More

    ಗಿಡ ನೆಟ್ಟು ವಿಶ್ವ ಪರಿಸರ ದಿನ ಆಚರಣೆ

    ಕುಶಾಲನಗರ: ಸಮೀಪದ ಮುಳ್ಳುಸೋಗೆ ಸರ್ಕಾರಿ ಶಾಲೆಯ ಆವರಣದಲ್ಲಿ ಶುಕ್ರವಾರ ಕರ್ನಾಟಕ ಕಾವಲು ಪಡೆ ವತಿಯಿಂದ ವಿವಿಧ ಬಗ್ಗೆಯ ಹಣ್ಣಿನ ಗಿಡಗಳನ್ನು ನೆಡುವ ಮೂಲಕ ವಿಶ್ವ ಪರಿಸರ ದಿನವನ್ನು ಆಚರಿಸಲಾಯಿತು.

    ಈ ಸಂದರ್ಭದಲ್ಲಿ ಕಾವಲು ಪಡೆ ಜಿಲ್ಲಾಧ್ಯಕ್ಷ ಎಂ.ಕೃಷ್ಣ ಮಾತನಾಡಿ, ಸುತ್ತಮುತ್ತಲಿನ ಪ್ರದೇಶಗಳಲ್ಲಿ ಗಿಡ, ಮರಗಳನ್ನು ಬೆಳೆಸಲು ಪ್ರತಿಯೊಬ್ಬರು ಮುಂದಾಗಬೇಕು. ಪ್ರತಿ ಮನೆಯಲ್ಲೂ ಮರ, ಗಿಡಗಳನ್ನು ಬೆಳೆಸುವ ಮೂಲಕ ಮುಂದಿನ ಪೀಳಿಗೆಗೂ ಹಸಿರು ಪರಿಸರವನ್ನು ಬಿಟ್ಟುಕೊಡಬೇಕು. ಮುಂದಿನ ಪೀಳಿಗೆಗೆ ಈಗಿನಿಂದಲೇ ಪರಿಸರದ ಬಗ್ಗೆ ಜಾಗೃತಿ ಮೂಡಿಸುವ ಕೆಲಸವನ್ನು ಮಾಡಬೇಕೆಂದು ಸಲಹೆ ನೀಡಿದರು.

    ಇದೇ ಸಂದರ್ಭ ಕೈಗಾರಿಕಾ ಬಡಾವಣೆಯಲ್ಲಿ 50ಕ್ಕೂ ಹೆಚ್ಚು ಗಿಡಗಳನ್ನು ನೆಡಲಾಯಿತು. ಕಾರ್ಯಕ್ರಮದಲ್ಲಿ ನಗರ ಮಹಿಳಾ ಘಟಕದ ಇಂದಿರಾ, ಸದಸ್ಯೆ ರಮ್ಯಾ ಕಾರ್ತಿಕ್, ಅಬಕಾರಿ ಇಲಾಖೆಯ ರಕ್ಷಕ ಜಗದೀಶ್, ತುಳಸಿರಾಮ್, ದೀಪಕ್ ಕುಮಾರ್, ಗಿರಿ ಮತ್ತು ಮಂಜುನಾಥ್ ಹಾಜರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts