More

    ಬಡ ಜನರ ಉದ್ಧಾರಕ ಮಡಿವಾಳ ಮಾಚಿದೇವ

    ಬಳ್ಳಾರಿ : ಶಿವ ಶರಣರು, ವಚನಕಾರರು ಸಮಾಜದ ಶಾಶ್ವತ ಆಸ್ತಿ. ಸಾಮಾಜಿಕ ಅಸಮಾನತೆ ಹೋಗಲಾಡಿಸುವ ಜತೆಗೆ ಜ್ಞಾನ ವಿಸ್ತರಣೆಗೆ ಮಡಿವಾಳ ಮಾಚಿದೇವರು ನೀಡಿದ ಕೊಡುಗೆ ಮಹತ್ತರವಾದುದು ಎಂದು ಮಹಾನಗರ ಪಾಲಿಕೆ ಮೇಯರ್ ಬಿ.ಶ್ವೇತಾ ಹೇಳಿದರು.

    ನಗರದ ಡಾ.ರಾಜ್‌ಕುಮಾರ್ ರಸ್ತೆಯ ಬಿಡಿಎಎ ಫುಟ್‌ಬಾಲ್ ಮೈದಾನದ ವೇದಿಕೆ ಸಭಾಂಗಣದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಮಹಾನಗರ ಪಾಲಿಕೆ ಸಂಯುಕ್ತಾಶ್ರಯದಲ್ಲಿ ಗುರುವಾರ ಏರ್ಪಡಿಸಿದ್ದ ಮಡಿವಾಳ ಮಾಚಿದೇವ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

    ವಿಶಾಲ ಮನೋಧರ್ಮ ಮಡಿವಾಳ ಸಮುದಾಯದ ಜನರಲ್ಲಿದೆ. ಶಿವಶರಣ ಮಾಚಿದೇವರ ಮಾರ್ಗದರ್ಶನದಿಂದ ಮುನ್ನಡೆಯುತ್ತಿರುವುದೇ ಇದಕ್ಕೆ ಕಾರಣ. ಮಾಚಿದೇವ ಸಮಾಜದ ಕೊಳಕು ತೊಳೆದು ಹಾಕಿದವರು. ಕಾಯಕದ ಆಧಾರದಲ್ಲಿ ವಿಭಜನೆ ಆಗುತ್ತಿರುವ ಸಮಾಜಕ್ಕೆ ಮಾಚಿದೇವರ ಸಂದೇಶ ಆದರ್ಶವಾಗಬೇಕಾದ ಅಗತ್ಯವಿದೆ ಎಂದರು.

    ಸತ್ಯಂ ಶಿಕ್ಷಣ ಮಹಾವಿದ್ಯಾಲಯದ ಸಹಾಯಕ ಪ್ರಾಧ್ಯಾಪಕ ಆಲಂ ಭಾಷಾ ಅವರು ವಿಶೇಷ ಉಪನ್ಯಾಸದಲ್ಲಿ ಮಾತನಾಡಿ, ಮಾಚಿದೇವ ಸಮಾಜದ ಶ್ರೇಷ್ಠ ವಚನಕಾರರಲ್ಲಿ ಒಬ್ಬರು. 12ನೇ ಶತಮಾನದ ಬಸವಣ್ಣನವರ ಸಮಕಾಲೀನ ಶರಣರಲ್ಲಿ ಮಡಿವಾಳ ಮಾಚಿದೇವರು ಒಬ್ಬರಾಗಿದ್ದಾರೆ ಎಂದು ಹೇಳಿದರು.
    ಮೌಢ್ಯಗಳಿಂದ ದೀನರ ಶೋಷಣೆ ನಡೆಯುತ್ತಿದ್ದ ಕಾಲದಲ್ಲಿ ಮಾಚಿದೇವ ಜಾಗೃತಿಯ ಮೂಲಕ ಶೋಷಣೆ ತಡೆಗಟ್ಟಿದರು. ಕಷ್ಟಗಳನ್ನು ಸಹಿಸಿಯೂ ಬಡ ಜನರ ಉದ್ಧಾರಕ್ಕೆ ಮಾರ್ಗದರ್ಶಕರಾದರು ಎಂದರು.

    ಕಾಯಕ ನಿಷ್ಠೆ, ದಾಸೋಹದಂತಹ ಮೌಲ್ಯಯುತವಾದ ಕಾಣಿಕೆ ನೀಡಿದ್ದು, 12ನೇ ಶತಮಾನದ ಕಾಲದಲ್ಲಿ ಇಂತಹ ಶರಣರು ಮಹಾಪುರುಷರು ಹಾಕಿಕೊಟ್ಟ ಮಾರ್ಗದರ್ಶನ ಹಾಗೂ ಸಂದೇಶವನ್ನು ಪ್ರತಿಯೊಬ್ಬರೂ ಜೀವನದಲ್ಲಿ ಅಳವಡಿಸಿಕೊಳ್ಳಬೇಕು ಎಂದು ತಿಳಿಸಿದರು.

    ಪಾಲಿಕೆ ಉಪ ಮೇಯರ್ ಬಿ.ಜಾನಕಿ, ತಹಸೀಲ್ದಾರ್ ಗುರುರಾಜ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಬಿ.ನಾಗರಾಜ್ ಸೇರಿದಂತೆ ಸಮಾಜದ ಮುಖಂಡರು, ಪದಾಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts