More

    ಆರು ಗಂಟೆ ಒಳಗೆ ಆರೋಪಿ ಅಂಧರ್

    ಮಡಿಕೇರಿ: ಹಣದ ಆಸೆಗೆ ತನ್ನ ಸಹೋದರನ ಮನೆಯಲ್ಲಿ ಲಕ್ಷಾಂತರ ರೂಪಾಯಿ ಹಾಗೂ ಚಿನ್ನಾಭರಣ ಕದ್ದ ಆರೋಪಿಯನ್ನು ಮಡಿಕೇರಿ ನಗರ ಪೊಲೀಸರು ಮಿಂಚಿನ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

    ನಗರದ ಎಸ್ಪಿ ಕಚೇರಿಯಲ್ಲಿ ಶುಕ್ರವಾರ ಸುದ್ದಿಗೋಷ್ಠಿ ನಡೆಸಿ ಮಾಹಿತಿ ನೀಡಿದ ಎಸ್ಪಿ ಡಾ.ಸುಮನ್ ಡಿ.ಪನ್ನೇಕರ್, ಜೂ. 4 ರಂದು ನಗರದ ಪಿಡಬ್ಯುಡಿ ವಸತಿ ಗೃಹದ ಲೋಕೋಪಯೋಗಿ ಇಲಾಖೆ ನೌಕರ ಅರುಣ್ ಕುಮಾರ್ ಎಂಬುವವರ ಮನೆಯಲ್ಲಿ ಕಳ್ಳತನ ನಡೆದಿದೆ. ತನಿಖೆ ನಡೆಸಿದ ಪೊಲೀಸರು ಆರೋಪಿ ಸಂತೋಷ್ (36) ನನ್ನು ವಶಕ್ಕೆ ಪಡೆದಿದ್ದಾರೆ ಎಂದರು.

    ಅಂದು ಮನೆಯಲ್ಲಿ ಯಾರು ಇಲ್ಲದ ವೇಳೆಯಲ್ಲಿ ಲಾಕರ್‌ನಲ್ಲಿ ಇಟ್ಟಿದ್ದ 4.50 ಲಕ್ಷ ರೂಪಾಯಿ ಹಾಗೂ 7.20 ಲಕ್ಷ ಮೌಲ್ಯದ ಚಿನ್ನಾಭರಣಗಳನ್ನು ಆರೋಪಿ ಕಳ್ಳತನ ಮಾಡಿದ್ದಾನೆ. ಈ ಸಂಬಂಧವಾಗಿ ಅರುಣ್ ಕುಮಾರ್ ದೂರು ಸಲ್ಲಿಸಿದ್ದರು. ಹಾಸನ ಮೂಲಕ ಶಿವಮೊಗ್ಗಕ್ಕೆ ತೆರಳುತ್ತಿದ್ದ ಆರೋಪಿಯನ್ನು ಮಾಲಿನ ಸಮೇತ ಕೇವಲ 6 ಗಂಟೆ ಅವಧಿಯಲ್ಲಿ ಪೊಲೀಸರು ಬಂಧಿಸಿದ್ದಾರೆ ಎಂದು ತಿಳಿಸಿದರು.

    ಎಸ್ಪಿ ಸುಮನ್ ಡಿ.ಪನ್ನೇಕರ್ ನಿರ್ದೇಶನದಲ್ಲಿ, ಡಿವೈಎಸ್ಪಿ ದಿನೇಶ್ ಕುಮಾರ್, ಸಿಪಿಐ ಅನೂಪ್ ಮಾದಪ್ಪ ಮಾರ್ಗದರ್ಶನದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ನಗರ ಉಪನಿರೀಕ್ಷಕಿ ಅಂತಿಮಾ, ಸಿಬ್ಬಂದಿ ಕಿರಣ್, ಚರ್ಮಣ್ಣ, ಅಪರಾಧ ಪತ್ತೆ ಕರ್ತವ್ಯದ ಸಿಬ್ಬಂದಿ ಶ್ರೀನಿವಾಸ್, ಬಿ.ಕೆ.ಪ್ರವೀಣ್, ನಾಗರಾಜ್ ಕಡಗನ್ನವರ್, ಅರುಣ್ ಕುಮಾರ್, ಪ್ರಸನ್ನ ಕುಮಾರ್, ಮಹದೇವ ಸ್ವಾಮಿ, ಸುನಿಲ್, ಶಶಿಕುಮಾರ್, ಭವಾನಿ ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts