More

    ಮಧ್ಯಪ್ರದೇಶ; ಬಿಜೆಪಿಯ 225 ತಿಂಗಳ ಆಡಳಿತದಲ್ಲಿ 250ಕ್ಕೂ ಹೆಚ್ಚು ಹಗರಣಗಳು ನಡೆದಿವೆ: ಪ್ರಿಯಾಂಕ ಗಾಂಧಿ

    ಭೋಪಾಲ್: ಬಿಜೆಪಿಯ 225 ತಿಂಗಳ ಆಡಳಿತದಲ್ಲಿ 250ಕ್ಕೂ ಹೆಚ್ಚು ಹಗರಣಗಳಲ್ಲಿ ಭಾಗಿಯಾಗಿದೆ. ಇಲ್ಲಿನ ಸರ್ಕಾರ ಉದ್ಯೋಗಗಳನ್ನು ಸೃಷ್ಟಿಸದೆ ರಾಜ್ಯವನ್ನು ಲೂಟಿ ಮಾಡಿ ಹಾಳುಗೆಡವಿದೆ ಎಂದು ಕಾಂಗ್ರೆಸ್​ ನಾಯಕಿ ಪ್ರಿಯಾಂಕ ಗಾಂಧಿ ಆರೋಪಿಸಿದ್ದಾರೆ.

    ವರ್ಷಾಂತ್ಯದಲ್ಲಿ ವಿಧಾನಸಭೆ ಚುನಾವಣೆ ನಡೆಯಲಿರುವ ಮಧ್ಯಪ್ರದೇಶದ ಮಂಡ್ಲಾ ಜಿಲ್ಲೆಯಲ್ಲಿ ಸಾರ್ವಜನಿಕ ಸಮಾವೇಶವನ್ನುದ್ಧೇಶಿಸಿ ಮಾತನಾಡಿದ ಪ್ರಿಯಾಂಕ ಬಿಜೆಪಿ ವಿರುದ್ಧ ತಮ್ಮ ವಾಗ್ದಾಳಿಯನ್ನು ಮುಂದುವರೆಸಿದ್ದಾರೆ.

    ಬುಡಕಟ್ಟು ಜನಾಂಗದವರಿಗೆ ಮೀಸಲಾದ ಪ್ರತಿಯೊಂದು ಯೋಜನೆಯಲ್ಲೂ ಬಿಜೆಪಿ ಅಕ್ರಮ ಎಸಗಿದೆ. ನೀವು ಮೊದಲಿಗೆ ಬುಡಕಟ್ಟು ಜನರಿಗೆ ಶೂ, ಚಪ್ಪಲಿ ಮತ್ತು ಛತ್ರಿಗಳನ್ನು ನೀಡುವುದನ್ನು ನಿಲ್ಲಿಸಿ. ಅವರಿಗೆ ಅವರ ಹಕ್ಕನ್ನು ಕೊಡಿ. ಈ ಹಿಂದೆ ಇಂದಿರಾ ಗಾಂಧಿ ಅವರು ಟೆಂಡು ಎಲೆಗಳ ಸಂಗ್ರಹಕ್ಕಾಗಿ ಕೇಂದ್ರ ಸರ್ಕಾರದ ವತಿಯಿಂದ ಬೋನಸ್​ ಕೊಡುತ್ತಿದ್ದರು. ಆದರೆ, ಹಲವು ವರ್ಷಗಳಿಂದ ಅದನ್ನು ಬಿಜೆಪಿ ಸರ್ಕಾರ ಯಾಕೆ ನಿಲ್ಲಿಸಿದೆ ಎಂದು ಪ್ರಶ್ನಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ ಈವರೆಗೆ 1.5ಲಕ್ಷ ಮಹಿಳೆಯರು ಕಾಣೆಯಾಗಿದ್ದಾರೆ. ಪ್ರತಿನಿತ್ಯ 17 ಅತ್ಯಾಚಾರ ಪ್ರಕರಣಗಳು ದಾಖಲಾಗುತ್ತಿವೆ. ದಲಿತರು ಹಾಗೂ ಆದಿವಾಸಿಗಳ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ಮಧ್ಯಪ್ರದೇಶ ಮೊದಲ ಸ್ತಾನ ಪಡೆದಿದೆ. ಬುಡಕಟ್ಟು ಮತ್ತು ದಲಿತರಿಗೆಂದು ಮೀಸಲಾಗಿರುವ MGNREGA ಯೋಜನೆಗಳನ್ನು ನಿಲ್ಲಿಸಲಾಗಿದೆ. ಪೌಷ್ಟಿಕ ಆಹಾರ, ಸ್ಕಾಲರ್‌ಶಿಪ್, ನೇಮಕಾತಿ ಪರೀಕ್ಷೆ ಇತ್ಯಾದಿಗಳಲ್ಲಿ ಹಗರಣಗಳು ನಡೆಯುತ್ತಿವೆ. ವ್ಯಾಪಂ ಹಗರಣದಲ್ಲಿ ಎಷ್ಟು ಮಂದಿ ಸತ್ತಿದ್ದಾರೆ ಎಂದು ಕೇಳಿದರೆ ಆಶ್ಚರ್ಯವಾಗುತ್ತದೆ.

    ಇದನ್ನೂ ಓದಿ: ಬಿಜೆಪಿ ತೊರೆದು ‘ಕೈ’ ಹಿಡಿದ ಮಾಜಿ ಶಾಸಕ ರಾಮಪ್ಪ ಲಮಾಣಿ

    ವ್ಯಾಪಂ ಹಗರಣದಲ್ಲಿ ಬಂದ ಕಮಿಷನ್​ ಹಣದಿಂದಾಗಿ ಇಲ್ಲಿನ ಆದಿವಾಸಿಗಳಿಗೆ ಶೂ, ಚಪ್ಪಲಿ ಹಾಗೂ ಛತ್ರಿಗಳನ್ನು ಹಂಚಲಾಗಿದೆ. ವಿಪರ್ಯಾಸವೆಂದರೆ ಇಲ್ಲಿನ ಜನರು ಸರ್ಕಾರ ವಿರುದ್ಧ ಪ್ರತಿಭಟಿಸಿದರೆ ಅವರ ಮೇಲೆ ಗುಂಡು ಹಾರಿಸಲಾಗುತ್ತದೆ. ರಾಜ್ಯದ ಅಭಿವೃದ್ಧಿಗೆ ಒತ್ತು ನೀಡದ ಬಿಜೆಪಿ ಎಲ್ಲಾ ಕ್ಷೇತ್ರಗಳಲ್ಲಿಯೂ ಹಗರಣ ನಡೆಸಿದೆ. ರಾಜ್ಯದ ಯುವ ಜನತೆಗೆ ಉದ್ಯೋಗ ನೀಡಲು ವಿಫಲವಾಗಿರುವ ಬಿಜೆಪಿ ಜನರನ್ನು ದಾರಿ ತಪ್ಪಿಸುವುದಲ್ಲಿ ತೊಡಗಿದೆ ಎಂದು ಆರೋಪಿಸಿದ್ದಾರೆ.

    ಮಧ್ಯಪ್ರದೇಶದಲ್ಲಿ ಕಾಂಗ್ರೆಸ್​ ಸರ್ಕಾರ ಘೋಷಿಸಿರುವ ಗ್ಯಾರಂಟಿಗಳನ್ನು ಪುನರುಚ್ಛರಿಸಿದ ಪ್ರಿಯಾಂಕ ನಾವು ಅಧಿಕಾರಕ್ಕೆ ಬಂದಲ್ಲಿ, ಪ್ರತಿ ಮಹಿಳೆಗೆ ತಿಂಗಳಿಗೆ ₹ 1,500, ಎಲ್‌ಪಿಜಿ ಸಿಲಿಂಡರ್ ₹ 500, ಸರ್ಕಾರಿ ಸಿಬ್ಬಂದಿಗೆ ಹಳೆಯ ಪಿಂಚಣಿ ಯೋಜನೆ, ಕೃಷಿ ಸಾಲ ಮನ್ನಾ ಯೋಜನೆ ಪುನರಾರಂಭ, ಒಬಿಸಿಗೆ 27% ಮೀಸಲಾತಿ, 1 ರಿಂದ 8 ನೇ ತರಗತಿಯ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹ 500, 9 ಮತ್ತು 10 ನೇ ತರಗತಿಯ ವಿದ್ಯಾರ್ಥಿಗಳಿಗೆ ತಿಂಗಳಿಗೆ ₹ 1,000 ಮತ್ತು 11 ಮತ್ತು 12 ನೇ ತರಗತಿಯ ವಿದ್ಯಾರ್ಥಿಗಳಿಗೆ ಪ್ರತಿ ತಿಂಗಳಿಗೆ ₹ 1,500 ನೀಡಲಿದೆ ಎಂದು ಘೋಷಿಸಿದ್ದಾರೆ.

    230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ನವೆಂಬರ್​ 17ರಂದು ಮತದಾನ ನಡೆಯಲಿದ್ದು, ಡಿಸೆಂಬರ್ 3ಕ್ಕೆ ಫಲಿತಾಂಶ ಪ್ರಕಟವಾಗಲಿದೆ. ಬಿಜೆಪಿ ಈಗಾಗಲೇ 136 ಅಭ್ಯರ್ಥಿಗಳನ್ನು ಘೋಷಿಸಿದ್ದು, ಕಾಂಗ್ರೆಸ್​ ಇನ್ನಷ್ಟೇ ಹುರಿಯಾಳುಗಳ ಹೆಸರನ್ನು ಪ್ರಕಟಿಸಬೇಕಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts