ಅಧ್ಯಕ್ಷರಾಗಿ ಮಾದೇಶ್, ಉಪಾಧ್ಯಕ್ಷರಾಗಿ ಬಸವಣ್ಣ ಆಯ್ಕೆ

MADESH
Published on

ಹನೂರು: ವಿಧಾನಸಭಾ ಕ್ಷೇತ್ರದ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಗುಂಡಾಪುರ ಮಾದೇಶ್, ಉಪಾಧ್ಯಕ್ಷರಾಗಿ ಬಂಡಳ್ಳಿ ಬಸವಣ್ಣ ಆಯ್ಕೆಯಾಗಿದ್ದಾರೆ.

ಕಳೆದ ಅಕ್ಟೋಬರ್ ತಿಂಗಳಲ್ಲಿ ಯೂತ್ ಘಟಕದ ಪದಾಧಿಕಾರಿಗಳ ಆಯ್ಕೆಗೆ ಆನ್‌ಲೈನ್ ಮೂಲಕ ಚುನಾವಣೆ ನಡೆಸಲಾಗಿತ್ತು. ಅಧ್ಯಕ್ಷ ಸ್ಥಾನಕ್ಕೆ ಗುಂಡಾಪುರ ಮಾದೇಶ್ ಹಾಗೂ ಬಂಡಳ್ಳಿ ಬಸವಣ್ಣ ಅವರು ಸ್ಪರ್ಧಿಸಿದ್ದರು. ಚುನಾವಣೆಯಲ್ಲಿ ಮಾದೇಶ್ 6,685 ಮತಗಳನ್ನು ಪಡೆದು ಅಧ್ಯಕ್ಷರಾಗಿ ಆಯ್ಕೆಯಾದರೆ, 393 ಮತಗಳನ್ನು ಪಡೆದ ಬಸವಣ್ಣ ಉಪಾಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ.

ಹನೂರು ಬ್ಲಾಕ್ ಯೂತ್ ಕಾಂಗ್ರೆಸ್ ಅಧ್ಯಕ್ಷರಾಗಿ ಸಂಜಯ್, ಉಪಾಧ್ಯಕ್ಷರಾಗಿ ಭಾನುಪ್ರಕಾಶ್, ರಾಮಾಪುರ ಬ್ಲಾಕ್ ಯುವ ಕಾಂಗ್ರೆಸ್ ಅಧ್ಯಕ್ಷರಾಗಿ ಮಲೆಮಹದೇಶ್ವರ ಬೆಟ್ಟದ ರಮೇಶ್ ಹಾಗೂ ಉಪಾಧ್ಯಕ್ಷರಾಗಿ ಕೌದಳ್ಳಿಯ ಯೂನಸ್ ಆಯ್ಕೆಯಾಗಿದ್ದಾರೆ.

ಈ ಸಂಬಂಧ ನೂತನ ಅಧ್ಯಕ್ಷ ಗುಂಡಾಪುರ ಮಾದೇಶ್ ವಿಜಯವಾಣಿಯೊಂದಿಗೆ ಮಾತನಾಡಿ, ಯಾವುದೇ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳು ಜಯಗಳಿಸಬೇಕಾದರೆ ಯುವಕರ ಪಾತ್ರ ಮುಖ್ಯ. ಪಕ್ಷ ಸಂಘಟನೆಯಲ್ಲಿ ತೊಡಗಿದ್ದ ನನ್ನನ್ನು ಹೆಚ್ಚು ಮತಗಳ ಅಂತರದಿಂದ ಗೆಲ್ಲಿಸಿರುವುದಕ್ಕೆ ಕೃತಜ್ಞತೆ ಸಲ್ಲಿಸುತ್ತೇನೆ. ಹಾಗೆಯೇ ಮಾಜಿ ಶಾಸಕ ಆರ್.ನರೇಂದ್ರ ಅವರ ಮಾರ್ಗದರ್ಶನದಲ್ಲಿ ಎಲ್ಲರ ಸಹಕಾರ ಪಡೆದು ಮುಂದಿನ ದಿನಗಳಲ್ಲಿ ಪಕ್ಷ ಸಂಘಟನೆಗೆ ಇನ್ನಷ್ಟು ಹೆಚ್ಚು ಒತ್ತು ನೀಡಲಾಗುವುದು. ಮುಂಬರುವ ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಲಾಗುವುದು ಎಂದು ತಿಳಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net