More

    ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿ

    ಮಡಿಕೇರಿ: ಕಳೆದ ಮೂರು ದಿನಗಳಿಂದ ಕೊಡಗು ಜಿಲ್ಲೆಯಲ್ಲಿ ಧಾರಾಕಾರ ಮಳೆಯಾಗುತ್ತಿದ್ದು, ಮಂಗಳವಾರ ಭಾಗಮಂಡಲ ತ್ರಿವೇಣಿ ಸಂಗಮ ಭರ್ತಿಯಾಗಿದೆ.

    ಕಾವೇರಿ ನದಿ ನೀರಿನ ಮಟ್ಟ ಹೆಚ್ಚುತ್ತಲೇ ಇದ್ದು, ಭಾಗಮಂಡಲ ಮತ್ತು ಸಂಪರ್ಕ ರಸ್ತೆಯ ಮೇಲೆ ನದಿ ನೀರು ಹರಿಯುತ್ತಿರುವ ಪರಿಣಾಮ ಈ ರಸ್ತೆ ಬಂದ್ ಆಗಿದೆ. ಪೊಲೀಸರು ಮುನ್ನೆಚ್ಚರಿಕೆ ಕ್ರಮ ಕೈಗೊಂಡಿದ್ದು, ಬ್ಯಾರಿಕೇಡ್‌ಗಳನ್ನು ಅಳವಡಿಸಿ ರಸ್ತೆ ಮಾರ್ಗವನ್ನು ಬಂದ್ ಮಾಡಿದ್ದಾರೆ. ಮಂಗಳವಾರ ಸಂಜೆ ಭಾರಿ ಮಳೆಯಿಂದಾಗಿ ತಲಕಾವೇರಿ ಬಳಿ ಗುಡ್ಡ ಕುಸಿದಿದೆ. ಆದರೆ ಯಾವುದೇ ಅನಾಹುತ ಸಂಭವಿಸಿಲ್ಲ.

    ನಾಪೋಕ್ಲು ಸಂಪರ್ಕ ರಸ್ತೆ ಪೂರ್ಣ ಬಂದಾಗಿದೆ. ಇನ್ನು ತಲಕಾವೇರಿ, ಚೇರಂಗಾಲಕ್ಕೆ ಸಂಪರ್ಕ ಕಡಿತಗೊಂಡಿದೆ. ಎರಡು ದಿನಗಳಿಂದ 75 ಇಂಚಿಗೂ ಅಧಿಕ ಮಳೆಯಾಗಿದ್ದು, ಕಳೆದ ವರ್ಷ ಈ ಅವಧಿಯಲ್ಲಿ 42 ಇಂಚು ಮಳೆಯಾಗಿತ್ತು.

    ತಡೆಗೋಡೆ ಕುಸಿತ: ಮಡಿಕೇರಿ, ನಾಪೋಕ್ಲು, ಭಾಗಮಂಡಲ, ತಲಕಾವೇರಿ ವ್ಯಾಪ್ತಿಯಲ್ಲಿ ಜೋರು ಮಳೆಯಾಗುತ್ತಿದೆ. ಮಡಿಕೇರಿ ನಗರ ವ್ಯಾಪ್ತಿಯಲ್ಲಿ ಮಂಗಳವಾರ ದಿನವಿಡೀ ಸುರಿದ ಮಳೆಯಿಂದಾಗಿ ಮಡಿಕೇರಿಯ ಆಕಾಶವಾಣಿ ಸಮೀಪ ನಿರ್ಮಾಣ ಹಂತದಲ್ಲಿದ್ದ ತಡೆಗೋಡೆ ಮಣ್ಣು ಸಣ್ಣ ಪ್ರಮಾಣದಲ್ಲಿ ಕುಸಿದಿದೆ.

    ರಸ್ತೆ ಸಮೀಪ ಬರೆ ಕುಸಿಯುವುದನ್ನು ತಡೆಗಟ್ಟಲು ತಡೆಗೋಡೆ ಕಟ್ಟಲಾಗುತ್ತಿತ್ತು. ಮುಂಜಾನೆಯಿಂದಲೇ ಮಡಿಕೇರಿಯಲ್ಲಿ ಸುರಿದ ಮಳೆಯಿಂದ ತಡೆಗೋಡೆ ಕುಸಿದು ಬಿದ್ದಿದೆ. ತಡೆಗೋಡೆ ಕಟ್ಟುತ್ತಿದ್ದ ಕಾರ್ಮಿಕರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಸ್ಥಳಕ್ಕೆ ನಗರಸಭೆ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts