More

    ಸಮಾನತೆಯ ಹೋರಾಟ ಇಂದಿಗೂ ನಡೆಯುತ್ತಿರುವುದು ರಾಜಕೀಯ ಇಚ್ಛಾಶಕ್ತಿಯ ಕೊರತೆಯನ್ನು ಬಿಂಬಿಸುತ್ತದೆ: ಸಿ.ಸಿ.ಪಾಟೀಲ್

    ಗದಗ : 12ನೇ ಶತಮಾನದಲ್ಲಿ ನಡೆದ ಸಮಾನತೆಯ ಹೋರಾಟ ಇಂದಿಗೂ ನಡೆಯುತ್ತಿರುವುದು ರಾಜಕೀಯ ಇಚ್ಛಾಶಕ್ತಿಯ ಕೊರತೆಯನ್ನು ಬಿಂಬಿಸುತ್ತದೆ. ಹೀಗಾಗಿ ಸಮಾಜದಲ್ಲಿ ಏಕತೆ ಬರಬೇಕು ಎಂದು ಶಾಸಕರಾದ ಸಿ.ಸಿ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.

    ರವಿವಾರ ನಗರದ ಡಾ.ಪಂಡಿತ ಭೀಮಸೇನ ಜೋಶಿ ರಂಗಮಂದಿರದಲ್ಲಿ ನಡೆದ ‘ರಾಜ್ಯದೆಲ್ಲೆಡೆ ಮಾದಿಗ ಮುನ್ನಡೆ ಆತ್ಮಗೌರವ ಸಮಾವೇಶ’ವನ್ನು ಉದ್ಘಾಟಿಸಿ ಮಾತನಾಡಿದರು. 

    ಎಲ್ಲ ವರ್ಗದ ಜನರು ಸಮಾನತೆಯಿಂದ‌ ಬದುಕುವ ಕಾಲ ಬರಬೇಕು. ಈ ನಿಟ್ಟಿನಲ್ಲಿ ಆರ್ಥಿಕ, ಸಾಮಾಜಿಕ, ಶೈಕ್ಷಣಿಕವಾಗಿ ಹಿಂದುಳಿದಿದ್ದ ಎಸ್ಸಿ, ಎಸ್ಟಿ ವರ್ಗಗಳ ಮೀಸಲಾತಿಯನ್ನು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ನೇತೃತ್ವದಲ್ಲಿ ಹೆಚ್ಚಿಸಿದ್ದು, ಮೀಸಲಾತಿ ಹೆಚ್ಚಳವು ಶೀಘ್ರವೇ ಕಾರ್ಯರೂಪಕ್ಕೆ ಬಂದು ಮಾದಿಗ ಸಮಾಜಕ್ಕೆ ನ್ಯಾಯ ಸಿಗಬೇಕು. ಈ ಮೂಲಕ ಪ್ರತಿಯೊಬ್ಬರೂ ಸಹಬಾಳ್ವೆಯಿಂದ ಬದುಕೋಣ ಎಂದರು.

    ಚಿತ್ರದುರ್ಗದ ಮಾದರ ಚೆನ್ನಯ್ಯ ಗುರುಪೀಠದ ಬಸವಮೂರ್ತಿ ಮಾದರ ಚೆನ್ನಯ್ಯ ಸ್ವಾಮೀಜಿ ಮಾತನಾಡಿ, ಮೂವತ್ತು ವರ್ಷಗಳ ಹೋರಾಟದ ಫಲವಾಗಿ ಕಳೆದ ಬಿಜೆಪಿ ಸರ್ಕಾರ ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯನ್ನು ಕೇಂದ್ರ ಸರ್ಕಾರಕ್ಕೆ ಶಿಫಾರಸ್ಸು ಮಾಡುವ ಮೂಲಕ ಹೋರಾಟಕ್ಕೆ ತಿಲಾಂಜಲಿ ನೀಡಿದೆ.  ಮಾದಿಗ ಸಮಾಜದ ಆರ್ಥಿಕ, ಸಾಮಾಜಿಕ, ರಾಜಕೀಯ, ಶೈಕ್ಷಣಿಕ ಸ್ಥಿತಿಗತಿಯನ್ನು ಅರಿತು ಸಾಮಾಜಿಕ ನ್ಯಾಯ ಒದಗಿಸಿಕೊಟ್ಟಿದೆ ಎಂದರು.

    ಪರಿಶಿಷ್ಟ ಜಾತಿಯ ಮೀಸಲಾತಿಯ ಪ್ರಮಾಣವನ್ನು ಶೇ.15 ರಿಂದ  ಶೇ.17ಕ್ಕೆ ಹೆಚ್ಚಿಸಿ ಒಳ ಮೀಸಲಾತಿಯ ವರ್ಗೀಕರಣವನ್ನು ಯಥಾವತ್ತಾಗಿ ಕೇಂದ್ರಕ್ಕೆ ಶಿಫಾರಸ್ಸು ಮಾಡಿದೆ. ಕೇಂದ್ರ ಸರ್ಕಾರವೂ ಮಾದಿಗ ಸಮಾಜಕ್ಕೆ ನ್ಯಾಯ ಒದಗಿಸಿ ಕೊಡುವ ನಿಟ್ಟಿನಲ್ಲಿ ಕಾರ್ಯಪ್ರವೃತ್ತವಾಗಿದೆ. ಹೀಗಾಗಿ ಹೋರಾಟದ ಫಲಕ್ಕೆ ನ್ಯಾಯ ಒದಗಿಸಿಕೊಟ್ಟಿರುವವರಿಗೆ ಕೃತಜ್ಞರಾಗಿರುವುದರ ಜೊತೆಗೆ ಮಾದಿಗ ಸಮಾಜದ ಕಟ್ಟಕಡೆಯ ವ್ಯಕ್ತಿಗೂ ಈ ಬಗ್ಗೆ ಮನವರಿಕೆ ಮಾಡಿಕೊಡಬೇಕು ಎಂದು ನುಡಿದರು.

    ಮಾಜಿ ಶಾಸಕ ಬಸವರಾಜ ದಡೇಸಗೂರು ಮಾತನಾಡಿ, ಕಳೆದ ಬಿಜೆಪಿ ಸರ್ಕಾರದ ಅವಧಿಯಲ್ಲಿ ಮಾದಿಗ ಸಮಾಜಕ್ಕೆ ನ್ಯಾಯ ಕೊಡಿಸುವ ಕೆಲಸವಾಗಿದೆ. ನ್ಯಾ.ಸದಾಶಿವ ಆಯೋಗದ ವರದಿ ಜಾರಿ‌ ಮಾಡುತ್ತೇನೆಂದು ಮಾದಿಗ ಸಮಾಜಕ್ಕೆ ಕಾಂಗ್ರೆಸ್ ಸರ್ಕಾರ ಅನ್ಯಾಯ ಮಾಡುತ್ತಾ ಬಂದಿದೆ ಎಂದರು.

    ನ್ಯಾ.ಎ.ಜೆ.ಸದಾಶಿವ ಆಯೋಗದ ವರದಿಯ ಕುರಿತಿರುವ ಪರ-ವಿರೋಧದ ಬಗ್ಗೆ ಜಗದೀಶ್ ಬೆಟ್ಟಳ್ಳಿಯವರು ವಿವರಿಸಿದರು.  ಗುರುನಾಥ ದಾನಪ್ಪನವರ, ಉಡಚಪ್ಪ ಹಳ್ಳಿಕೇರಿ, ಗದಗ-ಬೆಟಗೇರಿ ನಗರಸಭಾಧ್ಯಕ್ಷೆ ಉಷಾ ದಾಸರ, ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ, ಅಶೋಕ‌ ಕುಡತಿನಿ, ಮಂಜುನಾಥ ಕೊಟ್ನೆಕಲ್, ಚಂದ್ರಶೇಖರ್ ಮಾದರ್ ಮೋಹನ್ ಗುತ್ತೆಮ್ಮನವರಹಲವರು ಇದ್ದರು

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts