ವಿಧಾನಸಭಾ ಚುನಾವಣೆಗೆ ಎರಡು ತಿಂಗಳು ಬಾಕಿ ಇರುವಾಗ ಶಿವರಾಜ್ ಸರ್ಕಾರ ವಿಸ್ತರಣೆ; ಪ್ರಮಾಣ ವಚನ ಸ್ವೀಕರಿಸಿದ ಮೂವರು ನೂತನ ಸಚಿವರು

Minister 2
Published on

ಭೋಪಾಲ್: ಎಲ್ಲಾ ಊಹಾಪೋಹಗಳಿಗೆ ತೆರೆ ಎಳೆದ ಮಧ್ಯಪ್ರದೇಶ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್ ಕೊನೆಗೂ ಸಂಪುಟ ವಿಸ್ತರಣೆ ಮಾಡಿದ್ದಾರೆ. ವಿಧಾನಸಭಾ ಚುನಾವಣೆಗೆ ಎರಡು ತಿಂಗಳ ಮೊದಲು ಮೂವರು ನೂತನ ಸಚಿವರು ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ರಾಜಭವನದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲ ಮಂಗುಭಾಯ್ ಪಟೇಲ್ ಅವರು ನೂತನ ಸಚಿವರಿಗೆ ಅಧಿಕಾರ ಮತ್ತು ಗೌಪ್ಯತೆಯ ಪ್ರಮಾಣ ವಚನ ಬೋಧಿಸಿದರು. ರಾಜಭವನದಲ್ಲಿ ಸಿಎಂ ಶಿವರಾಜ್ ಸಿಂಗ್‌ ಚೌಹಾಣ್ ಮತ್ತು ರಾಜ್ಯವಾಲ ಮಂಗುಭಾಯ್ ಪಟೇಲ್ ಅವರ ಸಮ್ಮುಖದಲ್ಲಿ ಬಾಲಘಾಟ್ ಶಾಸಕ ಗೌರಿಶಂಕರ್ ಬಿಸನ್, ರೇವಾ ಶಾಸಕ ರಾಜೇಂದ್ರ ಶುಕ್ಲಾ ಮತ್ತು ಖರ್ಗಾಪುರ ಶಾಸಕ ರಾಹುಲ್ ಲೋಧಿ ಅವರು ಮಧ್ಯಪ್ರದೇಶ ಸಂಪುಟದಲ್ಲಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನಕ್ಕೆ ಸಂಬಂಧಿಸಿದಂತೆ ಹಲವು ದಿನಗಳಿಂದ ಊಹಾಪೋಹಗಳು ಕೇಳಿಬರುತ್ತಿದ್ದವು. ಮಧ್ಯಪ್ರದೇಶದಲ್ಲಿ ವಿಧಾನಸಭಾ ಚುನಾವಣೆಗೂ ಮುನ್ನ ಸಂಪುಟ ವಿಸ್ತರಣೆ ಮಾಡಲಾಗಿದೆ.

ಮಾಜಿ ಮುಖ್ಯಮಂತ್ರಿ ಉಮಾಭಾರತಿ ಅವರ ಸೋದರಳಿಯ ಖರ್ಗಾಪುರ ಶಾಸಕ ರಾಹುಲ್ ಸಿಂಗ್ ಲೋಧಿ ಅವರನ್ನು ಇದೀಗ ಸಂಪುಟಕ್ಕೆ ಸೇರಿಸಿಕೊಳ್ಳಲಾಗಿದೆ. ರಾಹುಲ್ ಲೋಧಿ ಮೊದಲ ಬಾರಿಗೆ ಶಾಸಕರಾಗಿದ್ದಾರೆ. ಅವರನ್ನು ರಾಜ್ಯ ಸಚಿವರನ್ನಾಗಿ ಮಾಡಲಾಗಿದೆ. ಲೋಧಿ ಖರ್ಗಾಪುರ ಕ್ಷೇತ್ರದ ಶಾಸಕರಾಗಿದ್ದಾರೆ. ರಾಹುಲ್ ಲೋಧಿ ಅವರನ್ನು ಸೇರಿಸಿಕೊಳ್ಳುವ ಮೂಲಕ ಬಿಜೆಪಿ ಬುಂದೇಲ್‌ಖಂಡ್‌ ಮತ್ತು ಉಮಾಭಾರತಿಗೆ ಸಹಾಯ ಮಾಡಲು ಪ್ರಯತ್ನಿಸಿದೆ. ಉಮಾಭಾರತಿ ಅವರ ಸೋದರಳಿಯರಾಗಿರುವ ರಾಹುಲ್ ಲೋಧಿ ಕ್ಷೇತ್ರದಲ್ಲಿ ಉತ್ತಮ ಹಿಡಿತ ಹೊಂದಿದ್ದಾರೆ. ಈ ಹಿಂದೆ 2013ರಲ್ಲಿಯೂ ಅವರಿಗೆ ಪಕ್ಷದಿಂದ ಟಿಕೆಟ್ ನೀಡಲಾಗಿತ್ತು, ಆದರೆ ಅವರು ಚುನಾವಣೆಯಲ್ಲಿ ಸೋತರು, ಆದರೆ 2018 ರಲ್ಲಿ ಅವರು ಗೆದ್ದರು.

ಬಹಳ ದಿನಗಳಿಂದ ಸಚಿವ ಸಂಪುಟ ವಿಸ್ತರಣೆಯ ಮಾತು ಮುನ್ನೆಲೆಗೆ ಬರುತ್ತಿದ್ದು, ಈಗ ಅದು ಅಂತ್ಯಗೊಂಡಿದೆ. ಶಿವರಾಜ್ ಸಂಪುಟಕ್ಕೆ 3 ಹೊಸ ಸಚಿವರು ಸೇರ್ಪಡೆಯಾಗಿದ್ದಾರೆ. ಅವರೆಲ್ಲರೂ ಪ್ರಮಾಣ ವಚನ ಸ್ವೀಕರಿಸಲು ರಾಜಭವನ ತಲುಪಿದರು. ಈ ವೇಳೆ ಸಿಎಂ ಶಿವರಾಜ್‌ ಸಿಂಗ್ ಚೌಹಾಣ್ ಸಮ್ಮುಖದಲ್ಲಿ ರಾಜ್ಯವಾಲ ಮಂಗುಭಾಯ್‌ ಪಟೇಲ್‌ ನೂತನ ಸಚಿವರಿಗೆ ಪ್ರಮಾಣ ವಚನ ಬೋಧಿಸಿದರು.

ಚುನಾವಣೆಗೂ ಮುನ್ನ ಬಿಜೆಪಿಯ ತಂತ್ರ
ಮಧ್ಯಪ್ರದೇಶ ಸಂಪುಟದಲ್ಲಿ ಸಚಿವ ಸ್ಥಾನಗಳು ಖಾಲಿ ಇದ್ದವು. ವಿಧಾನಸಭೆ ಚುನಾವಣೆಗೂ ಮುನ್ನ ಸಚಿವ ಸಂಪುಟ ವಿಸ್ತರಣೆ ಮಾಡಿರುವುದು. ಬಿಜೆಪಿಯ ಅತೃಪ್ತರನ್ನು ಸಮಾಧಾನಪಡಿಸುವ ಕಸರತ್ತಾಗಿದೆ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಕಳೆದ ಮೂರು ದಿನಗಳಿಂದ ನೂತನ ಸಚಿವರ ಹೆಸರುಗಳ ಬಗ್ಗೆ ಚರ್ಚೆ ನಡೆಯುತ್ತಿತ್ತು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net