More

    ಮಧ್ಯಪ್ರದೇಶ ಚುನಾವಣೆ| ಮತದಾನದ ವೇಳೆ ಕಲ್ಲುತೂರಾಟ; ಒರ್ವ ಗಂಭೀರ

    ಭೋಪಾಲ್: ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಬಿಂಬಿತವಾಗಿರುವ ಪಂಚರಾಜ್ಯ ಚುನಾವಣೆ ಮುಂಬರುವ ಲೋಕಸಭೆ ಎಲೆಕ್ಷನ್​ನ ಸೆಮಿಫಿನಾಲೆ ಎಂದೇ ಬಿಂಬಿಸಲಾಗಿದೆ. 230 ಸದಸ್ಯ ಬಲದ ಮಧ್ಯಪ್ರದೇಶ ವಿಧಾನಸಭೆಗೆ ಇಂದು (ನವೆಂಬರ್ 17) ಮತದಾನ ನಡೆಯುತ್ತಿದ್ದು, ಈ ವೇಳೆ ಕಲ್ಲುತೂರಾಟ ನಡೆದಿದೆ.

    ಮಧ್ಯಪ್ರದೇಶದ ಮೊರೆನಾ ಜಿಲ್ಲೆಯ ದಿಮಾನಿ ವಿಧಾನಸಭಾ ಕ್ಷೇತ್ರದ ಮಿರ್ಘಾನ್​ ಗ್ರಾಮದ ಮತಗಟ್ಟೆ 147 ಹಾಗೂ 148ರಲ್ಲಿ ಕಲ್ಲು ತೂರಾಟ ನಡೆದಿದ್ದು, ಓರ್ವ ವ್ಯಕ್ತಿ ಗಂಭೀರವಾಗಿ ಗಾಯಗೊಂಡಿದ್ದಾರೆ.

    ಇದನ್ನೂ ಓದಿ: ಜನವರಿ 22ರಂದು ರಾಮಮಂದಿರ ಲೋಕಾರ್ಪಣೆ; 48 ದಿನ ಮಂಡಲೋತ್ಸವ: ಪೇಜಾವರ ಶ್ರೀ

    ಈ ಕುರಿತು ಪ್ರತಿಕ್ರಿಯಿಸಿರುವ ಜಿಲ್ಲಾ ಪೊಲೀಸ್​ ವರಿಷ್ಠಾಧಿಕಾರಿ ಅನುರಾಗ್​ ಸುಜಾನಿಯಾ, ಯಾವ ಕಾರಣಕ್ಕೆ ಎರಡು ಗುಂಪುಗಳ ನಡುವೆ ಘರ್ಷಣೆ ಉಂಟಾಗಿ ಕಲ್ಲುತೂರಾಟವಾಯಿತು ಎಂದು ತಿಳಿದು ಬಂದಿಲ್ಲ. ಘಟನೆಯಲ್ಲಿ ಓರ್ವ ವ್ಯಕ್ತಿ ಗಂಭಿರವಾಗಿ ಗಾಯಗೊಂಡಿದ್ದು, ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಪರಿಸ್ಥಿತಿಯನ್ನು ನಿಯಂತ್ರಿಸಲಾಗಿದ್ದು, ತನಿಖೆ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.

    230 ಸದಸ್ಯಬಲದ ಮಧ್ಯಪ್ರದೇಶ ವಿಧಾನಸಭೆಗೆ ಒಂದೇ ಹಂತದಲ್ಲಿ ಮತದಾನ ನಡೆಯಲಿದ್ದು, ಬೆಳಗ್ಗೆ 7ರಿಂದ ಸಂಜೆ 5ರವರೆಗೆ ನಡೆಯಲಿದೆ. ಡಿಸೆಂಬರ್ 03ಕ್ಕೆ ಫಲಿತಾಂಶ ಪ್ರಕಟವಾಗಲಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts