More

    ಜಿಲ್ಲೆಯಲ್ಲಿ ಬಿರುಸುಗೊಂಡ ಮಳೆ

    ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್ ಘೋಷಣೆ ನಡುವೆ ಉತ್ತಮ ಮಳೆಯಾಗುತ್ತಿದೆ. ಕಳೆದ ಮೂರು ದಿನಗಳಿಂದ ಜಿಲ್ಲೆಯ ಮೂರೂ ತಾಲೂಕುಗಳಲ್ಲೂ ಉತ್ತಮ ಮಳೆಯಾಗುತ್ತಿದೆ. ಮಡಿಕೇರಿ ತಾಲೂಕು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗಿರುವ ಬಗ್ಗೆ ವರದಿಯಾಗಿದ್ದು, ಸರಾಸರಿ 79.55 ಮಿ.ಮೀ.ನಷ್ಟು ಮಳೆಯಾಗಿದೆ. ವಿರಾಜಪೇಟೆ ತಾಲೂಕು ವ್ಯಾಪ್ತಿಯಲ್ಲಿ 59.07 ಮಿ.ಮೀ., ಸೋಮವಾರಪೇಟೆ ತಾಲೂಕು ವ್ಯಾಪ್ತಿಯಲ್ಲಿ 42.35 ಮಿ.ಮೀ. ಸರಾಸರಿ ಮಳೆ ದಾಖಲಾಗಿದೆ.

    ನಾಪೋಕ್ಲು ವ್ಯಾಪ್ತಿಯಲ್ಲಿ ಭಾರಿ ಮಳೆಯಾಗುತ್ತಿದ್ದು, 120.20 ಮಿ.ಮೀ.ನಷ್ಟು, ಭಾಗಮಂಡಲ ವ್ಯಾಪ್ತಿಯಲ್ಲಿ 58 ಮಿ.ಮೀ.ನಷ್ಟು ಸರಾಸರಿ ಮಳೆ ದಾಖಲಾಗಿದೆ. ಈ ಹಿನ್ನೆಲೆ ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿದೆ. ಭಾಗಮಂಡಲದ ತ್ರಿವೇಣಿ ಸಂಗಮದಲ್ಲೂ ನೀರಿನ ಪ್ರಮಾಣ ಅಧಿಕವಾಗುತ್ತಿದ್ದು, ಜಿಲ್ಲಾಡಳಿತ ವತಿಯಿಂದ ಅಗತ್ಯ ಮುನ್ನಚ್ಚರಿಕಾ ಕ್ರಮಗಳನ್ನು ಕೈಗೊಳ್ಳಲಾಗಿದೆ.

    ಭಾರಿ ಮಳೆಗೆ ಜಿಲ್ಲೆಯ ಹಲೆವೆಡೆ ಮರಗಳು ಧರೆಗುರುಳಿದ್ದು, ಗ್ರಾಮೀಣ ಭಾಗಗಳಲ್ಲಿ ವಿದ್ಯುತ್ ಕಣ್ಣಾಮುಚ್ಚಾಲೆಯಾಡುತ್ತಿದೆ. ಗಾಳಿ ಮಳೆಗೆ ನೆಲ್ಯಹುದಿಕೇರಿಯ ಕೆ.ಪಿ.ಎಸ್. ಶಾಲೆಯ ಆವರಣದಲ್ಲಿದ್ದ ಮರ ಮನೆಯೊಂದರ ಮೇಲೆ ಬಿದ್ದಿದ್ದು, ಮನೆಗೆ ಹಾನಿಯಾಗಿದೆ. ಮರ ತೆರವುಗೊಳಿಸಲು ಸ್ಥಳೀಯರು ಶಾಲಾ ಆಡಳಿತ ಮಂಡಳಿಗೆ ಮನವಿ ಮಾಡಿದ್ದರೂ ನಿರ್ಲಕ್ಷ್ಯ ತೋರಿದ್ದರಿಂದ ಮರ ತೆರವುಗೊಂಡಿಲ್ಲ ಎಂದು ಸ್ಥಳೀಯರು ಆರೋಪಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts