Friday, 16th November 2018  

Vijayavani

ಕೋರ್​​ ಕಮಿಟಿ ಸ್ಥಾನಕ್ಕಾಗಿ ಬಿಜೆಪಿಯಲ್ಲಿ ಫೈಟ್- ಶೋಭಾಗೆ ಸ್ಥಾನ ನೀಡಲು ಹೆಗಡೆ ಜತೆ ಬಿಎಸ್​ವೈ ಪೈಪೋಟಿ        ಮೈಸೂರು ಪಾಲಿಕೆ ಮೇಯರ್​, ಉಪ ಮೇಯರ್​ ಸ್ಥಾನಕ್ಕಿಂದು ಚುನಾವಣೆ: ಮೇಯರ್​ ಗಾದಿಗಾಗಿ ದೋಸ್ತಿಗಳ ಫೈಟ್​        ಅಯ್ಯಪ್ಪನ ದರ್ಶನಕ್ಕಾಗಿ ಕೇರಳದ ಕೊಚ್ಚಿಗೆ ಬಂದಿಳಿದ ಹೋರಾಟಗಾರ್ತಿ ತೃಪ್ತಿ ದೇಸಾಯಿಗೆ ಪ್ರತಿಭಟನೆ ಬಿಸಿ        ಗಜ ಚಂಡಮಾರುತ ಅಬ್ಬರ: ತಮಿಳುನಾಡಿನ ಕರಾವಳಿವಳಿಯಲ್ಲಿ ಜನ ತತ್ತರ, ರಾಜ್ಯದ ದಕ್ಷಿಣ ಒಳನಾಡಿನಲ್ಲೂ ಮಳೆ ಸಾಧ್ಯತೆ        ಕಬ್ಬಿಗೆ ಸಮರ್ಪಕ ಬೆಲೆ ನೀಡುವಂತೆ ಆಗ್ರಹಿಸಿ ಮುಧೋಳದಲ್ಲಿ ರೈತರ ಬೃಹತ್​ ಹೋರಾಟ       
Breaking News

ಮರಳು ಅಕ್ರಮ ಸಾಗಣೆ ಎರಡು ಪ್ರಕರಣ ಪತ್ತೆ

Monday, 11.06.2018, 5:15 AM       No Comments

ಮಡಿಕೇರಿ: ಮರಳನ್ನು ಅಕ್ರಮವಾಗಿ ಸಾಗಣೆ ಮಾಡುತ್ತಿದ್ದ ಹಾಗೂ ಕಳವು ಮಾಡಿ ಶೇಖರಿಸುತ್ತಿದ್ದ ಎರಡು ಪ್ರತ್ಯೇಕ ಪ್ರಕರಣಗಳನ್ನು ಪೊನ್ನಂಪೇಟೆ ಪೊಲೀಸರು ಪತ್ತೆ ಹಚ್ಚಿ ಮರಳು ಹಾಗೂ ಮೂರು ವಾಹನಗಳನ್ನು ವಶಪಡಿಸಿಕೊಂಡಿದ್ದಾರೆ.

ಜೂ.6ರಂದು ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಕ್ಕೆಸೊಡ್ಲೂರು ಗ್ರಾಮದ ಲಕ್ಷ್ಮಣತೀರ್ಥ ಹೊಳೆಯ ದಡದಲ್ಲಿ ಜೆ.ಸಿ.ಬಿ ಯಂತ್ರದಿಂದ ರವಿ ಮತ್ತು ಭಜನ್‌ದೇವಯ್ಯ ಎಂಬುವರು ಅಕ್ರಮವಾಗಿ ಮರಳನ್ನು ಲೋಡ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಸ್ಥಳಕ್ಕೆ ತೆರಳಿದ ಪೊಲೀಸರು ಸರ್ಕಾರದ ಪರವಾನಗಿ ಇಲ್ಲದೆ ಅಕ್ರಮವಾಗಿ ಮರಳು ಸಾಗಣೆ ಮಾಡಲು ಯತ್ನಿಸುತ್ತಿದ್ದವರನ್ನು ವಶಕ್ಕೆ ಪಡೆದು, ಪ್ರಕರಣ ದಾಖಲಿಸಿ, ತನಿಖೆ ಕೈಗೊಂಡಿದ್ದಾರೆ.

ಮತ್ತೊಂದು ಪ್ರಕರಣದಲ್ಲಿ ಜೂ.8 ರಂದು ಪೊನ್ನಂಪೇಟೆ ಪೊಲೀಸ್ ಠಾಣಾ ವ್ಯಾಪ್ತಿಯ ಬೆಕ್ಕೆಸೊಡ್ಲೂರು ಗ್ರಾಮದ ಲಕ್ಷ್ಮಣತೀರ್ಥ ಹೊಳೆಯ ದಡದಲ್ಲಿ ಚೆರಿಯಂಡ ರೋಷನ್ ಎಂಬುವರು ಅಕ್ರಮವಾಗಿ ಮರಳನ್ನು ಸಂಗ್ರಹಿಸುತ್ತಿದ್ದರು. ಮಾಹಿತಿ ಪಡೆದ ಪೊನ್ನಂಪೇಟೆ ಪಿಎಸ್‌ಐ ಮತ್ತು ಸಿಬ್ಬಂದಿ ಸ್ಥಳಕ್ಕೆ ತೆರಳಿ ಅಲ್ಲಿ ಅಕ್ರಮವಾಗಿ ಮರಳನ್ನು ತೆಗೆಯಲು ಉಪಯೋಗಿಸುತ್ತಿದ್ದ ಒಂದು ಕಬ್ಬಿಣದ ತೆಪ್ಪ ಹಾಗೂ ಮರಳನ್ನು ವಶಕ್ಕೆ ತೆಗೆದುಕೊಂಡಿದ್ದಾರೆ. ಆರೋಪಿ ರೋಷನ್ ವಿರುದ್ಧ ಪೊನ್ನಂಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್ ಐಪಿಎಸ್‌ರವರ ನಿರ್ದೇಶನದಂತೆ ಹಾಗೂ ವಿರಾಜಪೇಟೆ ಪೊಲೀಸ್ ಉಪ ಅಧೀಕ್ಷಕ ನಾಗಪ್ಪರವರ ಮಾರ್ಗದರ್ಶನದಲ್ಲಿ ಗೋಣಿಕೊಪ್ಪ ವೃತ್ತದ ಸರ್ಕಲ್ ಇನ್ಸ್‌ಪೆಕ್ಟರ್ ಕೆ.ಪಿ.ಹರಿಶ್ಚಂದ್ರ ಹಾಗೂ ಪೊನ್ನಂಪೇಟೆ ಠಾಣೆಯ ಪಿಎಸ್‌ಐ ಬಿ.ಜಿ.ಮಹೇಶ್ ಮತ್ತು ಸಿಬ್ಬಂದಿ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.

Leave a Reply

Your email address will not be published. Required fields are marked *

Back To Top