More

    ಮಧು ಬಂಗಾರಪ್ಪಗೆ ಅಧಿಕಾರದ ಮದ: ಮೇಘರಾಜ್ ವಾಗ್ದಾಳಿ

    ಶಿವಮೊಗ್ಗ: ಶಿಕ್ಷಣ ಸಚಿವರೂ ಆಗಿರುವ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಕೀಳು ಅಭಿರುಚಿಯ ಶಬ್ದಗಳನ್ನು ಬಳಸಿ ಲೋಕಸಭಾ ಸದಸ್ಯ ಬಿ.ವೈ.ರಾಘವೇಂದ್ರ ಅವರನ್ನು ಟೀಕಿಸಿದ್ದಾರೆ. ಮಾಜಿ ಸಿಎಂ ಮಗ ಎಂಬ ಮಾತ್ರಕ್ಕೆ ಮನಬಂದಂತೆ ಮಾತನಾಡಬಹುದೆ? ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಪ್ರಶ್ನಿಸಿದರು.

    ಇದು ಪ್ರಜ್ಞಾವಂತರ ಜಿಲ್ಲೆ. ವೈಯಕ್ತಿಕವಾಗಿ ಟೀಕೆ ಮಾಡಬಾರದು. ರಾಜಕಾರಣಕ್ಕೆ ಒಂದು ಚೌಕಟ್ಟಿದೆ. ಅದನ್ನು ಮೀರುವುದು ಸಭ್ಯರ ಲಕ್ಷಣವಲ್ಲ. ಮಧು ಅವರಿಗೆ ಮಾತಿನ ಮೇಲೆ ಹಿಡಿತವಿಲ್ಲ. ಸಜ್ಜನಿಕೆ ಬಗ್ಗೆ ತಿಳಿದೇ ಇಲ್ಲ. ಅವರಿಗೆ ಅಧಿಕಾರದ ಮದವೇರಿದೆ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಹರಿಹಾಯ್ದರು.
    ಶಾಸಕ ಗೋಪಾಲಕೃಷ್ಣ ಬೇಳೂರು ಭಾಷಣದ ವೇಳೆ ಬಿ.ವೈ.ರಾಘವೇಂದ್ರ ಅವರನ್ನು ಬಸ್ಟಾೃಂಡ್ ರಾಘು ಎಂದು ಟೀಕಿಸಿದ್ದಾರೆ. ಹೌದು. ಅವರು ಬಸ್ಟಾೃಂಡ್ ರಾಘು, ವಿಮಾನ ನಿಲ್ದಾಣದ ರಾಘಣ್ಣ ಕೂಡಾ. ಶಾಸಕರಾದ ಬಳಿಕ ಹಿಂದಿನ ಸರ್ಕಾರ ಕ್ಷೇತ್ರದ ಅಭಿವೃದ್ಧಿಗೆ ರೂಪಿಸಿದ್ದ ಕ್ರಿಯಾ ಯೋಜನೆಯನ್ನು ಬದಲಾಯಿಸಿದ್ದಷ್ಟೇ ಬೇಳೂರು ಅವರ ಸಾಧನೆ ಎಂದು ವಾಗ್ದಾಳಿ ನಡೆಸಿದರು.
    ಬಿ.ವೈ.ರಾಘವೇಂದ್ರ ಯಾವುದೇ ಅಭಿವೃದ್ಧಿ ಮಾಡಿಲ್ಲ ಎನ್ನುವ ಕಾಂಗ್ರೆಸ್ ನಾಯಕರು ಬಹಿರಂಗ ಚರ್ಚೆಗೆ ಬರಲಿ ನಾವು ಅಂಕಿ ಅಂಶಗಳೊಂದಿಗೆ ಚರ್ಚೆಗೆ ಸಿದ್ಧರಿದ್ದೇವೆ. ಬಿವೈಆರ್ ಕೆಲಸಕ್ಕೆ ಬೇಳೂರು, ಮಧು ಪ್ರಮಾಣಪತ್ರದ ಅವಶ್ಯವಿಲ್ಲ ಎಂದರು.
    ಶರಾವತಿ ಸಂತ್ರಸ್ತರಿಗೆ ಭೂಮಿ ಹಕ್ಕು ಕೊಡಿಸುವ ನಿಟ್ಟಿನಲ್ಲಿ ಬಿಜೆಪಿ ನಾಯಕರು ಎಲ್ಲ ರೀತಿಯ ಪ್ರಯತ್ನ ಮಾಡಿದ್ದಾರೆ. ಅದಕ್ಕೂ ಹಿಂದೆ ಕಾಂಗ್ರೆಸ್ ಸರ್ಕಾರವಿದ್ದಾಗ ಯಾವುದೇ ಪ್ರಯತ್ನ ಮಾಡಲಿಲ್ಲ. ಈಗ ಬಿಜೆಪಿ ವಿರುದ್ಧ ಆರೋಪಿಸುತ್ತಿರುವ ಕಾಂಗ್ರೆಸ್ ನಾಯಕರಿಗೆ ಯಾವ ನೈತಿಕತೆಯೂ ಇಲ್ಲ ಎಂದು ಹೇಳಿದರು.
    ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ: ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ತಮ್ಮ ಪುತ್ರನಿಗೆ ಲೋಕಸಭೆ ಟಿಕೆಟ್ ಕೇಳಿದ್ದರಲ್ಲಿ ಯಾವುದೇ ತಪ್ಪಿಲ್ಲ. ಪಕ್ಷದ ಎಲ್ಲ ಕಾರ್ಯಕರ್ತರೂ ತಮ್ಮ ಭಾವನೆ ಹಂಚಿಕೊಳ್ಳಲು ಅವಕಾಶವಿದೆ. ಅವರು ಬಹಿರಂಗವಾಗಿ ಮಾತನಾಡಿದ್ದನ್ನು ಎಲ್ಲರೂ ಗಮನಿಸಿದ್ದಾರೆ. ಪಕ್ಷದ ಚೌಕಟ್ಟಿನೊಳಗೆ ಸೂಕ್ತ ಸಮಯದಲ್ಲಿ ಸೂಕ್ತ ನಿರ್ಧಾರ ತೆಗೆದುಕೊಳ್ಳಲಾಗುತ್ತದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಟಿ.ಡಿ.ಮೇಘರಾಜ್ ಹೇಳಿದರು. ನಾಮಪತ್ರ ಹಿಂಪಡೆಯುವವರೆಗೂ ಅನೇಕ ಪ್ರಕ್ರಿಯೆಗಳು ನಡೆಯಬೇಕಿದೆ. ಅಲ್ಲಿಯವರೆಗೂ ಕಾದು ನೋಡಲಾಗುವುದು. ದುಡುಕಿನ ನಿರ್ಧಾರ ಕೈಗೊಳ್ಳುವ ಅಗತ್ಯವಿಲ್ಲ. ಎಲ್ಲವೂ ಸರಿಯಾಗಲಿದೆ ಎಂಬ ವಿಶ್ವಾಸವಿದೆ ಎಂದರು.
    ಶಾಸಕ ಎಸ್.ಎನ್.ಚನ್ನಬಸಪ್ಪ, ಮಾಜಿ ಎಂಎಲ್‌ಸಿ ಆರ್.ಕೆ.ಸಿದ್ದರಾಮಣ್ಣ, ಪ್ರಮುಖರಾದ ಎಸ್.ಜ್ಞಾನೇಶ್ವರ್, ಮಾಲತೇಶ್, ಎಸ್.ಎಸ್.ಜ್ಯೋತಿಪ್ರಕಾಶ್, ಕೆ.ವಿ.ಅಣ್ಣಪ್ಪ, ಚಂದ್ರಶೇಖರ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts