More

    ವೃತ್ತಿಯಲ್ಲಿ ಮೇಲು-ಕೀಳು ಇಲ್ಲ

    ಮಡಿಕೇರಿ: ‘ಕಾಯಕವೇ ಕೈಲಾಸ’ ಎಂಬಂತೆ ದುಡಿಮೆ ಮಾಡಬೇಕೇ ಹೊರತು, ವೃತ್ತಿಗಳಲ್ಲಿ ಮೇಲು-ಕೀಳೆಂಬ ಭಾವನೆ ಇರಬಾರದು ಎಂದು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಹೇಳಿದರು.


    ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಪೊಲೀಸ್ ಇಲಾಖೆ, ಕಾರ್ಮಿಕ ಇಲಾಖೆ, ಅಸಂಘಟಿತ ಕಾರ್ಮಿಕರ ಸಾಮಾಜಿಕ ಭದ್ರತಾ ಮಂಡಳಿ, ಕಟ್ಟಡ ಮತ್ತು ಇತರ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಸಹಯೋಗದಲ್ಲಿ ನಗರದ ಕಾವೇರಿ ಕಲಾ ಕ್ಷೇತ್ರದಲ್ಲಿ ಭಾನುವಾರ ಆಯೋಜಿಸಿದ್ದ ಕಾರ್ಮಿಕ ಸಮ್ಮಾನ ದಿನಾಚರಣೆಯನ್ನು ಉದ್ಘಾಟಿಸಿ ಮಾತನಾಡಿದರು.


    ಸಮಾಜದಲ್ಲಿ ಬಹಳಷ್ಟು ಕೆಳಸ್ತರದಲ್ಲಿ ದುಡಿಯುವ ಕಾರ್ಮಿಕರನ್ನು ಗುರುತಿಸಿ ಸನ್ಮಾನಿಸುವುದು ಸಂತಸದ ಸಂಗತಿ ಹಾಗೂ ಇದೊಂದು ವಿಶಿಷ್ಟಿ ಕಾರ್ಯಕ್ರಮ ಎಂದು ಬಣ್ಣಿಸಿದರು.


    ಎಲ್ಲ ವರ್ಗದ ಜನರ ದುಡಿಮೆಯಿಂದ ಸಮಾಜ ಪರಿಪೂರ್ಣವಾಗುತ್ತದೆ. ಕಾರ್ಮಿಕರು ಗಳಿಸಿದ್ದರಲ್ಲಿ ಸ್ವಲ್ಪ ಉಳಿಸಿ, ಮಕ್ಕಳಿಗೆ ಉತ್ತಮ ವಿದ್ಯಾಭ್ಯಾಸ ಕೊಡಿಸಬೇಕು. ಈ ಮೂಲಕ ಮುಖ್ಯವಾಹಿನಿಗೆ ಬರಬೇಕು ಎಂದರು.


    ತಾಲೂಕು ಕಾರ್ಮಿಕ ಅಧಿಕಾರಿ ಯತ್ನಟ್ಟಿ ಮಾತನಾಡಿ, ಕಾರ್ಮಿಕ ಮಂಡಳಿ ವತಿಯಿಂದ ಸ್ಮಾರ್ಟ್‌ಕಾರ್ಡ್ ವಿತರಣೆ ಕಾರ್ಯಕ್ರಮ ಪ್ರಾರಂಭಿಸಲಾಗಿದೆ. ಜಿಲ್ಲೆಯಲ್ಲಿ ಇದುವರೆಗೆ 1764 ಅರ್ಜಿಗಳು ಸಲ್ಲಿಕೆಯಾಗಿದ್ದು, 1067 ಸ್ಮಾರ್ಟ್‌ಕಾರ್ಡ್ ವಿತರಣೆಯಾಗಿವೆ. ಉಳಿದವರಿಗೂ ನೀಡಲಾಗುತ್ತದೆ ಎಂದು ತಿಳಿಸಿದರು.


    ಆಟೋ ಚಾಲಕರ ಸಂಘದ ಅಧ್ಯಕ್ಷ ಎಸ್.ಜಿ.ಮೇದಪ್ಪ, ಟೈಲರ್ಸ್ ಅಸೋಸಿಯೇಷನ್ ಅಧ್ಯಕ್ಷ ಆನಂದ್, ವಿರಾಜಪೇಟೆ ಮತ್ತು ಸೋಮವಾರಪೇಟೆ ತಾಲೂಕು ಕಾರ್ಮಿಕ ಅಧಿಕಾರಿ ಎಂ.ಮಹದೇವಸ್ವಾಮಿ ಇತರರಿದ್ದರು.

    90 ಕಾರ್ಮಿಕರಿಗೆ ಸನ್ಮಾನ: ಕಾರ್ಮಿಕ ಸಮ್ಮಾನ ದಿನಾಚರಣೆ ಪ್ರಯುಕ್ತ ಅಂಬೇಡ್ಕರ್ ಕಾರ್ಮಿಕ ಸಹಾಯ ಹಸ್ತ ಯೋಜನೆಯಡಿ ಆಯ್ಕೆಯಾದ 11 ವಲಯದ ಅಸಂಘಟಿತ ಕಾರ್ಮಿಕರು ಹಾಗೂ ಕರ್ನಾಟಕ ರಾಜ್ಯ ಖಾಸಗಿ ವಾಣಿಜ್ಯ ಸಾರಿಗೆ ಕಾರ್ಮಿಕರ ಅಪಘಾತ ಪರಿಹಾರ ಯೋಜನೆಯಡಿ ಆಯ್ಕೆಯಾದ 1 ವಲಯದ ಒಟ್ಟು 90 ಕಾರ್ಮಿಕರಿಕೆ ‘ಶ್ರಮ ಸಮ್ಮಾನ ಪ್ರಶಸ್ತಿ’ ಮತ್ತು ‘ವಿಶೇಷ ಪುರಸ್ಕಾರ’ ನೀಡಿ ಗೌರವಿಸಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts