ಸಾಲಬಾಧೆಗೆ ವ್ಯಕ್ತಿ ಆತ್ಮಹತ್ಯೆ

ಮಡಿಕೇರಿ: ಸಮೀಪದ ಮೇಕೇರಿ ಗ್ರಾಮದಲ್ಲಿ ಸಾಲಬಾಧೆಯಿಂದ ವ್ಯಕ್ತಿಯೊಬ್ಬರು ಮಂಗಳವಾರ ಸಂಜೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಗುರುವಪ್ಪ (45) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಈತ 2 ಲಕ್ಷ ರೂ. ಕೈಸಾಲ ಮಾಡಿಕೊಂಡಿದ್ದ. ಅಲ್ಲದೆ, ಮದುವೆಯಾಗಿಲ್ಲ ಎಂದು ಜಿಗುಪ್ಸೆಗೊಂಡಿದ್ದ. ಮನೆಯ ಸಮೀಪವಿದ್ದ ಕಾಡಿನಲ್ಲಿ ಮರವೊಂದಕ್ಕೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಆತನ ತಂಗಿ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಮೃತ ವ್ಯಕ್ತಿಗೆ ಇಬ್ಬರು ತಂಗಿಯರು ಇದ್ದಾರೆ.
ಸ್ಥಳಕ್ಕೆ ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

Your email address will not be published. Required fields are marked *