

ಪಡುಬಿದ್ರಿ: ಉಡುಪಿಯ ತುಳು ಶಿವಳ್ಳಿ ಮಾಧ್ವ ಮಹಾಮಂಡಲ ವತಿಯಿಂದ ಪಡುಬಿದ್ರಿಯ ನವಶಕ್ತಿ ಮಹಿಳಾ ಭಜನಾ ಮಂಡಳಿ ಹಾಗೂ ತರಂಗಿಣಿ ಮಿತ್ರ ಮಂಡಳಿಗಳ ಸಹಯೋಗದಲ್ಲಿ ಶುಕ್ರವಾರ ಮಧ್ವ ಯಾನ - ಗಾನ ನಮನ ಕಾರ್ಯಕ್ರಮ ನಡೆಯಿತು.
ಶ್ರೀ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನ ಆನುವಂಶಿಕ ಮೊಕ್ತೇಸರರಾದ ಪಡುಬಿದ್ರಿ ಬೀಡು ರತ್ನಾಕರ ರಾಜ್ ಅರಸು ಕಿನ್ಯಕ್ಕ ಬಲ್ಲಾಳ್, ಪಡುಬಿದ್ರಿ ಪೇಟೆಮನೆ ಭವಾನಿಶಂಕರ ಹೆಗ್ಡೆ, ಕೊರ್ನಾಯ ಮನೆ ಶ್ರೀಪತಿ ರಾವ್ ಕಾರ್ಯಕ್ರಮ ಉದ್ಘಾಟಿಸಿದರು. ಕಾರ್ಯನಿರ್ವಹಣಾಧಿಕಾರಿ ಕೆ.ರಾಜಗೋಪಾಲ ಉಪಾಧ್ಯಾಯ, ತುಶಿಮಮಾ ಅಧ್ಯಕ್ಷ ಜಯರಾಮ ಆಚಾರ್ಯ, ವಿದ್ವಾಂಸ ಗೋಪಾಲ ಆಚಾರ್ಯ, ತುಶಿಮಮಾ ಕಾರ್ಯದರ್ಶಿ ರವೀಂದ್ರ ಆಚಾರ್ಯ, ಕೋಶಾಧಿಕಾರಿ ರಘುಪತಿ ರಾವ್, ಸುಧಾ ಆರ್ ನಾವಡ, ರಮಾಕಾಂತ ರಾವ್ ಮತ್ತಿತರರಿದ್ದರು.