More

    ಮಡುವಿನಕೋಡಿ ಆಂಜನೇಯಸ್ವಾಮಿ ರಥೋತ್ಸವ

    ಕೆ.ಆರ್.ಪೇಟೆ: ಬೂಕನಕೆರೆ ಹೋಬಳಿ ಮಡುವಿನಕೋಡಿ ಗ್ರಾಮದ ಶ್ರೀ ಆಂಜನೇಯಸ್ವಾಮಿ ಬ್ರಹ್ಮರಥೋತ್ಸವವು ಧಾರ್ಮಿಕ ವಿಧಾನಗಳೊಂದಿಗೆ ಸಾವಿರಾರು ಭಕ್ತರ ನಡುವೆ ಸೋಮವಾರ ವಿಜೃಂಭಣೆಯಿಂದ ನೆರವೇರಿತು.

    ಶುಭ ಲಗ್ನದಲ್ಲಿ ಮಂಗಳವಾದ್ಯದ ಮೂಲಕ ಶ್ರೀ ಆಂಜನೇಯಸ್ವಾಮಿ ಉತ್ಸವ ಮೂರ್ತಿಯನ್ನು ಅಲಂಕೃತಗೊಂಡ ಬ್ರಹ್ಮ ರಥದ ಮೇಲೆ ಇಡುತ್ತಿದ್ದಂತೆ ಅಪಾರ ಸಾವಿರಾರು ಸಂಖ್ಯೆಯಲ್ಲಿ ನೆರೆದಿದ್ದ ಭಕ್ತರು, ಬ್ರಹ್ಮರಥೋತ್ಸವಕ್ಕೆ ಬಾಳೆ ಹಣ್ಣು, ಹೂ, ದವನ ಎಸೆದು ಭಕ್ತಿಪೂರ್ವಕವಾಗಿ ಭಜರಂಗಿ, ವಾಯುಪುತ್ರ, ಜೈ ಶ್ರೀರಾಮ್ ಎಂಬ ನಾಮ ಸ್ಮರಣೆಯನ್ನು ಸ್ಮರಿಸುತ್ತಾ ತೇರು ಎಳೆದರು.

    ಬ್ರಹ್ಮ ರಥೋತ್ಸವದ ಪ್ರಯುಕ್ತ ಆಯೋಜಿಸಿದ್ದ ಮಂಗಳವಾದ್ಯ, ತಮಟೆ ಸೇವೆ, ಡೊಳ್ಳುಕುಣಿತ, ಪೂಜಾ ಕುಣಿತ, ಮುಂತಾದ ಜನಪದ ಕಲಾತಂಡಗಳ ಪ್ರದರ್ಶನ ಭಕ್ತರಗಳನ್ನು ಆಕರ್ಷಿಸಿತು. ದೇವಸ್ಥಾನದಲ್ಲಿನ ಶ್ರೀ ಆಂಜನೇಯಸ್ವಾಮಿ ಮತ್ತು ಗ್ರಾಮ ದೇವತೆಗಳ ಮೂರ್ತಿಗೆ ವಿವಿಧ ಹೂಗಳಿಂದ ವಿಶೇಷ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ದೇವಸ್ಥಾನದ ಒಳ ಆವರಣದ ಕಂಬ ಮತ್ತು ಮೇಲ್ಭಾಗವನ್ನು ಹೂಗಳಿಂದ ಅಲಂಕರಿಸಲಾಗಿತ್ತು. ಹೊರಭಾಗದಲ್ಲೂ ವಿಶೇಷವಾಗಿ ವಿದ್ಯುತ್ ದೀಪಗಳಿಂದ ಅಲಂಕರಿಸಲಾಗಿತ್ತು.

    ಹೊರ ಜಿಲ್ಲೆ ಮತ್ತು ತಾಲೂಕಿನಿಂದ ಬ್ರಹ್ಮ ರಥೋತ್ಸವಕ್ಕೆ ಆಗಮಿಸಿದ ಭಕ್ತರಿಗೆ ಪ್ರಸಾದ, ನೀರು ಮಜ್ಜಿಗೆ, ಪಾನಕ ವಿತರಿಸಿದರು. ಯಾವುದೇ ಅಹಿತಕರ ಘಟನೆ ನಡೆಯದಂತೆ ಪೊಲೀಸರು ಸೂಕ್ತ ಬಂದೋ ಬಸ್ತ್ ವ್ಯವಸ್ಥೆ ಮಾಡಿದ್ದರು. ಶಾಸಕ ಎಚ್.ಟಿ. ಮಂಜು, ಸಮಾಜ ಸೇವಕ ಆರ್‌ಟಿಒ ಮಲ್ಲಿಕಾರ್ಜುನ್, ಮಂಡ್ಯ ಜಿಲ್ಲಾ ಹಾಲು ಒಕ್ಕೂಟ ಮಾಜಿ ಅಧ್ಯಕ್ಷ ಎಂ.ಬಿ. ಹರೀಶ್, ಕಾಂಗ್ರೆಸ್ ಮುಖಂಡ ಮಡುವಿನಕೋಡಿ ಸಾಗರ್, ಎಂ.ಪಿ. ಲೊಕೇಶ್, ಬಿಸಿಎಂ ಇಲಾಖೆ ಅಧಿಕಾರಿ ವೆಂಕಟೇಶ್ ಮತ್ತಿತರರು ಪಾಲ್ಗೊಂಡಿದ್ದರು.

    Related articles

    Share article

    Latest articles