ಎನ್‌ಸಿಸಿ ನವೀಕರಣಗೊಂಡ ಕಟ್ಟಡ ಉದ್ಘಾಟನೆ

ಮಡಿಕೇರಿ: ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕಚೇರಿ ಸಮೀಪವಿರುವ 19ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ನವೀಕರಣಗೊಂಡ ಕಟ್ಟಡವನ್ನು ಎನ್‌ಸಿಸಿ ಡೈರೆಕ್ಟರ್ ಜನರಲ್ ಮತ್ತು ಲೆಫ್ಟಿನೆಂಟ್ ಜನರಲ್ ಎವಿಎಸ್‌ಎಂ ರಾಜೀವ್ ಛೋಪ್ರ ಅವರು ಗುರುವಾರ ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು, ಭಾರತೀಯ ಸೇನೆಯಲ್ಲಿ ಕೊಡಗಿನ ಸೇನಾನಿಗಳು ಪ್ರಮುಖ ಹುದ್ದೆಗಳಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸೇನೆಯಲ್ಲಿ ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ ಕಾರ್ಯಪ್ಪ, ಜನರಲ್ ಕೆ.ಎಸ್.ತಿಮ್ಮಯ್ಯ ಅವರ ಸೇವೆ ಅವಿಸ್ಮರಣೀಯವಾಗಿದೆ. ಅವರ ದೇಶ ಸೇವೆಯು ಸೇನೆಗೆ ಸೇರುವವರಿಗೆ ಮಾದರಿ ಎಂದು ಹೇಳಿದರು.
ಅತಿವೃಷ್ಟಿ ಸಂಭವಿಸಿದ್ದ ಸಂದರ್ಭದಲ್ಲಿ ಎನ್‌ಸಿಸಿ ಕೆಡೆಟ್‌ಗಳು ಸಾರ್ವಜನಿಕರ ಸೇವೆಗೆ ಅಗತ್ಯವಾಗಿ ಶ್ರಮಿಸಿದ್ದು, ಇವರ ಸೇವೆ ಪ್ರಶಂಸನೀಯವಾಗಿದೆ. ನೂತನ ಕಟ್ಟಡ ಎನ್‌ಸಿಸಿ ಕೆಡೆಟ್‌ಗಳಿಗೆ ಹೆಚ್ಚಿನ ಅನುಕೂಲವಾಗಲಿದ್ದು, ಉತ್ತಮ ತರಬೇತಿ ನೀಡಲು ಸಹಕಾರಿಯಾಗಿದೆ. ಕಟ್ಟಡ ಉತ್ತಮ ರೀತಿಯಲ್ಲಿ ಸದುಪಯೋಗ ಪಡಿಸಿಕೊಳ್ಳಬೇಕು ಕರೆ ನೀಡಿದರು.
ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ಬಿ.ರಾಘವ್ ಮಾತನಾಡಿ, 1954ರಿಂದ ಮಡಿಕೇರಿಯಲ್ಲಿನ ಎನ್‌ಸಿಸಿ ಹಳೇ ಕಟ್ಟಡದಲ್ಲಿ ಕಾರ್ಯನಿರ್ವಹಿಸುತ್ತಿದ್ದು, ಕಳೆದ ವರ್ಷ ಸಂಭವಿಸಿದ ಪ್ರಕೃತಿ ವಿಕೋಪದಿಂದ ಹಾನಿಗೊಂಡಿದೆ. ಕರ್ನಾಟಕ, ಗೋವಾ ಡೈರೆಕ್ಟರೇಟ್‌ನ ಡೆಪ್ಯೂಟಿ ಡೈರೆಕ್ಟರ್ ಜನರಲ್ ಹಾಗೂ ಮಡಿಕೇರಿಯ ಕಮಾಂಡಿಂಗ್ ಆಫೀಸರ್ ಇವರ ಸಹಕಾರದಿಂದ ಕಟ್ಟಡ ರೂಪುಗೊಂಡಿದ್ದು ಸಂತಸ ತಂದಿದೆ ಎಂದರು.
19ನೇ ಕರ್ನಾಟಕ ಬೆಟಾಲಿಯನ್‌ನ ಕಮಾಂಡಿಂಗ್ ಆಫೀಸರ್ ಕರ್ನಲ್ ವಿ.ಎಂ.ನಾಯಕ್, ಮಂಗಳೂರಿನ ಗ್ರೂಪ್ ಕಮಾಂಡರ್ ಕರ್ನಲ್ ಅನಿಲ್ ನಾಟಿಯಾಲ್, ಬ್ರಿಗೇಡಿಯರ್ ಪೂರ್ವಿನಾಥ್ ವಿಎಸ್‌ಎಂ, ಎನ್‌ಸಿಸಿ ಅಧಿಕಾರಿ ನ್ಯಾನ್ಸಿ ಶೀಲಾ, ಎನ್‌ಸಿಸಿ ಕೆಡೆಟ್‌ಗಳು ಇದ್ದರು.

16ಆದರ್ಶ್‌ಕೆಡಿಜಿಎ4:

19ನೇ ಕರ್ನಾಟಕ ಬೆಟಾಲಿಯನ್ ಎನ್‌ಸಿಸಿ ನವೀಕರಣಗೊಂಡ ಕಟ್ಟಡವನ್ನು ಎನ್‌ಸಿಸಿ ಡೈರೆಕ್ಟರ್ ಜನರಲ್ ಮತ್ತು ಲೆಫ್ಟಿನೆಂಟ್ ಜನರಲ್ ಎವಿಎಸ್‌ಎಂ ರಾಜೀವ್ ಛೋಪ್ರರವರು ಗುರುವಾರ ಉದ್ಘಾಟಿಸಿದರು. ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನ ಎನ್‌ಸಿಸಿ ಅಧಿಕಾರಿ ಮೇಜರ್ ಡಾ.ಬಿ.ರಾಘವ್, ಕರ್ನಲ್ ವಿ.ಎಂ.ನಾಯಕ್, ಕರ್ನಲ್ ಅನಿಲ್ ನಾಟಿಯಾಲ್ ಸೇರಿದಂತೆ ಇತರರು ಇದ್ದರು.

Leave a Reply

Your email address will not be published. Required fields are marked *