

ಬೆಂಗಳೂರು: ರಾಜ್ಯದಲ್ಲಿ ಕರೊನಾ ಸೋಂಕಿನ ದಾಳಿ ಮುಂದುವರಿದಿದ್ದು, ರಾಜ್ಯದ ಹಲವು ನಾಯಕರಿಗೆ ಕರೊನಾ ಸೋಂಕು ದೃಢವಾಗಲಾರಂಭಿಸಿದೆ. ಶಿವಮೊಗ್ಗದ ಸೊರಬ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕ, ಕಾಂಗ್ರೆಸ್ ನಾಯಕ ಮಧು ಬಂಗಾರಪ್ಪ ಅವರಲ್ಲಿ ಇಂದು ಕರೊನಾ ಸೋಂಕು ಪತ್ತೆಯಾಗಿದೆ.
ಈ ಬಗ್ಗೆ ಮಾಹಿತಿ ನೀಡಿರುವ ಅವರು, ನನಗೆ ಸೋಂಕು ದೃಢವಾಗಿದೆ. ಕಳೆದ ಕೆಲ ದಿನಗಳಿಂದ ನನ್ನ ಜತೆ ಸಂಪರ್ಕದಲ್ಲಿದ್ದವರು ಕರೊನಾ ಪರೀಕ್ಷೆ ಮಾಡಿಸಿಕೊಳ್ಳಿ ಎಂದು ಮನವಿ ಮಾಡಿದ್ದಾರೆ.
ಮಧು ಬಂಗಾರಪ್ಪ ಅವರ ಜತೆ ಶಾಸಕ ಜಮೀರ್ ಅಹ್ಮದ್, ರಿಜ್ವಾನ್ ಅರ್ಷದ್ ಅವರಿಗೂ ಕರೊನಾ ಸೋಂಕು ದೃಢವಾಗಿದೆ. ರಾಜ್ಯದ ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೂ ಸೋಂಕು ದೃಢವಾಗಿ ಅವರು ಚಿಕಿತ್ಸೆ ಪಡೆದು ಇಂದು ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. (ಏಜೆನ್ಸೀಸ್)