VIDEO| ಯುವಕನ ಮೇಲೆ ಹಲ್ಲೆ ಪ್ರಕರಣ; ಆರೋಪಿಗಳ ಮನೆ ಒಡೆದು ಹಾಕುವಂತೆ ಆದೇಶಿಸಿದ ಮಧ್ಯಪ್ರದೇಶ ಸರ್ಕಾರ

Accused Arrested
Published on

ಭೋಪಾಲ್​: ದುಷ್ಕರ್ಮಿಗಳ ಗುಂಪೊಂದು ಯುವಕನ ಮೇಲೆ ಅಮಾನುಷವಾಗಿ ಹಲ್ಲೆ ನಡೆಸಿ ನಾಯಿಯ ಬೆಲ್ಟ್​ ಧರಿಸಿ ಕ್ಷಮೆಯಾಚಿಸುವಂತೆ ಒತ್ತಾಯಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಮುಖ್ಯಮಂತ್ರಿ ಶಿವರಾಜ್​ ಸಿಂಗ್​ ಚೌಹಾಣ್​ ಆದೇಶಿಸಿದ್ಧಾರೆ.

ಘಟನೆ ಕುರಿತು ಪ್ರತಿಕ್ರಿಯಿಸಿದ ಸಿಎಂ ಚೌಹಾಣ್​ ಪ್ರಕರಣ ಸಂಬಂಧ ಸಮೀರ್​, ಸಾಜಿದ್​, ಪೈಜಾನ್​ ಲಾಲ್​ರನ್ನು ಈಗಾಗಲೇ ಬಂಧಿಸಲಾಗಿದ್ದು, ಆರೋಪಪಿಗಳ ವಿರುದ್ಧ ರಾಷ್ಟ್ರೀಯ ಭದ್ರತಾ ಕಾಯ್ದೆ(NSA) ಅಡಿ ಪ್ರಕರಣವನ್ನು ದಾಖಲಿಸಲಾಗಿದೆ ಎಂದು ತಿಳಿಸಿದ್ದಾರೆ.

ಆರೋಪಿಗಳ ಮನೆಯನ್ನು ಹೊಡೆದು ಹಾಕುವಂತೆ ಆದೇಶಿಸಿರುವ ಮುಖ್ಯಮಂತ್ರಿ ಚೌಹಾಣ್​ ಪ್ರಕರಣದಲ್ಲಿ ಹೊಸ ಸಾಕ್ಷ್ಯಧಾರಗಳು ದೊರೆತಲ್ಲಿ NSA ಅಡಿಯಲ್ಲಿ ಕಠಿಣ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಘಟನೆಯ ಕುರಿತು ಪ್ರತಿಕ್ರಿಯಿಸಿದ್ಧಾರೆ.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net