18.1 C
Bangalore
Saturday, December 7, 2019

ವರ್ಗಾವಣೆ ಮರುಪರಿಶೀಲನೆಗೆ ಒಪ್ಪದ ಕೊಲಿಜಿಯಂ; ರಾಜೀನಾಮೆ ಸಲ್ಲಿಸಿದ ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ

Latest News

ಅಂಗನವಾಡಿಗಳಲ್ಲೇ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಿ

ಕಾರವಾರ: ಅಂಗನವಾಡಿ ಕೇಂದ್ರಗಳಲ್ಲಿ ಪೂರ್ವ ಪ್ರಾಥಮಿಕ ಶಿಕ್ಷಣ ಪ್ರಾರಂಭಿಸಬೇಕು ಎಂದು ಆಗ್ರಹಿಸಿ ಅಂಗನವಾಡಿ ಕಾರ್ಯಕರ್ತೆಯರು ನಗದಲ್ಲಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಸಿದರು.

ಖರೀದಿ ಕೇಂದ್ರ ತೆರೆಯಲು ರಾಜ್ಯ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ ಕೃಷಿ ಮಾರಾಟ ಇಲಾಖೆ

ಚಿತ್ರದುರ್ಗ: ಬೆಂಬಲ ಬೆಲೆ ಯೋಜನೆಯಡಿ ಶೇಂಗಾ, ಮೆಕ್ಕೆಜೋಳ ಮತ್ತಿತರ ಬೆಳೆಗಳ ಖರೀದಿ ಕೇಂದ್ರ ತೆರೆಯಲು ಹಾಗೂ ಏಜೆನ್ಸಿ ನಿಗದಿಪಡಿಸಲು ಕೋರಿ ಕೃಷಿ ಮಾರಾಟ...

ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

ಮೈಸೂರು: ವಿವಿಧ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜಿಲ್ಲೆಯ ನೂರಾರು ಅಂಗನವಾಡಿ ಕಾರ್ಯಕರ್ತೆಯರು ಶುಕ್ರವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು. ಕರ್ನಾಟಕ ರಾಜ್ಯ ಅಂಗವನಾಡಿ ನೌಕರರ ಸಂಘದ...

ಅಂಬೇಡ್ಕರ್ ಸಂವಿಧಾನದ ಗುಮಾಸ್ತರಲ್ಲ

ಮೈಸೂರು: ಸಂವಿಧಾನ ಶಿಲ್ಪಿ ಡಾ.ಬಿ.ಆರ್. ಅಂಬೇಡ್ಕರ್ ಅವರನ್ನು ಇತ್ತೀಚೆಗೆ ಕೆಲವರು ಸಂವಿಧಾನದ ಗುಮಾಸ್ತನ ರೀತಿ ನೋಡುತ್ತಿರುವುದು ಮನಸ್ಸಿಗೆ ತೀವ್ರ ನೋವು ಉಂಟುಮಾಡುತ್ತಿದೆ ಎಂದು...

ಅಂಬೇಡ್ಕರ್ ಚಿಂತನೆಗಳೇ ದೇಶಕ್ಕೆ ಸಂಪತ್ತು

ಮೈಸೂರು: ಶಿಕ್ಷಣದ ಏಕಸ್ವಾಮ್ಯ ಮುರಿದು, ಶಿಕ್ಷಣದ ಮೂಲಕ ಎಲ್ಲರಿಗೂ ಬಿಡುಗಡೆಯ ಕ್ರಾಂತಿ ಮೊಳಗಿಸಿದ ಅಂಬೇಡ್ಕರ್ ಅವರ ಶ್ರಮ, ಹೋರಾಟ ಮತ್ತು ವ್ಯಕ್ತಿತ್ವ ವಿದ್ಯಾರ್ಥಿಗಳಿಗೆ...

ಚೆನ್ನೈ: ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಾಧೀಶೆ ವಿ ಕೆ ತಹಿಲ್ರಾಮಣಿ ಅವರು ತಮ್ಮ ರಾಜೀನಾಮೆ ಪತ್ರವನ್ನು ರಾಷ್ಟ್ರಪತಿ ರಾಮನಾಥ ಕೋವಿಂದ್‌ ಅವರಿಗೆ ಸಲ್ಲಿಸಿದ್ದಾರೆ. ಮೇಘಾಲಯ ಹೈಕೋರ್ಟ್‌ಗೆ ತಮ್ಮ ವರ್ಗಾವಣೆಯನ್ನು ಮರುಪರಿಶೀಲಿಸುವ ಮನವಿಯನ್ನು ಸುಪ್ರೀಂ ಕೋರ್ಟ್ ಕೊಲಿಜಿಯಂ ತಿರಸ್ಕರಿಸಿದ ಮೂರು ದಿನಗಳ ನಂತರ ಅವರು ರಾಜೀನಾಮೆ ಸಲ್ಲಿಸುವ ನಿರ್ಧಾರ ಕೈಗೊಂಡಿದ್ದಾರೆ.

ಮದ್ರಾಸ್‌ ಹೈಕೋರ್ಟ್‌ ನ್ಯಾಯಾಧೀಶರೊಂದಿಗಿನ ಔತಣಕೂಟದಲ್ಲಿ ಭಾಗವಹಿಸಿದ್ದ ವೇಳೆ ತನ್ನ ಸಹೋದ್ಯೋಗಿಗಳೊಂದಿಗೆ ರಾಜೀನಾಮೆ ಸಲ್ಲಿಸುವ ವಿಚಾರವನ್ನು ತಹಿಲ್ರಾಮಣಿ ಅವರು ಪ್ರಸ್ತಾಪಿಸಿದ್ದಾರೆ.
ಮದ್ರಾಸ್ ಹೈಕೋರ್ಟ್‌ನಿಂದ ಬಂದ ಪ್ರತಿಕ್ರಿಯೆಯ ಆಧಾರದ ಮೇಲೆ ಅವರನ್ನು ವರ್ಗಾವಣೆ ಮಾಡುವ ನಿರ್ಧಾರವನ್ನು ಕೊಲಿಜಿಯಂ ತೆಗೆದುಕೊಂಡಿದೆ ಎಂದು ನ್ಯಾಯಾಂಗ ಮೂಲಗಳು ತಿಳಿಸಿವೆ.

ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್‌ ಗೊಗೊಯ್‌ ನೇತೃತ್ವದ ಕೊಲಿಜಿಯಂ, ಆ. 28ರಂದು ಮೇಘಾಲಯ ಹೈಕೋರ್ಟ್‌ಗೆ ಅವರ ವರ್ಗಾವಣೆಗೆ ಶಿಫಾರಸು ಮಾಡಿತ್ತು. ಕೊಲಿಜಿಯಂ ಈಗಾಗಲೇ ಮೇಘಾಲಯ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿ ಎ.ಕೆ. ಮಿತ್ತಲ್‌ ಅವರನ್ನು ಮದ್ರಾಸ್‌ ಹೈಕೋರ್ಟ್‌ಗೆ ವರ್ಗಾಯಿಸಿದೆ.

ಕೊಲಿಜಿಯಂ ಈ ವಿಷಯದಲ್ಲಿ ಎಚ್ಚರಿಕೆಯಿಂದ ಹೆಜ್ಜೆ ಇಟ್ಟಿದೆ ಮತ್ತು ಇದಕ್ಕೆ ಸಂಬಂಧಿಸಿದ ಎಲ್ಲ ಅಂಶಗಳನ್ನು ಗಣನೆಗೆ ತೆಗೆದುಕೊಂಡಿದೆ. ಕೊಲಿಜಿಯಂ ಅವರ ವರ್ಗಾವಣೆ ಮರುಪರಿಶೀಲನೆ ಕೋರಿಕೆಯನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ ಎಂದು ಸೆ. 3 ರ ನಿರ್ಣಯವನ್ನು ಸುಪ್ರೀಂ ಕೋರ್ಟ್‌ನ ವೆಬ್‌ಸೈಟ್‌ನಲ್ಲಿ ಅಪ್‌ಲೋಡ್ ಮಾಡಲಾಗಿದೆ.
ತೆಹಿಲ್ರಾಮಣಿಯವರು ಕಳೆದ ವರ್ಷ ಆ. 8ರಂದು ಮದ್ರಾಸ್‌ ಹೈಕೋರ್ಟ್‌ ಮುಖ್ಯ ನ್ಯಾಯಮೂರ್ತಿಯಾಗಿ ನೇಮಕಗೊಂಡಿದ್ದರು. (ಏಜೆನ್ಸೀಸ್)

Stay connected

278,740FansLike
581FollowersFollow
620,000SubscribersSubscribe

ವಿಡಿಯೋ ನ್ಯೂಸ್

VIDEO| ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯ ಜೀವ ಉಳಿಸಿದ ಯೋಧ:...

ಥಾಣೆ: ರೈಲ್ವೆ ರಕ್ಷಣಾ ಪಡೆಯ ಯೋಧರೊಬ್ಬರು ಎಕ್ಸ್​ಪ್ರೆಸ್​ ರೈಲಿಗೆ ಸಿಲುಕುತ್ತಿದ್ದ ವ್ಯಕ್ತಿಯೊಬ್ಬನನ್ನು ರಕ್ಷಣೆ ಮಾಡುವ ಮೂಲಕ ಸಮಯಪ್ರಜ್ಞೆ ಮರೆದಿರುವ ಘಟನೆ ಮಹಾರಾಷ್ಟ್ರದ ಥಾಣೆ ರೈಲ್ವೆ ನಿಲ್ದಾಣದಲ್ಲಿ ಬುಧವಾರ ನಡೆದಿದ್ದು, ಇದಕ್ಕೆ...

VIDEO| ನನ್ನನ್ನು ಯಾರೂ ಮುಟ್ಟಲಾರರು; ಸ್ವಯಂಘೋಷಿತ ದೇವಮಾನವ ನಿತ್ಯಾನಂದ ಹೇಳಿಕೆ

ನವದೆಹಲಿ: "ನನ್ನನ್ನು ಯಾರೂ ಮುಟ್ಟಲಾರರು, ನಿಮಗೊಂದು ಸತ್ಯ ಹೇಳುತ್ತೇನೆ. ನಾನೂ ಪರಮ ಶಿವ, ಅರ್ಥವಾಯ್ತ...?" ಎಂದು ಅತ್ಯಾಚಾರದ ಆರೋಪಿ ನಿತ್ಯಾನಂದ ವಿಡಿಯೋಂದರಲ್ಲಿ ಹೇಳಿದ್ದಾನೆ. ಯಾವ ಕೋರ್ಟ್​ ಕೂಡ ನನ್ನ ಬಗ್ಗೆ ತೀರ್ಪು ನೀಡಲಾರದು. ಯಾರೂ...

VIDEO| ಮದುವೆ ಸಮಾರಂಭದಲ್ಲಿ ಡ್ಯಾನ್ಸ್​ ನಿಲ್ಲಿಸುತ್ತಿದ್ದಂತೆ ಯುವತಿ ಮೇಲೆ ಫೈರಿಂಗ್​:...

ಲಖನೌ: ಮದುವೆ ಸಂಭ್ರಮದಲ್ಲಿ ಡ್ಯಾನ್ಸ್​ ಮಾಡುವುದನ್ನು ನಿಲ್ಲಿಸುತ್ತಿದ್ದಂತೆ ನೃತ್ಯಗಾರ್ತಿಯ ಮುಖಕ್ಕೆ ಫೈರಿಂಗ್​ ಮಾಡಿರುವ ಘಟನೆ ಉತ್ತರ ಪ್ರದೇಶದ ಚಿತ್ರಕೂಟದಲ್ಲಿ ಕಳೆದ ವಾರ ನಡೆದಿರುವುದಾಗಿ ವರದಿಯಾಗಿದೆ. ಘಟನೆಯಲ್ಲಿ ಗಾಯಗೊಂಡ ಯುವತಿಯನ್ನು ಕಾನ್ಪುರ ಆಸ್ಪತ್ರೆಗೆ...

VIDEO: ಎನ್​ಕೌಂಟರ್ ನಡೆಸಿದ ಪೊಲೀಸರನ್ನು ಹೆಗಲ ಮೇಲೆ ಹೊತ್ತು ಸಂಭ್ರಮಿಸಿದ...

ಹೈದರಾಬಾದ್​​: ಪಶುವೈದ್ಯೆ ದಿಶಾ ಅತ್ಯಾಚಾರ ಮತ್ತು ಕೊಲೆ ಆರೋಪಿಗಳನ್ನು ಎನ್​ಕೌಂಟರ್​​ನಲ್ಲಿ ಹತ್ಯೆಗೈದ ಪೊಲೀಸರನ್ನು ಹೈದರಾಬಾದ್​​ ಜನತೆ ಹೆಗಲ ಮೇಲೆ ಹೊತ್ತು ಜಯಘೊಷ ಕೂಗಿ ಸಂಭ್ರಮಿಸಿದ್ದಾರೆ. ಶುಕ್ರವಾರ ಬೆಳಗ್ಗೆ ಆರೋಪಿಗಳ ಎನ್​ಕೌಂಟರ್​ ಸುದ್ಧಿ...

ಉಪಚುನಾವಣೆ ಮತದಾನ ಅಂತ್ಯ: ಮತಗಟ್ಟೆ ಸಮೀಕ್ಷೆಯಲ್ಲಿ ಬಿಜೆಪಿಯದ್ದೇ ಮೇಲುಗೈ

ಬೆಂಗಳೂರು: ರಾಜ್ಯದ 15 ಕ್ಷೇತ್ರಗಳ ಉಪಚುನಾವಣೆಯ ಮತದಾನ ಪ್ರಕ್ರಿಯೆ ಗುರುವಾರ ಸಂಜೆ 6 ಗಂಟೆಗೆ ಪೂರ್ಣಗೊಂಡಿತು. ಸಣ್ಣಪುಟ್ಟ ಗಲಾಟೆಗಳು ಹಾಗೂ ಅಲ್ಲಲ್ಲಿ ಕೆಲ ಇವಿಎಂಗಳ ದೋಷ ಹೊರತುಪಡಿಸಿದರೆ ಉಪಚುನಾವಣೆಯ ಮತದಾನ...

VIDEO| ವಿಕೆಟ್​ ಕಿತ್ತ ಖುಷಿಯಲ್ಲಿ ಕರವಸ್ತ್ರವನ್ನು ಕಡ್ಡಿಯನ್ನಾಗಿಸಿ ಸಂಭ್ರಮ: ಬೌಲರ್​ನ...

ನವದೆಹಲಿ: ಯಾವುದೇ ಆಟವಾಗಿರಲಿ ಆಟಗಾರರಿಗೆ ತಮ್ಮ ಸಂಭ್ರಮದ ಕ್ಷಣ ಸ್ಮರಣೀಯವಾಗಿರುತ್ತದೆ. ಹಲವರು ವಿಭಿನ್ನ ರೀತಿಯಲ್ಲಿ ಸಂಭ್ರಮಿಸುವ ಪ್ರಯತ್ನವನ್ನು ಮೈದಾನದಲ್ಲಿ ಮಾಡುತ್ತಿರುತ್ತಾರೆ. ಇದೀಗ ದಕ್ಷಿಣ ಆಫ್ರಿಕಾ ಬೌಲರ್​ ಒಬ್ಬರು ವಿಕೆಟ್​ ಪಡೆದ...