More

    ಜಿಲ್ಲೆಯ ಜನರ ಪ್ರೀತಿಗೆ ಆಭಾರಿ

    ಮಡಿಕೇರಿ: ಜಿಲ್ಲಾಡಳಿತದೊಂದಿಗೆ 2 ವರ್ಷಗಳ ಕಾಲ ಕಾರ್ಯನಿರ್ವಹಿಸಿದ್ದು ಖುಷಿ ತಂದಿದೆ. ಜಿಲ್ಲೆಯ ಜನರು ಮತ್ತು ಅಧಿಕಾರಿಗಳ ಪ್ರೀತಿಗೆ ಆಭಾರಿಯಾಗಿದ್ದೇನೆ ಎಂದು ನಿರ್ಗಮಿತ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ.ಸುಮನ್ ಡಿ.ಪನ್ನೇಕರ್ ಸಂತಸ ವ್ಯಕ್ತಪಡಿಸಿದರು.

    ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸೋಮವಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಮತ್ತು ಪೊಲೀಸ್ ಇಲಾಖೆ ವತಿಯಿಂದ ನಿರ್ಗಮಿತ ಎಸ್.ಪಿ.ಡಾ.ಸುಮನ್ ಡಿ.ಪನ್ನೇಕರ್ ಅವರಿಗೆ ಬೀಳ್ಕೊಡುಗೆ ಮತ್ತು ನೂತನ ಎಸ್.ಪಿ.ಯಾಗಿ ಅಧಿಕಾರ ವಹಿಸಿಕೊಂಡ ಕ್ಷಮಾ ಮಿಶ್ರ ಅವರ ಸ್ವಾಗತ ಕಾರ್ಯಕ್ರಮದಲ್ಲಿ ಮಾತನಾಡಿದರು.

    ಪೊಲೀಸ್ ಇಲಾಖೆಯೊಂದಿಗೆ ಇತರ ಇಲಾಖೆಗಳು ಸಾಕಷ್ಟು ಸಮನ್ವಯತೆಯಿಂದ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿದೆ. ರಾಜ್ಯದ ಬೇರೆ ಜಿಲ್ಲೆಗಳಲ್ಲಿ ಇಂತಹ ವಾತಾವರಣ ಸಿಗುವುದು ತೀರ ಅಪರೂಪ ಎಂದು ಹೇಳಿದರು.

    ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಮಾತನಾಡಿ, ಡಾ.ಸುಮನ್ ಡಿ.ಪನ್ನೇಕರ್ ಅವರೊಂದಿಗೆ ಕಾರ್ಯನಿರ್ವಹಿಸಿದ್ದು ಸಂತಸದ ವಿಷಯ. ಜಿಲ್ಲಾಮಟ್ಟದ ಎಲ್ಲ ಇಲಾಖೆಗಳಿಗೂ ಪೊಲೀಸ್ ಇಲಾಖೆಯೊಂದಿಗೆ ಸಾಕಷ್ಟು ಸಮನ್ವಯತೆ ಇತ್ತು. ಜಿಲ್ಲೆಯಲ್ಲಿ ಎದುರಾದ ಸಾಕಷ್ಟು ಸನ್ನಿವೇಶಗಳಲ್ಲಿ ಬಹಳಷ್ಟು ಧೈರ್ಯದಿಂದ ಸುಮನ್ ಅವರು ಕೆಲಸ ನಿರ್ವಹಿಸಿದ್ದಾರೆ ಎಂದರು.

    ನೂತನ ಎಸ್ಪಿ ಕ್ಷಮಾ ಮಿಶ್ರ ಮಾತನಾಡಿ, ಡಾ.ಸುಮನ್.ಡಿ.ಪನ್ನೇಕರ್ ಅವರ ಜನಸ್ನೇಹಿ ಕಾರ್ಯವನ್ನು ಮುಂದುವರಿಸಲು ಬಯಸುತ್ತೇನೆ. ಇದಕ್ಕೆ ಎಲ್ಲರ ಸಹಕಾರ ಅಗತ್ಯ ಎಂದರು.

    ಡಾ.ಸುಮನ್.ಡಿ.ಪನ್ನೇಕರ್ ಅವರಿಗೆ ಜಿಲ್ಲಾಡಳಿತ ವತಿಯಿಂದ ಜಿಲ್ಲಾಧಿಕಾರಿ ಅನೀಸ್ ಕಣ್ಮಣಿ ಜಾಯ್ ಫಲ ತಾಂಬೂಲ ನೀಡಿ ಆತ್ಮೀಯವಾಗಿ ಬೀಳ್ಕೊಡುಗೆ ನೀಡಿದರು. ಹೆಚ್ಚುವರಿ ಜಿಲ್ಲಾಧಿಕಾರಿ ಸ್ನೇಹಾ, ಉಪವಿಭಾಗಾಧಿಕಾರಿ ಟಿ.ಜವರೇಗೌಡ, ಡಿವೈಎಸ್ಪಿ ದಿನೇಶ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಪಿ.ಚಂದನ್, ಐಟಿಡಿಪಿ ಇಲಾಖೆಯ ಯೋಜನಾ ಸಮನ್ವಯಾಧಿಕಾರಿ ಶಿವಕುಮಾರ್, ಜಿ.ಪಂ. ಉಪಕಾರ್ಯದರ್ಶಿ ಗುಡೂರು ಭೀಮ ಸೇನ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕಿ ಅರುಂಧತಿ, ಡಿಎಚ್‌ಒ ಮೋಹನ್ ಇತರರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts