

ಭೂಪಾಲ್: ಭಾರತದ 77 ನೇ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದ ವೇಳೆಯ ಆರೋಗ್ಯ ಸಚಿವರೊಬ್ಬರು ವೇದಿಕೆಯ ಮೇಲೆ ಕುಸಿದು ಬಿದ್ದಿರುವ ಘಟನೆ ಮಧ್ಯಪ್ರದೇಶದ ಭೂಪಾಲ್ ಬಳಿಯ ರೈಸನ್ನಲ್ಲಿ ನಡೆದಿದೆ.
ಇದನ್ನೂ ಓದಿ: ಆಟವಾಡುತ್ತಿದ್ದಾಗ ನೀರಿನ ಬಕೆಟ್‌ಗೆ ಬಿದ್ದು ಪ್ರಾಣ ಬಿಟ್ಟ 16 ತಿಂಗಳ ಮಗು
ರೈಸನ್ನಲ್ಲಿ ನಡೆದ ಸ್ವಾತಂತ್ರ್ಯ ದಿನಾಚರಣೆ ಸಮಾರಂಭದಲ್ಲಿ ಆರೋಗ್ಯ ಸಚಿವ ಡಾ.ಪ್ರಭು ರಾಮ್ ಚೌಧರಿ ಪರೇಡ್‌ನಲ್ಲಿ ಭಾಗವಹಿಸಿದ ನಂತರ ತಮ್ಮ ಭಾಷಣವನ್ನು ಮುಗಿಸಿದರು. ಇದಾದ ನಂತರ ಇದ್ದಕ್ಕಿದ್ದಂತೆ ಅವರ ಆರೋಗ್ಯ ತೀರಾ ಹದಗೆಟ್ಟಿದ್ದು, ವೇದಿಕೆಯಲ್ಲೇ ತಲೆ ಸುತ್ತಿ ಬಿದ್ದಿದ್ದಾರೆ. ಇದರಿಂದ ಸ್ಥಳದಲ್ಲಿ ಕೋಲಾಹಲ ಉಂಟಾಗಿದ್ದು, ಶೀಘ್ರದಲ್ಲೇ ಜಿಲ್ಲಾಧಿಕಾರಿ ಮತ್ತು ಎಸ್ಪಿ ನೇತೃತ್ವದಲ್ಲಿ ಸಚಿವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ರೈಸನ್ ಜಿಲ್ಲಾ ಆಸ್ಪತ್ರೆಯ ಸಿವಿಲ್ ಸರ್ಜನ್ ಡಾ.ಅನಿಲ್ ಓಧ್ ಮಾತನಾಡಿ, ಸಚಿವರು ಬಹಳ ಹೊತ್ತು ನಿಂತಿದ್ದರು. ಇದರಿಂದಾಗಿ ಹೃದಯಕ್ಕೆ ರಕ್ತ ಕಡಿಮೆಯಾದ ಕಾರಣ ತಲೆತಿರುಗುವಿಕೆ ಸಂಭವಿಸಿದೆ. ಅವರ ಬಿಪಿ ಮತ್ತು ಶುಗರ್ ತಪಾಸಣೆ ಮಾಡಲಾಗಿದ್ದು, ಅದು ನಾರ್ಮಲ್ ಆಗಿತ್ತು. ಈಗ ಅವರು ಆರೋಗ್ಯವಾಗಿದ್ದಾರೆ ಎಂದು ಹೇಳಿದ್ದಾರೆ.(ಏಜೆನ್ಸೀಸ್)