More

    ಸಿಎಎ, ಎನ್‌ಆರ್‌ಸಿ ಜಾರಿಗೊಳಿಸಲು ಬಿಡೆವು


    ಮಡಿಕೇರಿ: ಸಿಎಎ, ಎನ್‌ಆರ್‌ಸಿ ಕಾಯ್ದೆ ವಿರೋಧಿಸಿ ಪ್ರಗತಿಪರ ಜನಾಂದೋಲನ ವೇದಿಕೆ ಜ.26ರಿಂದ ಮಡಿಕೇರಿಯ ಗಾಂಧಿ ಮೈದಾನದಲ್ಲಿ ಹಮ್ಮಿಕೊಂಡಿರುವ ನಿರಂತರ ಉಪವಾಸ ಸತ್ಯಾಗ್ರಹ ಮೂರನೇ ದಿನಕ್ಕೆ ಕಾಲಿಟ್ಟಿದೆ.

    ಉಪವಾಸ ಸತ್ಯಾಗ್ರಹದಲ್ಲಿ ಮಂಗಳವಾರ ಪಾಲ್ಗೊಂಡ ವಿವಿಧ ಸಂಘ ಸಂಸ್ಥೆಗಳ, ಪಕ್ಷಗಳ, ಸಂಘಟನೆಯ ಮುಖಂಡರು ಕಾಯ್ದೆ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

    ಪ್ರಗತಿಪರ ಜನಾಂದೋಲನ ಸಮಿತಿ ಪ್ರಧಾನ ಸಂಚಾಲಕ ವಿ.ಪಿ.ಶಶಿಧರ್ ಮಾತನಾಡಿ, ಆಡಳಿತಾರೂಢ ಪಕ್ಷಗಳು ಸಂವಿಧಾನವನ್ನು ಬದಲಾಯಿಸಲು ಹೊರಟಿದ್ದು, ಸಂವಿಧಾನದ ಆಶಯಕ್ಕೆ ಧಕ್ಕೆ ಉಂಟು ಮಾಡುತ್ತಿದೆ. ಧರ್ಮದ್ವೇಷಿ ರಾಜಕಾರಣ ಮಾಡುತ್ತಿರುವ ಸರ್ಕಾರದ ವಿರುದ್ಧ ಹಾಗೂ ಮಹತ್ವಪೂರ್ಣ ಸಂವಿಧಾನವನ್ನು ಉಳಿಸಿಕೊಳ್ಳುವ ನಿಟ್ಟಿನಲ್ಲಿ ಜ.26ರಿಂದ 5 ದಿನಗಳ ಕಾಲ ಉಪವಾಸ ಸತ್ಯಾಗ್ರಹ ನಡೆಸಲಾಗುತ್ತಿದೆ. ಜ.30ರಂದು ಎಲ್ಲ ಧರ್ಮದವರು ಒಟ್ಟಾಗಿ ಮಾನವ ಸರಪಳಿ ರಚಿಸಿ ಸತ್ಯಾಗ್ರಹ ಅಂತ್ಯಗೊಳಿಸುತ್ತೇವೆ ಎಂದರು.

    ಕಾರ್ಮಿಕ ಮುಖಂಡ ಭರತ್ ಮಾತನಾಡಿ, ಸಿಎಎ, ಎನ್‌ಆರ್‌ಸಿ ವಿರೋಧಿಸಿ ದೇಶಾದ್ಯಂತ ಹೋರಾಟ ನಡೆದಿದ್ದರೂ ಕೇಂದ್ರ ಸರ್ಕಾರದ ಹಠಮಾರಿತನ ತೋರುತ್ತಿರುವುದು ನಾಚಿಕೆಗೇಡಿನ ಸಂಗತಿ. ಮುಂದಿನ ದಿನಗಳಲ್ಲಿ ಹೋರಾಟವನ್ನು ತೀವ್ರಗೊಳಿಸಲಾಗುವುದು ಎಂದು ಎಚ್ಚರಿಸಿದರು.

    ಕಾಂಗ್ರೆಸ್ ಮುಖಂಡ ನೆರವಂಡ ಉಮೇಶ್ ಮಾತನಾಡಿ, ಎನ್‌ಆರ್‌ಸಿ, ಸಿಎಎ ಕಾಯ್ದೆಯನ್ನು ಯಾವುದೇ ಕಾರಣಕ್ಕೂ ಜಾರಿಗೊಳಿಸಬಾರದು ಎಂದು ಆಗ್ರಹಿಸಿದರು.

    ಕಾಂಗ್ರೆಸ್ ಮುಖಂಡರಾದ ತೆನ್ನೀರಾ ಮೈನಾ, ಟಿ.ಪಿ.ರಮೇಶ್, ಜುಲೇಕಾಬಿ, ಪ್ರಕಾಶ್ ಆಚಾರ್ಯ, ಕಾಂಗ್ರೆಸ್ ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಸುರೆಯಾ ಅಬ್ರಾರ್, ಜೆಡಿಎಸ್ ಪಕ್ಷದ ಲೀಲಾ ಶೇಷಮ್ಮ, ಸುನಂದಾ ಪ್ರಮುಖರಾದ ಬೇಬಿ ಮ್ಯಾಥ್ಯು ಮತ್ತಿತರರು ಇದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts