17 C
Bangalore
Monday, December 9, 2019

ಏಳು ಆರೋಪಿಗಳ ಬಂಧನ

Latest News

ಉಪಚುನಾವಣೆ ಫಲಿತಾಂಶ ರಾಜ್ಯ ರಾಜಕೀಯದಲ್ಲಿ ಅಸ್ಥಿರತೆಗೆ ಅಂತ್ಯ ಹಾಡುತ್ತಾ?

ಬೆಂಗಳೂರು: ಕಳೆದ ಆರು ತಿಂಗಳಿನಿಂದ ರಾಜ್ಯದಲ್ಲಿದ್ದ ರಾಜಕೀಯ ಅಸ್ಥಿರತೆಯ ಗ್ರಹಣ ಸೋಮವಾರ ಬಿಡುಗಡೆಯಾಗುವ ನಿರೀಕ್ಷೆ ಇದೆ. ಉಪಚುನಾವಣೆಯ ಮತದಾನೋತ್ತರ ಸಮೀಕ್ಷೆಗಳಂತೆಯೇ ಜನಾಭಿಪ್ರಾಯ ರೂಪುಗೊಂಡಿದ್ದರೆ, ಬಿಜೆಪಿ...

ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ಮಾಣ

ಹುಬ್ಬಳ್ಳಿ: ಇಲ್ಲಿಯ ಬಿಡ್ನಾಳ ಮುಖ್ಯ ರಸ್ತೆಯಲ್ಲಿ 1 ಕೋಟಿ ರೂ. ವೆಚ್ಚದಲ್ಲಿ ಗಟಾರ ನಿರ್ವಿುಸಲಾಗುವುದು ಎಂದು ಶಾಸಕ ಪ್ರಸಾದ ಅಬ್ಬಯ್ಯ ಹೇಳಿದರು.

ನೀರು ಇರುವುದೇ ಪೋಲು ಮಾಡಲು!

ಹುಬ್ಬಳ್ಳಿ: ಜಲ ಮಂಡಳಿ ತಾನೇ ಹೊಸ ನಿಯಮವೊಂದನ್ನು ಕಂಡುಕೊಂಡಿದೆ. ಅದೇನು ಎನ್ನುವ ಆಶ್ಚರ್ಯವೇ? ನೀರು ಇರುವುದೇ ಪೋಲು ಮಾಡಲು ಎನ್ನುವುದು!

ಈಜಿಪ್ತ್ ಈರುಳ್ಳಿ ಕೊಳ್ಳುವವರೇ ಇಲ್ಲ

ಹುಬ್ಬಳ್ಳಿ: ಇಲ್ಲಿಗೆ ತರಿಸಲಾಗಿದ್ದ ಈಜಿಪ್ತ್ ಈರುಳ್ಳಿಗೆ ಖರೀದಿದಾರರು ಟೆಂಡರ್ ಹಾಕಿಲ್ಲ. ಹೀಗಾಗಿ, ಈಜಿಪ್ತ್ ಈರುಳ್ಳಿಯನ್ನು ಬೇರೆ ಮಾರುಕಟ್ಟೆಗೆ ಕೊಂಡೊಯ್ಯಲಾಗಿದೆ.

ನಿರಾಶೆ ಭಾವ ತಗ್ಗಿಸಿದ ತೃಪ್ತಿ

ಕಲಘಟಗಿ: ಹಳ್ಳಿಗಳ ನಿರುದ್ಯೋಗಿ ಯುವ ಸಮೂಹದಲ್ಲಿ ವಿದ್ಯಾವಂತ ರಾಗಿಯೂ ಉದ್ಯೋಗವಿಲ್ಲ ಎಂಬ ನಿರಾಶೆ ಭಾವನೆಯನ್ನು ಕಿಂಚಿತ್ತಾದರೂ ತಗ್ಗಿಸಿದ ಆತ್ಮತೃಪ್ತಿ ಇದೆ ಎಂದು ಶಾಸಕ...

<<ಕುತ್ತಾರು ಮದನಿ ನಗರದಲ್ಲಿ ಹಿಂಸಾಚಾರ ಪ್ರಕರಣ>>

ವಿಜಯವಾಣಿ ಸುದ್ದಿಜಾಲ ಉಳ್ಳಾಲ/ಮಂಗಳೂರು
ಕುತ್ತಾರ್ ಸಮೀಪ ಮದನಿ ನಗರದಲ್ಲಿ ಶನಿವಾರ ರಾತ್ರಿ ನಡೆದ ಕಲ್ಲು ತೂರಾಟ, ವಾಹನಗಳಿಗೆ ಹಾನಿ ಹಾಗೂ ಮಹಿಳೆಯರ ಮೇಲೆ ನಡೆದ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿ ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ಇಬ್ಬರು ಬಾಲಕರ ಸಹಿತ ಏಳು ಮಂದಿಯನ್ನು ಬಂಧಿಸಿದ್ದಾರೆ.
ಕುಪ್ಪೆಪದವು ಕಿಲಿಂಜೂರು ನಿವಾಸಿ ಸಲ್ಮಾನ್ ಫಾರಿಷ್(21), ಜೆಪ್ಪು ಎಂ.ಆರ್ ಭಟ್ ಲೇನ್‌ನ ಮಹಮ್ಮದ್ ಸಿನಾನ್(19), ಜೆಪ್ಪು ಮಹಾಂಕಾಳಿಪಡ್ಪುವಿನ ಮಹಮ್ಮದ್ ಅರ್ಫಾಝ್(27), ಮದನಿನಗರ ಶಾಂತಿಬಾಗ್‌ನ ನೌಫಾಲ್ ಯಾನೆ ಕಿಡ್ನಿ ನೌಫಾಲ್(20), ಅಡ್ಯಾರು ಕೆಂಪುಗುಡ್ಡೆ ಕಣ್ಣೂರಿನ ಮಹಮ್ಮದ್ ರಫೀಜ್ ಯಾನೆ ಅಫ್ರೀದ್(20) ಹಾಗೂ ಇಬ್ಬರು ಬಾಲಕರು ಬಂಧಿತರು. ಘಟನೆ ನಡೆದ ಪರಿಸರದಲ್ಲಿದ್ದ ಸಿಸಿ ಕ್ಯಾಮರಾ ದೃಶ್ಯಾವಳಿಗಳನ್ನು ಪರಿಶೀಲಿಸಿ ನಾಲ್ವರು ಆರೋಪಿಗಳನ್ನು ಘಟನೆ ನಡೆದ ಎರಡು ಗಂಟೆಯೊಳಗೆ ಬಂಧಿಸಲಾಗಿದೆ. ಅವರು ನೀಡಿದ ಮಾಹಿತಿ ಮೇರೆಗೆ ಭಾನುವಾರ ಬೆಳಗಾಗುವುದರ ಒಳಗಾಗಿ ಒಟ್ಟು 7 ಮಂದಿಯನ್ನು ಬಂಧಿಸಲಾಗಿದೆ. ಇನ್ನಷ್ಟು ಮಂದಿ ಬಂಧನವಾಗಲಿದ್ದಾರೆ ಎಂದು ಪೊಲೀಸ್ ಆಯುಕ್ತ ಸಂದೀಪ್ ಪಾಟೀಲ್ ತಿಳಿಸಿದ್ದಾರೆ.

ಘಟನೆ ಹಿನ್ನೆಲೆ: ಮಂಗಳೂರಿನಲ್ಲಿ ನಡೆದ ಪ್ರಧಾನಿ ನರೇಂದ್ರ ಮೋದಿ ರ‌್ಯಾಲಿಯಲ್ಲಿ ಭಾಗವಹಿಸಿ ಮರಳುತ್ತಿದ್ದ ವಾಹನಗಳಿಗೆ ಮದನಿ ನಗರದಲ್ಲಿ ದುಷ್ಕರ್ಮಿಗಳು ಕಲ್ಲು ತೂರಾಟ ನಡೆಸಿದ್ದರು. ಎರಡು ಬಸ್, ಕಾರುಗಳಿಗೆ ಹಾನಿ ಉಂಟಾಗಿತ್ತು. ಸಾವಿರಾರು ಮಂದಿ ಬಿಜೆಪಿ ಕಾರ್ಯಕರ್ತರು ತಡರಾತ್ರಿ ತನಕ ಕೊಣಾಜೆ ಪೊಲೀಸ್ ಠಾಣೆಯಲ್ಲಿ ಪ್ರತಿಭಟನೆ ನಡೆಸಿದ್ದರು. ನಗರ ಪೊಲೀಸ್ ಆಯುಕ್ತರು ಸ್ಥಳಕ್ಕೆ ಬಂದು ನ್ಯಾಯ ಒದಗಿಸುವ ಭರವಸೆ ನೀಡಿದ ಬಳಿಕ ಕಾರ್ಯಕರ್ತರು ತೆರಳಿದ್ದರು. ಘಟನೆಯಲ್ಲಿ ಮಹಿಳೆ ಸಹಿತ ಐವರು ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದ್ದವರು ಚಿಕಿತ್ಸೆ ಪಡೆದು ಬಿಡುಗಡೆಯಾಗಿದ್ದಾರೆ.

ಸ್ಪಷ್ಟ ಕಾರಣ ಇನ್ನೂ ನಿಗೂಢ!: ಶನಿವಾರ ನಡೆದ ಗಲಭೆಗೆ ಸ್ಪಷ್ಟ ಕಾರಣ ಏನು ಎನ್ನುವುದು ಇನ್ನೂ ನಿಗೂಢವಾಗಿದೆ. ಒಂದು ಮೂಲಗಳ ಪ್ರಕಾರ ಮದನಿ ನಗರದಲ್ಲಿ ಮುಸ್ಲಿಂ ಮಹಿಳೆಯರು ಸಂಚರಿಸುತ್ತಿದ್ದ ಸ್ಕೂಟರ್‌ಗೆ ಕಾರು ಡಿಕ್ಕಿ ಹೊಡೆದಿದ್ದು, ಈ ಸಂದರ್ಭ ಇನ್ನೊಂದು ಕಾರಿನಲ್ಲಿ ಬಂದವರು ಡಿಕ್ಕಿ ಹೊಡೆದ ಕಾರಿನಲ್ಲಿದ್ದವರಿಗೆ ಹಲ್ಲೆ ನಡೆಸಿದ್ದರು. ಈ ಸಂದರ್ಭ ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿ ಹಿಂದಿರುಗುತ್ತಿದ್ದವರು ಹಲ್ಲೆಗೊಳಗಾದವರ ಪರ ನಿಂತಾದ ಸ್ಥಳೀಯ ಆರೋಪಿಗಳು ಬಸ್ಸಿನೊಳಗೆ ನುಗ್ಗಿ ದಾಂಧಲೆ ನಡೆಸಿದ್ದಾರೆ ಎನ್ನಲಾಗಿದೆ.
ಮತ್ತೊಂದು ಮೂಲಗಳ ಪ್ರಕಾರ ಮಂಗಳೂರಿನಿಂದ ಕೊಣಾಜೆಯತ್ತ ಹೋಗುತ್ತಿದ್ದ ಕಾರು ಹಾಗೂ ಜಪ್ಪು ನಿವಾಸಿಗಳಿದ್ದ ಕಾರು ಓವರ್‌ಟೇಕ್ ಮಾಡುವ ವಿಚಾರವಾಗಿ ಇತ್ತಂಡಗಳ ಮಧ್ಯೆ ನೇತ್ರಾವತಿ ಸೇತುವೆ ಬಳಿಯಿಂದಲೇ ವಾಗ್ವಾದ ನಡೆಸುತ್ತಾ ಬಂದಿದ್ದು, ಮದನಿ ನಗರದಲ್ಲಿ ಹೊಡೆದಾಡಿದ್ದರು. ಇದನ್ನು ಗಮನಿಸಿದ ಮೋದಿ ರ‌್ಯಾಲಿಯಿಂದ ವಾಪಾಸಾಗುತ್ತಿದ್ದ ಬಸ್ಸಿನಲ್ಲಿದ್ದ ಯುವಕರ ತಂಡ ತಡೆಯಲು ಯತ್ನಿಸಿದ್ದು, ಆ ಸಂದರ್ಭ ಸ್ಥಳದಲ್ಲಿದ್ದ ಗುಂಪು ಬಸ್, ಕಾರಿಗೆ ಕಲ್ಲು ತೂರಾಟ ನಡೆಸಿ ಮಹಿಳೆಯರ ಮೇಲೆ ದಾಂಧಲೆ ನಡೆಸಿದೆ ಎನ್ನಲಾಗುತ್ತಿದ್ದರೂ ಘಟನೆಗೆ ಸ್ಪಷ್ಟ ಕಾರಣ ಯಾರಿಗೂ ಗೊತ್ತಿಲ್ಲ.

50ಕ್ಕೂ ಹೆಚ್ಚು ಮಂದಿ ವಿರುದ್ಧ ಪ್ರಕರಣ: ಮೂವರು ಯುವಕರು ಸೇರಿದಂತೆ 16 ಮಂದಿ ಮಹಿಳೆಯರ ತಂಡ ನೀಡಿದ ದೂರಿನ ಹಿನ್ನೆಯಲ್ಲಿ ಉಳ್ಳಾಲ ಠಾಣೆಯಲ್ಲಿ ಬಂಧಿತ ಏಳು ಆರೋಪಿಗಳ ಸಹಿತ 50ಕ್ಕೂ ಹೆಚ್ಚು ಮಂದಿಯ ವಿರುದ್ಧ ಬಸ್ಸಿನ ಒಳಗೆ ನುಗ್ಗಿ ದಾಂಧಲೆ, ಕಲ್ಲು ತೂರಾಟ, ಭಯದ ವಾತಾವರಣ ಸೃಷ್ಟಿ, ಕೊಲೆ ಯತ್ನ, ಮಾನಭಂಗ ಯತ್ನ ಕಾಯ್ದೆಗಳಡಿ ಪ್ರಕರಣ ದಾಖಲಾಗಿದೆ. ತಲೆಮರೆಸಿಕೊಂಡಿರುವ ಆರೋಪಿಗಳಿಗೆ ಪೊಲೀಸರು ಶೋಧ ಕಾರ್ಯ ಮುಂದುವರೆಸಿದ್ದಾರೆ.

ಹೆಚ್ಚುವರಿ ಪೊಲೀಸರ ನಿಯೋಜನೆ: ಘಟನೆ ನಡೆದ ಬಳಿಕ ಈ ಪ್ರದೇಶದಲ್ಲಿ ಬಿಗು ಬಂದೋಬಸ್ತ್ ಏರ್ಪಡಿಸಲಾಗಿದೆ. ಹಿಂದಿನಿಂದಲೂ ಮದನಿ ನಗರ ಕೋಮು ಸೂಕ್ಷ್ಮ ಪ್ರದೇಶ ಎನ್ನುವ ಕುಖ್ಯಾತಿಗೆ ಒಳಗಾಗಿದ್ದು, ಈ ಪ್ರದೇಶದ ಆಸು ಪಾಸಿನಲ್ಲಿ ಸಣ್ಣ, ಪುಟ್ಟ ಕಾರ್ಯಕ್ರಮಗಳಿದ್ದರೂ ಬಿಗು ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗುತ್ತದೆ. ಆದರೆ ಶನಿವಾರ ಇತರ ಭಾಗದಲ್ಲಿ ಬಂದೋಬಸ್ತ್ ಇದ್ದರೂ ಮದನಿ ನಗರದಲ್ಲಿ ಓರ್ವ ಪೊಲೀಸ್ ಮಾತ್ರ ಇದ್ದರು. ಈ ಪ್ರದೇಶ ಕೆಲವು ಸಮಯಗಳಿಂದ ಶಾಂತವಾಗಿದ್ದರಿಂದ ಪೊಲೀಸ್ ಇಲಾಖೆ ಹೆಚ್ಚಿನ ಬಂದೋಬಸ್ತ್ ಮಾಡಿರಲಿಲ್ಲ ಎನ್ನಲಾಗಿದೆ. ಇದೇ ಸಂದರ್ಭ ಅನಾಹುತ ನಡೆದಿದೆ. ಈ ಹಿನ್ನೆಲೆಯಲ್ಲಿ ಭಾನುವಾರ ಮೂವರು ಇನ್ಸ್‌ಪ್ಟೆಕ್ಟರ್‌ಗಳು, ಮೂರು ಪಿಸಿಆರ್ ವಾಹನಗಳು, ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ.

ಅಹಿತಕರ ಘಟನೆಯಿಂದ ಪೊಲೀಸ್ ಇಲಾಖೆ ಅಲರ್ಟ್ ಆಗಿದ್ದು, ಸೂಕ್ಷ್ಮ ಪ್ರದೇಶಗಳಲ್ಲಿ ಹೆಚ್ಚುವರಿ ಪೊಲೀಸರನ್ನು ನಿಯೋಜಿಸಲಾಗಿದೆ. ರಾತ್ರಿ ಗಸ್ತು ಹೆಚ್ಚಿಸಲಾಗಿದೆ. ಕಾನೂನು ಕೈಗೆತ್ತಿಕೊಂಡವರನ್ನು, ಸಾಮಾಜಿಕ ಸ್ವಾಸ್ಥೃ ಹದಗೆಡುವವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪ್ರಕರಣದ ವಿಚಾರಣೆ ನಡೆಯುತ್ತಿದ್ದು, ಘಟನೆಗೆ ಸ್ಪಷ್ಟ ಕಾರಣ ತಿಳಿದು ಬರಬೇಕಿದೆ.
ಸಂದೀಪ್ ಪಾಟೀಲ್, ಪೊಲೀಸ್ ಆಯುಕ್ತ, ಮಂಗಳೂರು ನಗರ

ಪೂರ್ವಯೋಜಿತ ಕೃತ್ಯ ಆರೋಪ

ಮೋದಿ ಕಾರ್ಯಕ್ರಮದಲ್ಲಿ ಭಾಗವಹಿಸಿದ ಕಾರ್ಯಕರ್ತರು ಹಿಂದಿರುಗುವ ಸಂದರ್ಭ ಮದನಿ ನಗರದಲ್ಲಿ ನಡೆದಿರುವ ಘಟನೆ ಪೂರ್ವಯೋಜಿತ ಎಂದು ಬಿಜೆಪಿ ಕ್ಷೇತ್ರಾಧ್ಯಕ್ಷ ಸಂತೋಷ್ ರೈ ಬೋಳಿಯಾರ್ ಆರೋಪಿಸಿದರು.
ತೊಕ್ಕೊಟ್ಟಿನ ಬಿಜೆಪಿ ಚುನಾವಣಾ ಕಚೇರಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದ ಅವರು, ಮೋದಿ ಆಗಮನದಿಂದ ಬಿಜೆಪಿಯ ಶಕ್ತಿ ಏನೆಂಬುದು ಜನರಿಗೆ ಗೊತ್ತಾಗಿದೆ. ಮದನಿ ನಗರದಲ್ಲಿ ನಡೆದ ಘಟನೆ ಹತಾಶರಾಗಿರುವ ಕಾಂಗ್ರೆಸ್ ಕೃತ್ಯ. ಕ್ಷುಲ್ಲಕ ವಿಚಾರಕ್ಕೆ ಮಹಿಳೆಯರು, ಮಕ್ಕಳ ಮೇಲೆಯೂ ದೌರ್ಜನ್ಯ ನಡೆದಿದೆ. ಇಂತಹ ಹೇಯ ಕೃತ್ಯಕ್ಕೆ ಕೈಹಾಕಬಾರದಿತ್ತು ಎಂದು ಖೇದ ವ್ಯಕ್ತಪಡಿಸಿದರು.
ಬಗಂಬಿಲದಲ್ಲಿ ರೋಡ್ ಶೋ ನಡೆಸುತ್ತಿದ್ದ ಕಾಂಗ್ರೆಸ್ ಕಾರ್ಯಕರ್ತರು ಮದನಿ ನಗರಕ್ಕೆ ಬಂದು ಈ ಕೃತ್ಯ ನಡೆಸಿದ್ದಾರೆ. ಸಮುದಾಯದ ಒಂದು ಭಾಗ ಕಾಂಗ್ರೆಸ್ ಬಿಟ್ಟು ಮತ್ತೊಂದು ಕಡೆ ಹೋಗುವುದನ್ನು ತಡೆಯಲು ಇಂತಹ ಕೃತ್ಯ ನಡೆಸಿ ಮತ್ತೆ ತನ್ನತ್ತ ಸೆಳೆಯುವ ಪ್ರಯತ್ನ ನಡೆಸಲಾಗಿದೆ. ಮದನಿನಗರ ಅತ್ಯಂತ ಸೂಕ್ಷ್ಮ ಪ್ರದೇಶ ಎಂದು ಗೊತ್ತಿದ್ದರೂ ಸೂಕ್ತ ಬಂದೋಬಸ್ತ್ ಮಾಡದಿರುವುದು ಇದಕ್ಕೆ ಕಾರಣ. ಆರೋಪಿಗಳಿಗೆ ಸೂಕ್ತ ಶಿಕ್ಷೆ ಆಗಬೇಕು. ಈ ವಿಚಾರದಲ್ಲಿ ಯಾವುದೇ ಒತ್ತಡಕ್ಕೂ ಪೊಲೀಸ್ ಇಲಾಖೆ ಮಣಿಯಬಾರದು ಎಂದು ಒತ್ತಾಯಿಸಿದರು.
ಮುಖಂಡರಾದ ಕ್ಯಾ.ಗಣೇಶ್ ಕಾರ್ಣಿಕ್, ಕೆ.ಜಯರಾಮ ಶೆಟ್ಟಿ, ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು, ಚಂದ್ರಹಾಸ ಉಳ್ಳಾಲ್, ಮೋಹನ್ ರಾಜ್, ನಮಿತಾ ಶ್ಯಾಮ್, ಮನೋಜ್ ಆಚಾರ್ಯ, ರಾಜೀವಿ ಕೆಂಪುಮಣ್ಣು, ಸಂಜೀವ ಶೆಟ್ಟಿ ಅಂಬ್ಲಮೊಗರು, ಜೀವನ್ ತೊಕ್ಕೊಟ್ಟು ಉಪಸ್ಥಿತರಿದ್ದರು.

ಭಯದ ವಾತಾವರಣ ಸೃಷ್ಟಿ, ವಿಹಿಂಪ ಮುಖಂಡರ ಹೇಳಿಕೆ
ಮದನಿ ನಗರದಲ್ಲಿ ಶನಿವಾರ ರಾತ್ರಿ ಸಣ್ಣ ಯುವಕರು ದೊಣ್ಣೆ ಹಿಡಿದು ಹೊಡೆಯಲು ಬಂದಿರುವಂತಹ ಆಘಾತಕಾರಿ ಘಟನೆಯಿಂದ ಆ ಭಾಗದ ಹಿಂದುಗಳಲ್ಲಿ ಭಯದ ವಾತಾವರಣ ಸೃಷ್ಟಿಯಾಗಿದೆ ಎಂದು ವಿಶ್ವ ಹಿಂದು ಪರಿಷತ್ ವಿಭಾಗ ಕಾರ್ಯದರ್ಶಿ ಶರಣ್ ಪಂಪ್‌ವೆಲ್ ಹೇಳಿದರು.
ತೊಕ್ಕೊಟ್ಟು ಕಾಪಿಕಾಡಿನ ಬಿಜೆಪಿ ಚುನಾವಣಾ ಕಾರ್ಯಾಲಯ ಕಟ್ಟಡದಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಈ ವಿಷಯ ತಿಳಿಸಿದ ಅವರು, ಮಂಗಳೂರಿನಿಂದ ಮನೆಗೆ ಮರಳುತ್ತಿದ್ದವರ ಮೇಲೆ ಕ್ಷುಲ್ಲಕ ವಿಷಯಕ್ಕೆ ಯುವಕರ ಗುಂಪು ಬಸ್ ತಡೆದು ಗಾಜು ಒಡೆದು, ಮಕ್ಕಳು, ಮಹಿಳೆಯರು, ಯುವಕರ ಮೇಲೆ ಹಲ್ಲೆ ನಡೆಸಿದ್ದಾರೆ. ಮಹಿಳೆಯರ ಮೇಲೆ ನಡೆದ ದೌರ್ಜನ್ಯ, ಬಸ್ ನಿಲ್ಲಿಸಿ ಹೊಡೆಯುವ ಧೈರ್ಯದ ಹಿಂದೆ ಕ್ಷೇತ್ರದ ಶಾಸಕರ ಷಡ್ಯಂತ್ರವಿದೆ. ಉಳ್ಳಾಲ ಭಾಗದಲ್ಲಿ ಆಗಾಗ ಇಂತಹ ಘಟನೆಗಳು ಮರುಕಳಿಸುತ್ತಿರುವುದರಿಂದ ಹಿಂದುಗಳು ಎಚ್ಚೆತ್ತುಕೊಳ್ಳಬೇಕಿದೆ. ಉಳ್ಳಾಲ ಭಾಗದಲ್ಲಿ ನಡೆಯುತ್ತಿರುವ ಘಟನೆಗಳಿಗೆ ಮುಸ್ಲಿಂ ಓಟ್‌ಬ್ಯಾಂಕ್ ರಾಜಕೀಯ ಕಾರಣ ಎಂದರು.

ಪೊಲೀಸರ ಕಾರ್ಯ ಶ್ಲಾಘನೀಯ: ಘಟನೆ ಬಳಿಕ ಪೊಲೀಸ್ ಇಲಾಖೆ ಕೈಗೊಂಡ ಕಾರ್ಯ ಶ್ಲಾಘನೀಯ. ಪ್ರತಿಭಟನೆ ಸಂದರ್ಭ ಪೊಲೀಸರು ನುಡಿದಂತೆ ಏಳು ಮಂದಿ ಆರೋಪಿಗಳನ್ನು ಬಂಧಿಸಿ, ಕೃತ್ಯಕ್ಕೆ ಬಳಸಿದ ಕಾರು ವಶಕ್ಕೆ ಪಡೆದುಕೊಂಡಿದ್ದಾರೆ. ಸುತ್ತಮುತ್ತಲಿನ ಪರಿಸರದಲ್ಲಿ ಗಾಂಜಾ, ಡ್ರಗ್ಸ್ ಮಾಫಿಯಾ ಇದ್ದು ಮದನಿನಗರದ ಅಂಗಡಿಗಳ ಮೇಲೆಯೂ ಕ್ರಮ ಕೈಗೊಳ್ಳಬೇಕು. ಆ ಮೂಲಕ ಮಹಿಳೆಯರಿಗೆ ನ್ಯಾಯ ಒದಗಿಸಬೇಕಿದೆ ಎಂದು ಇಲಾಖೆಯನ್ನು ಒತ್ತಾಯಿಸಿದರು.
ವಿಶ್ವ ಹಿಂದು ಪರಿಷತ್ ಜಿಲ್ಲಾಧ್ಯಕ್ಷ ಗೋಪಾಲ ಕುತ್ತಾರ್, ಮುಖಂಡರಾದ ಹರಿದಾಸ್ ಮಾಡೂರು, ರವಿ ಅಸೈಗೋಳಿ ಹಾಗೂ ನಾರಾಯಣ ಕುಂಪಲ ಉಪಸ್ಥಿತರಿದ್ದರು.

Stay connected

278,745FansLike
583FollowersFollow
621,000SubscribersSubscribe

ವಿಡಿಯೋ ನ್ಯೂಸ್

VIDEO: ಏರ್​ಪೋರ್ಟ್​ನಲ್ಲಿ ಬ್ಯಾಗೇಜ್​ಗಳ ಸಭ್ಯ ನಡತೆ ನೋಡಿ ಮನಸೋತ ನೆಟ್ಟಿಗರು;...

ಯಾವುದಾದರೂ ಕ್ಯೂದಲ್ಲಿ ನಿಂತರೂ ನೂಕುನುಗ್ಗಲು ಮಾಡುವ ಮನುಷ್ಯರಗಿಂತ ಈ ಬ್ಯಾಗೇಜ್​ಗಳು ಸಾವಿರ ಪಾಲು ಉತ್ತಮ ! ಅರೆ, ಇದೇನು? ಮನುಷ್ಯರಿಗೂ, ಬ್ಯಾಗೇಜ್​ಗಳಿಗೂ ಎಲ್ಲಿಯ ಹೋಲಿಕೆ ಎನ್ನುತ್ತೀರಾ? ಹಾಗಾದರೆ ಈ ಸುದ್ದಿ ಓದಿ, ವಿಡಿಯೋ ನೋಡಿದರೆ...

VIDEO| ಕೇಸ್ರಿಕ್ ವಿರುದ್ಧ ಸೇಡು ತೀರಿಸಿಕೊಂಡ ಕೊಹ್ಲಿ!

ಹೈದರಾಬಾದ್: ಮೊದಲ ಟಿ20 ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್ ಮೂಲಕ ಭಾರತ ತಂಡವನ್ನು ಗೆಲ್ಲಿಸಿದ ನಾಯಕ ವಿರಾಟ್ ಕೊಹ್ಲಿ, ಹಳೆಯ ಲೆಕ್ಕವೊಂದನ್ನೂ ಚುಕ್ತಾ ಮಾಡಿದರು. ಭಾರತದ ಚೇಸಿಂಗ್ ವೇಳೆ ಇನಿಂಗ್ಸ್​ನ 16ನೇ...

VIDEO| ವಿಚಾರಣೆಗೆಂದು ನ್ಯಾಯಾಲಯಕ್ಕೆ ಕರೆತಂದಿದ್ದ ಅತ್ಯಾಚಾರ ಆರೋಪಿಯ ಮೇಲೆ ಮುಗಿಬಿದ್ದ...

ಇಂದೋರ್​: ಅಪ್ರಾಪ್ತೆ ಮೇಲಿನ ಅತ್ಯಾಚಾರ ಪ್ರಕರಣದ ಆರೋಪಿ ಮೇಲೆ ನ್ಯಾಯಾಲಯದ ಆವರಣದಲ್ಲೇ ವಕೀಲರ ಗುಂಪು ಹಲ್ಲೆ ನಡೆಸಲು ಯತ್ನಿಸಿರುವ ಘಟನೆ ಮಧ್ಯಪ್ರದೇಶದ ಇಂದೋರ್​ನಲ್ಲಿ ಶನಿವಾರ ನಡೆದಿದೆ. ಘಟನೆಗೆ ಸಂಬಂಧಿಸಿದ ವಿಡಿಯೋ ಸಾಮಾಜಿಕ...

ಸಶಸ್ತ್ರ ಪಡೆಗಳ ಧ್ವಜ ದಿನ; ಭೂ, ವಾಯು, ನೌಕಾ ಪಡೆಗಳ...

ನವದೆಹಲಿ: ಸಶಸ್ತ್ರ ಪಡೆಗಳ ಧ್ವಜ ದಿನವಾದ ಇಂದು ಪ್ರಧಾನಿ ನರೇಂದ್ರ ಮೋದಿಯವರು ಭೂ, ವಾಯು ಹಾಗೂ ನೌಕಾಪಡೆಗಳ ಸಿಬ್ಬಂದಿಗೆ ಶುಭಾಶಯ ತಿಳಿಸಿದರು. ಟ್ವೀಟ್​ ಮೂಲಕ ಶುಭ ಹಾರೈಸಿದ ಅವರು, ಸಶಸ್ತ್ರ ಪಡೆಗಳ ಧ್ವಜ ದಿನಾಚರಣೆಯ...

ಇಂದಿನ ಬಿಗ್​ಬಾಸ್ ಕನ್ನಡ ​ಶೋನಲ್ಲಿ ಕಿಚ್ಚ ಸುದೀಪ್​ ಜತೆ ಇರಲಿದ್ದಾರೆ...

ಬೆಂಗಳೂರು: ಇಂದು ಬಿಗ್​ಬಾಸ್​ನ ವಾರದ ಕತೆ ಕಿಚ್ಚ ಸುದೀಪ್​ ಜತೆ ಎಪಿಸೋಡ್​ನಲ್ಲಿ ಬಾಲಿವುಡ್​ ನಟ ಸಲ್ಮಾನ್​ ಖಾನ್​ ಕೂಡ ಜತೆಯಾಗಲಿದ್ದಾರೆ !ಇದು ಕಿರುತೆರೆ ಇತಿಹಾಸದಲ್ಲಿಯೇ ಪ್ರಥಮ ಎನ್ನಲಾಗಿದ್ದು ಸದ್ಯ ಕಲರ್ಸ್​ ಕನ್ನಡ ಬಿಡುಗಡೆ...

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...