More

    ನಗರಕ್ಕೆ ದಾಂಗುಡಿ ಇಟ್ಟ ಜನತೆ

    ಸಂತೆ ರದ್ದಾದರೂ ಮಾರುಕಟ್ಟೆಯಲ್ಲಿ ಜನದಟ್ಟಣೆ, ಮಾಸ್ಕ್ ಧರಿಸದವರಿಗೆ ಪೊಲೀಸರ ಬಿಸಿ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಕರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆ ಮುಂಜಾಗ್ರತಾ ಕ್ರಮವಾಗಿ ಮಡಿಕೇರಿ ಸಂತೆ ರದ್ದುಗೊಳಿಸಿದ್ದರೂ ಶುಕ್ರವಾರ ನಗರಕ್ಕೆ ಆಗಮಿಸಿದ ಜನರ ಸಂಖ್ಯೆ ಹೆಚ್ಚಾಗಿತ್ತು.
    ಜಿಲ್ಲೆಯಲ್ಲಿ ಒಂದು ವಾರದ ಅವಧಿಯಲ್ಲಿ 27 ಕರೊನಾ ಸೋಂಕು ಪತ್ತೆಯಾದ ಹಿನ್ನೆಲೆಯಲ್ಲಿ ಮಡಿಕೇರಿ ಸಂತೆಯನ್ನು ರದ್ದುಗೊಳಿಸಿ ನಗರಸಭೆ ಪೌರಾಯುಕ್ತ ಶ್ರೀನಿವಾಸ್ ಆದೇಶ ಹೊರಡಿಸಿದ್ದರು. ಆದರೂ ಜನ ಹೆಚ್ಚಿನ ಸಂಖ್ಯೆಯಲ್ಲಿ ನಗರದತ್ತ ಹೆಜ್ಜೆ ಹಾಕಿದ್ದರು. ಗ್ರಾಮೀಣ ಭಾಗದ ನಿವಾಸಿಗಳಂತೂ ಯಾವುದೇ ಅಂತರ ಕಾಯ್ದುಕೊಳ್ಳದೆ ಅಗತ್ಯ ವಸ್ತುಗಳನ್ನು ಮುಗಿಬಿದ್ದು ಖರೀದಿಸುತ್ತಿದ್ದ ಚಿತ್ರಣ ಕಂಡುಬಂತು.
    ತರಕಾರಿ ಮಾರಾಟ ಮಾಡದಂತೆ ಸೂಚನೆ ನೀಡಿದ್ದರೂ ಅಂಗಡಿಗಳ ಮುಂಭಾಗ ಬುಟ್ಟಿಗಳಲ್ಲಿ ತರಕಾರಿಗಳನ್ನಿಟ್ಟು ಮಾರುತ್ತಿದ್ದರು. ಸ್ಥಳಕ್ಕೆ ಆಗಮಿಸಿದ ಪೊಲೀಸರು ಅಂಗಡಿ ಮಾಲೀಕರಿಗೆ ಎಚ್ಚರಿಕೆ ನೀಡಿ ತರಕಾರಿ ಮಾರಾಟಕ್ಕೆ ತಡೆಯೊಡ್ಡಿದರು. ಮೀನು ಹಾಗೂ ಮಾಂಸ ಖರೀದಿಸಲು ಹೆಚ್ಚಿನ ಜನರು ಮುಗಿಬಿದ್ದರು. ಪೊಲೀಸರು ಸಾಮಾಜಿಕ ಅಂತರ ಕಾಯ್ದುಕೊಳ್ಳುವಂತೆ ಮನವಿ ಮಾಡುತ್ತಿದ್ದರಲ್ಲದೆ, ದಂಡ ಹಾಕುವ ಎಚ್ಚರಿಕೆ ನೀಡುತ್ತಿದ್ದರು. ಮಾಸ್ಕ್ ಧರಿಸದೆ ಸಂಚರಿಸಿದವರಿಗೆ ಪೊಲೀಸರು ಬಿಸಿ ಮುಟ್ಟಿಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts