ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ; 6.3 ತೀವ್ರತೆ ದಾಖಲು

ನವದೆಹಲಿ: ಕೆಲ ದಿನಗಳ ಹಿಂದಷ್ಠೇ ಪ್ರಬಲ ಭೂಕಂಪದ ಹೊಡೆತಕ್ಕೆ ತತ್ತರಿಸಿದ ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಭೂಕಂಪ ಸಂಭವಿಸಿದೆ. ಪಶ್ಚಿಮ ಅಫ್ಘಾನಿಸ್ತಾನದಲ್ಲಿ ಭಾನುವಾರ ಬೆಳಗ್ಗೆ ಭೂಕಂಪ ಸಂಭವಿಸಿದ್ದು, ರಿಕ್ಟರ್ ಮಾಪಕದಲ್ಲಿ 6.3ರಷ್ಟು ತೀವ್ರತೆ ದಾಖಲಾಗಿದೆ.  ಭೂಕಂಪನದಲ್ಲಿ ಓರ್ವರು ಮೃತಪಟ್ಟು, 35ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ ಎಂದು ಹೆರಾತ್​ ನಗರದ ಗವರ್ನರ್​ ತಿಳಿಸಿದ್ದಾರೆ. ಕಳೆದ ಕೆಲವು ವಾರಗಳಿಂದ ಸಂಭವಿಸಿದ ಪ್ರಬಲ ಭೂಕಂಪಗಳ ನಂತರ ಸಾವಿರಾರು ಜನರು ಮೃತಪಟ್ಟಿದ್ದಾರೆ. ಅಕ್ಟೋಬರ್ 7 ರಂದು ಕೂಡಾ ಇದೇ ಪ್ರಾಂತ್ಯದಲ್ಲಿ ಪ್ರಬಲ ಭೂಕಂಪ ಸಂಭವಿಸಿತ್ತು. … Continue reading ಅಫ್ಘಾನಿಸ್ತಾನದಲ್ಲಿ ಮತ್ತೊಮ್ಮೆ ಪ್ರಬಲ ಭೂಕಂಪ; 6.3 ತೀವ್ರತೆ ದಾಖಲು