More

    ವಿಶೇಷ ದಾಖಲೆ ಬರೆದ ಕೆಎಲ್ ರಾಹುಲ್, ಅಭಿಮಾನಿಗಳಿಗೆ ಧನ್ಯವಾದ

    ಬೆಂಗಳೂರು: ಸೀಮಿತ ಓವರ್ ಕ್ರಿಕೆಟ್‌ನಲ್ಲಿ ಟೀಮ್ ಇಂಡಿಯಾದ ಪ್ರಮುಖ ಆಟಗಾರರಾಗಿ ಮಿಂಚುತ್ತಿರುವ ಕನ್ನಡಿಗ ಕೆಎಲ್ ರಾಹುಲ್ ಮಂಗಳವಾರ ವಿಶೇಷ ದಾಖಲೆಯೊಂದನ್ನು ಬರೆದಿದ್ದಾರೆ. ಅದರ ಬೆನ್ನಲ್ಲೇ ಅವರು ಅಭಿಮಾನಿಗಳಿಗೆ ಧನ್ಯವಾದ ತಿಳಿಸಿದ್ದಾರೆ.

    2014ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಪದಾರ್ಪಣೆ ಮಾಡಿದ್ದ ಕೆಎಲ್ ರಾಹುಲ್ ಅವರು ಈಗ ಸಾಮಾಜಿಕ ಜಾಲತಾಣ ಟ್ವಿಟರ್‌ನಲ್ಲಿ 50 ಲಕ್ಷ ಹಿಂಬಾಲಕರನ್ನು ಸಂಪಾದಿಸಿದ ಸಾಧನೆ ಮಾಡಿದ್ದಾರೆ. ಆಸ್ಟ್ರೇಲಿಯಾ ಪ್ರವಾಸದ ಟಿ20, ಏಕದಿನ ಸರಣಿಯಲ್ಲಿ ಉಪನಾಯಕರಾಗಿಯೂ ಕಾರ್ಯನಿರ್ವಹಿಸಿರುವ ಕೆಎಲ್ ರಾಹುಲ್ ಇದೀಗ ಅಭಿಮಾನಿಗಳ ಪ್ರೀತಿಯನ್ನು ಹೆಚ್ಚು ಹೆಚ್ಚು ಸಂಪಾದಿಸುತ್ತಿರುವುದು ಇದರಿಂದ ಸ್ಪಷ್ಟವಾಗಿದೆ.

    ‘ನಿಮ್ಮ ಬೆಂಬಲದಿಂದಾಗಿ ನನ್ನ ಈ ಪ್ರಯಾಣ ವಿಶೇಷವಾಗಿದೆ. ನನ್ನ ಏಳು-ಬೀಳುಗಳಲ್ಲಿ ನೀವು ಯಾವಾಗಲೂ ಜತೆಗಿದ್ದಿರಿ. ನಿಮ್ಮ ಪ್ರೀತಿಗೆ ನಾನು ಋಣಿಯಾಗಿರುತ್ತೇನೆ. ಧನ್ಯವಾದಗಳು’ ಎಂದು ಕೆಎಲ್ ರಾಹುಲ್ ಟ್ವಿಟರ್‌ನಲ್ಲಿ ಹಿಂಬಾಲಕರ ಸಂಖ್ಯೆ 50 ಲಕ್ಷ ದಾಟಿದ ಬೆನ್ನಲ್ಲೇ ಟ್ವೀಟ್ ಮಾಡಿದ್ದಾರೆ.

    ಸೀಮಿತ ಓವರ್ ಕ್ರಿಕೆಟ್‌ನಲ್ಲಿ ವಿಕೆಟ್ ಕೀಪರ್ ಆಗಿಯೂ ಕಾರ್ಯನಿರ್ವಹಿಸುವ ಮೂಲಕ ಟೀಮ್ ಇಂಡಿಯಾಗೆ ಸಮತೋಲನ ತಂದಿರುವ ರಾಹುಲ್, ಭಾರತ ಪರ ಇದುವರೆಗೆ 36 ಟೆಸ್ಟ್, 35 ಏಕದಿನ ಮತ್ತು 45 ಟಿ20 ಪಂದ್ಯಗಳನ್ನು ಆಡಿದ್ದಾರೆ. ಕಳೆದ ಐಪಿಎಲ್‌ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ನಾಯಕರಾಗಿದ್ದ ಅವರು, ಟೂರ್ನಿಯಲ್ಲಿ ಗರಿಷ್ಠ ರನ್ ಸಿಡಿಸಿ ಆರೆಂಜ್ ಕ್ಯಾಪ್ ಕೂಡ ಜಯಿಸಿದ್ದರು.

    ಮಹಿಳೆಯರ ಕ್ರಿಕೆಟ್ ವಿಶ್ವಕಪ್ ವೇಳಾಪಟ್ಟಿ ಪ್ರಕಟ, ಭಾರತಕ್ಕೆ ಮೊದಲ ಎದುರಾಳಿ ಯಾರು ಗೊತ್ತಾ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts