ ಸಾಂಸ್ಕೃತಿಕ ಸ್ಪರ್ಧೆಗೆ ಚಾಲನೆ ನೀಡಿ ಮಾತನಾಡಿದ ಅವರು, ಸರ್ಕಾರಿ ನೌಕರರು ಪ್ರತಿನಿತ್ಯ ಒತ್ತಡದಲ್ಲಿ ಕೆಲಸ ಮಾಡುವುದರಿಂದ ಕ್ರೀಡಾಕೂಟದಲ್ಲಿ ಭಾಗವಹಿಸಿದರೆ ಮಾನಸಿಕ ಹಾಗೂ ದೈಹಿಕವಾಗಿ ಸದೃಢರಾಗಬಹುದು ಎಂದರು.

    ವಾಲಿಬಾಲ್, ಕಬಡ್ಡಿ, ಕ್ರಿಕೆಟ್, ಶೆಟಲ್ ಬ್ಯಾಡ್ಮಿಂಟನ್, ಕೇರಂ, ಚೆಸ್, ಉದ್ದ ಜಿಗಿತ, ಓಟ, ಜಾವಲಿನ್ ಎಸೆತ, ಕರ್ನಾಟಕ ಸಂಗೀತ, ಜನಪದ ಗೀತೆ, ನ್ಯತ್ಯ, ನಾಟಕ ಸೇರಿದಂತೆ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಭಾಗವಹಿಸಿದ್ದರು.

    ತಹಸೀಲ್ದಾರ್ ಕೆ.ಎಸ್.ಸೋಮಶೇಖರ್ ಕ್ರೀಡಾಜ್ಯೋತಿ ಸ್ವೀಕಾರ ಮಾಡಿದರು. ಸಮಾಜ ಸೇವಕ ವೆಂಕಟರಮಣಗೌಡ (ಸ್ಟಾರ್‌ಚಂದ್ರು), ಸರ್ಕಾರಿ ನೌಕರರ ಸಂಘದ ತಾಲೂಕು ಅಧ್ಯಕ್ಷ ರವಿಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕದಲೂರು ರಾಮಕೃಷ್ಣ, ತಾಪಂ ಮಾಜಿ ಸದಸ್ಯ ಸಿ.ಚಲುವರಾಜು, ಬಿಇಒ ಸಿ.ಎಚ್.ಕಾಳೀರಯ್ಯ, ತಾಲೂಕು ಆರೋಗ್ಯಾಧಿಕಾರಿ ರವೀಂದ್ರ ಬಿ.ಗೌಡ, ತಾಲೂಕು ಮಟ್ಟದ ಅಧಿಕಾರಿಗಳಾದ ಪ್ರವೀಣ್‌ಕುಮಾರ್, ಪರಮೇಶ್ವರ, ರೇಖಾ, ಮಂಗಳಗೌರಮ್, ಕ್ಷೇತ್ರ ಸಮನ್ವಯಾಧಿಕಾರಿ ಹನುಮಶೆಟ್ಟಿ, ಮಾಜಿ ಸೈನಿಕ ಸಿಪಾಯಿ ಶ್ರೀನಿವಾಸ್ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts