ಮಡಿಯಾಲದಲ್ಲಿ ಸತ್ಯನಾರಾಯಣ ಪೂಜೆ

PTR_22 AUG_1
Published on

ವಿಟ್ಲ: ಅಳಿಕೆ ವಲಯ ಸಾಮೂಹಿಕ ಶ್ರೀ ಪೂಜಾ ಸಮಿತಿ, ಪ್ರಗತಿ ಬಂಧು ಸ್ವಸಹಾಯ ಸಂಘಗಳ ಒಕ್ಕೂಟ ಅಳಿಕೆ ವಲಯ, ಮಡಿಯಾಲ ಶ್ರೀ ಗೋಪಾಲಕೃಷ್ಣ ದೇವಸ್ಥಾನ, ಜನಜಾಗೃತಿ ವೇದಿಕೆ ಅಳಿಕೆ ವಲಯದ ಆಶ್ರಯದಲ್ಲಿ ಮಡಿಯಾಲದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.


ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಸಂಸ್ಥೆಯ ಕಾರ್ಯದರ್ಶಿ ಚಂದ್ರಶೇಖರ್ ಭಟ್ ಎಂ. ಉದ್ಘಾಟಿಸಿದರು. ಗ್ರಾಮ ಪಂಚಾಯಿತಿ ಅಧ್ಯಕ್ಷ ಪದ್ಮನಾಭ ಪೂಜಾರಿ ಸಣ್ಣಗುತ್ತು ಅಧ್ಯಕ್ಷತೆ ವಹಿಸಿದ್ದರು. ಗಣೇಶ್ ಮಯ್ಯ ಮಡಿಯಾಲ ಪೌರೋಹಿತ್ಯದಲ್ಲಿ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ ನಡೆಯಿತು.


ಶಾಸಕ ಅಶೋಕ್ ಕುಮಾರ್ ರೈ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ. ಟ್ರಸ್ಟ್ ದ.ಕ. ೨ ಜಿಲ್ಲೆ ನಿರ್ದೇಶಕ ಪ್ರವೀಣ್ ಕುಮಾರ್, ಮಾಣಿಲ ಸರ್ಕಾರಿ ಪ್ರೌಢಶಾಲೆ ಮುಖ್ಯಶಿಕ್ಷಕಿ ಲತಾ ಯು., ಜನಜಾಗೃತಿ ವೇದಿಕೆ ಅಳಿಕೆ ವಲಯಾಧ್ಯಕ್ಷ ಬಾಲಕೃಷ್ಣ ಕಾರಂತ, ಬಿ.ಸಿ. ಟ್ರಸ್ಟ್ ವಲಯಾಧ್ಯಕ್ಷ ರಾಜೇಂದ್ರ ರೈ ಉಪಸ್ಥಿತರಿದ್ದರು.


ಪ್ರವೀಣ್ ಸಣ್ಣಗುತ್ತು ಸ್ವಾಗತಿಸಿದರು. ಸದಾಶಿವ ಶೆಟ್ಟಿ ಮಡಿಯಾಲ ವಂದಿಸಿದರು. ರೇಣುಕಾ ಕಣಿಯೂರು ಕಾರ್ಯಕ್ರಮ ನಿರೂಪಿಸಿದರು.

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net