More

    “ಬಿಜೆಪಿ ಏಕಾಂಗಿಯಾಗಿ 370 ಸ್ಥಾನ ದಾಟಲಿದೆ”…ಝಬುವದಲ್ಲಿ ಲೋಕಸಭೆ ಚುನಾವಣೆಗೆ ಪಿಚ್ ರೆಡಿ ಮಾಡಿದ ಪ್ರಧಾನಿ ಮೋದಿ

    ಮಧ್ಯಪ್ರದೇಶ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಮಧ್ಯಪ್ರದೇಶದ ಝಬುವಗೆ ಭೇಟಿ ನೀಡಿ 7,550 ಕೋಟಿ ರೂಪಾಯಿಗಳ ವಿವಿಧ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಈ ವೇಳೆ ಮೋದಿ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ದೇಶಿಸಿ ಮಾತನಾಡಿದರು.

    ಈ ಸಂದರ್ಭದಲ್ಲಿ ಮಧ್ಯಪ್ರದೇಶದಲ್ಲಿ ನಡೆಯುತ್ತಿರುವ ಅನೇಕ ಅಭಿವೃದ್ಧಿ ಯೋಜನೆಗಳು ಡಬಲ್ ಎಂಜಿನ್ ಸರ್ಕಾರವು ಎಲ್ಲಾ ಅಭಿವೃದ್ಧಿ ಕಾರ್ಯಗಳಲ್ಲಿ ದುಪ್ಪಟ್ಟು ವೇಗದಲ್ಲಿ ಕಾರ್ಯನಿರ್ವಹಿಸುತ್ತಿದೆ ಎಂದು ತೋರಿಸುತ್ತದೆ. ನನ್ನ ಭೇಟಿ ಕುರಿತು ರಾಜ್ಯದಲ್ಲಿ ಸಾಕಷ್ಟು ಚರ್ಚೆಗಳು ನಡೆಯುತ್ತಿದ್ದು, ನಾನಾ ರೀತಿಯ ಮಾತುಗಳು ಕೇಳಿ ಬರುತ್ತಿವೆ. ಝಬುವದಿಂದ ಲೋಕಸಭೆ ಚುನಾವಣೆ ಹೋರಾಟವನ್ನು ಮೋದಿ ಆರಂಭಿಸುತ್ತಿದ್ದಾರೆ ಎಂದು ಕೆಲವರು ಹೇಳುತ್ತಿದ್ದಾರೆ. ಆದರೆ ನಾನು ಇಲ್ಲಿ ಚುನಾವಣಾ ಪ್ರಚಾರಕ್ಕೆ ಬಂದಿಲ್ಲ, ಜನರ ಸೇವೆ ಮಾಡಲು ಬಂದಿದ್ದೇನೆ. ಈ ಬಾರಿ ಎನ್ ಡಿಎ 400 ಸೀಟು ದಾಟಲಿದೆ ಎಂದು ಪ್ರತಿಪಕ್ಷಗಳು ಹೇಳುತ್ತಿವೆ. ಆದರೆ ನಾನು ಬಿಜೆಪಿ ಮಾತ್ರ 370 ಸೀಟು ದಾಟಲಿದೆ ಎಂದು ಹೇಳುತ್ತಿದ್ದೇನೆ ಎಂದು ಮೋದಿ ತಿಳಿಸಿದರು.

    ಕಳೆದ ಬಾರಿಗಿಂತ ನಿಮ್ಮ ಆಯಾ ಬೂತ್‌ಗಳಲ್ಲಿಯೇ ಪಕ್ಷ ಕೇವಲ 370ಕ್ಕಿಂತ ಹೆಚ್ಚು ಮತ ಗಳಿಸಿದರೆ ಈ ಗುರಿಯನ್ನು ಸಾಧಿಸಬಹುದು ಎಂದು ಮೋದಿ ಇದೇ ಸಂದರ್ಭದಲ್ಲಿ ಕಿವಿ ಮಾತು ಹೇಳಿದರು.

    7,550 ಕೋಟಿ ರೂ.ಉಡುಗೊರೆ ನೀಡಿದ ಪ್ರಧಾನಿ
    ಈ ಮೊದಲೇ ಹೇಳಿದ ಹಾಗೆ ಝಬುವದಲ್ಲಿ ಇಂದು ಪ್ರಧಾನಿ ನರೇಂದ್ರ ಮೋದಿ ಅವರು ಮಧ್ಯಪ್ರದೇಶಕ್ಕೆ 7,550 ಕೋಟಿ ರೂಪಾಯಿಗಳ ಅಭಿವೃದ್ಧಿ ಯೋಜನೆಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಿದರು. ಇದೇ ಸಂದರ್ಭದಲ್ಲಿ ಮೋದಿಯವರು ರಾಜ್ಯದ ‘ಆಹಾರ ಸಬ್ಸಿಡಿ ಯೋಜನೆ’ಯಡಿ ಸುಮಾರು ಎರಡು ಲಕ್ಷ ಮಹಿಳಾ ಫಲಾನುಭವಿಗಳಿಗೆ ಮಾಸಿಕ ಕಂತನ್ನು ವಿತರಿಸಿದರು.

    ರಾಜ್ಯದ ಬುಡಕಟ್ಟು ಪ್ರಾಬಲ್ಯವಿರುವ ಜಿಲ್ಲೆಗಳ ಯುವಕರಿಗೆ ಸೌಲಭ್ಯಗಳನ್ನು ಒದಗಿಸುವ ತಾಂತ್ಯ ಮಾಮಾ ಭಿಲ್ ವಿಶ್ವವಿದ್ಯಾಲಯದ ಶಂಕುಸ್ಥಾಪನೆಯನ್ನೂ ಪ್ರಧಾನಮಂತ್ರಿಯವರು ನೆರವೇರಿಸಿದರು. 170 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಪಡಿಸಲಿರುವ ವಿಶ್ವವಿದ್ಯಾನಿಲಯವು ವಿದ್ಯಾರ್ಥಿಗಳ ಸಮಗ್ರ ಅಭಿವೃದ್ಧಿಗಾಗಿ ವಿಶ್ವ ದರ್ಜೆಯ ಮೂಲಸೌಕರ್ಯಗಳನ್ನು ಒದಗಿಸಲಿದೆ. 

    ಬ್ರೈನ್ ಸ್ಟ್ರೋಕ್ ನಂತರ ಮಿಥುನ್ ಚಕ್ರವರ್ತಿಗೆ ಯಾರನ್ನೂ ಗುರುತಿಸಲು ಸಾಧ್ಯವಾಗುತ್ತಿಲ್ಲವೇ?

    ಈ ರಾಜ್ಯಗಳಿಗೆ ಮಳೆ ಎಚ್ಚರಿಕೆ, ರಾಷ್ಟ್ರ ರಾಜಧಾನಿಯಲ್ಲಿ ಹೇಗಿದೆ ಹವಾಮಾನ?

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts