More

    ಪುನರ್ವಸತಿ ಮನೆ ವಿತರಣೆ ಇಂದು

    ಮಡಿಕೇರಿ: ಜಿಲ್ಲಾಡಳಿತ, ರಾಜೀವ್ ಗಾಂಧಿ ವಸತಿ ನಿಗಮ ನಿಯಮಿತ ವತಿಯಿಂದ 2018ರಲ್ಲಿ ಜಿಲ್ಲೆಯಲ್ಲಿ ಸಂಭವಿಸಿದ ಪ್ರಕೃತಿ ವಿಕೋಪದಿಂದ ಮನೆ ಕಳೆದುಕೊಂಡ ಸಂತ್ರಸ್ತರ ಪುನರ್ವಸತಿಗಾಗಿ ನಿರ್ಮಿಸಿರುವ ಬಡಾವಣೆಗಳ ಉದ್ಘಾಟನೆ ಹಾಗೂ ಮನೆಗಳ ವಿತರಣೆ ಕಾರ್ಯಕ್ರಮ ಜೂ.4 ರಂದು ಆಯೋಜಿಸಲಾಗಿದೆ.

    ಬೆಳಗ್ಗೆ 11ಕ್ಕೆ ಸೋಮವಾರಪೇಟೆ ತಾಲೂಕಿನ ಜಂಬೂರು ಗ್ರಾಮದ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಬಡಾವಣೆ ಮತ್ತು ಮಧ್ಯಾಹ್ನ 12.30ಕ್ಕೆ ಮಡಿಕೇರಿ ತಾಲೂಕಿನ ಮದೆ ಗ್ರಾಮದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದ ಉದ್ಘಾಟನೆಯನ್ನು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೆರವೇರಿಸಲಿದ್ದಾರೆ. ವಸತಿ ಸಚಿವ ವಿ.ಸೋಮಣ್ಣ ಮತ್ತು ಕಂದಾಯ ಸಚಿವ ಆರ್.ಅಶೋಕ್ ಪಾಲ್ಗೊಳ್ಳಲಿದ್ದಾರೆ.

    ಜಂಬೂರಿನಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಡಿಕೇರಿ ಶಾಸಕರು ಹಾಗೂ ಮದೆ ಗ್ರಾಮದಲ್ಲಿ ನಡೆಯುವ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಿರಾಜಪೇಟೆ ಶಾಸಕ ಕೆ.ಜಿ.ಬೋಪಯ್ಯ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಮೈಸೂರು-ಕೊಗಡು ಸಂಸದ, ಜಿ.ಪಂ. ಅಧ್ಯಕ್ಷ ಬಿ.ಎ.ಹರೀಶ್, ಎಂಎಲ್ಸಿ ಎಂ.ಪಿ.ಸುನೀಲ್ ಸುಬ್ರಮಣಿ, ಶಾಂತೆಯಂಡ ವೀಣಾ ಅಚ್ಚಯ್ಯ, ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್, ಎಸ್ಪಿ ಸುಮನ್ ಡಿ.ಪನ್ನೇಕರ್, ಜಿ.ಪಂ.ಸಿಇಒ ಕೆ.ಲಕ್ಷ್ಮೀಪ್ರಿಯ ಇತರರು ಪಾಲ್ಗೊಳ್ಳಲಿದ್ದಾರೆ.

    ಯಾರ‌್ಯಾರಿಗೆ ಮನೆ: ಜಂಬೂರಿನಲ್ಲಿ ನಿರ್ಮಿಸಿರುವ ಮನೆಗಳನ್ನು ಮಕ್ಕಂದೂರು, ಹೆಮ್ಮೆತಾಳು, ಮುಕ್ಕೋಡ್ಲು, ಆವಂಡಿ, ಹೊದಕಾನ, ಮೇಘತ್ತಾಳು, ಮಡಿಕೇರಿ ನಗರ, ಹಾಲೇರಿ, ಕಾಂಡನಕೊಲ್ಲಿ, ಹಾಡಗೇರಿ, ಮುವತ್ತೋಕ್ಲು, ಕಡಂದಾಳು, ಗರ್ವಾಲೆ, ಅತ್ತೂರು ನಲ್ಲೂರು, 2 ನೇ ಮೊಣ್ಣಂಗೇರಿ, ಕರ್ಣಂಗೇರಿ, ಜೋಡುಪಾಲ, ಮದೆ, ಕಾಟಕೇರಿ ಮತ್ತಿತರ ಗ್ರಾಮದ ಸಂತ್ರಸ್ತರಿಗೆ ಹಸ್ತಾಂತರಿಸಲಾಗುತ್ತದೆ.

    ಮದೆ ಗ್ರಾಮದ ಬಳಿ ನಿರ್ಮಿಸಿರುವ ಮನೆಗಳನ್ನು 2ನೇ ಮೊಣ್ಣಂಗೇರಿ, ಜೋಡುಪಾಲ, ಕಾಟಕೇರಿ, ಹೆರವನಾಡು, ಮತ್ತಿತರ ಗ್ರಾಮಗಳ ಸಂತ್ರಸ್ತರಿಗೆ ಮನೆ ಹಸ್ತಾಂತರ ಮಾಡಲಾಗುತ್ತಿದೆ ಎಂದು ಉಪ ವಿಭಾಗಾಧಿಕಾರಿ ಟಿ.ಜವರೇಗೌಡ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts