

ಮುಂಬೈ: ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯಲ್ಲಿ ಮಹಾಯುತಿ ಕೂಟ ಅಧಿಕಾರಕ್ಕೆ ಬಂದ ಬಳಿಕ(Maha CM) ಸಿಎಂ ಯಾರಾಗಲಿದ್ದಾರೆ ಎಂಬ ಬಹುದಿಗಳ ಚರ್ಚೆಗೆ ಕೊನೆಗೂ ತೆರೆ ಎಳೆದಿದ್ದಾರೆ. ಬಿಜೆಪಿಯ ದೇವೇಂದ್ರ ಫಡ್ನವೀಸ್ ನಾಳೆ(ಡಿ.05) ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂಬುಹುದು ಬಹತೇಕ ಖಚಿತವಾಗಿದೆ.
ಇಂದು(ಡಿ.04)ರಂದು ಮುಂಬೈನಲ್ಲಿ ನಡೆದ ಬಿಜೆಪಿ ಮಹತ್ವದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಫಡ್ನವಿಸ್ ಬಹುತೇಕ ಸಿಎಂ ಆಗಲಿದ್ದು, ಅಧಿಕೃತ ಘೋಷಣೆಯೊಂದೆ ಬಾಕಿ ಇದೆ ಎಂದು ವರದಿಗಳು ಉಲ್ಲೇಖಿಸಿವೆ.
ಇನ್ನು ಸಭೆಯಲ್ಲಿ ಮಹಾಯುತಿ ಕೂಟದ ಎಲ್ಲಾ ನಾಯಕರು ಒಮ್ಮತಕ್ಕೆ ಬಂದಿದ್ದಾರೆ ಎನ್ನಲಾಗಿದೆ. ನಾಳೆ ಫಡ್ನವಿಸ್ ಸಿಎಂ ಆಗಿ ಪ್ರಮಾಣ ವಚನ ಸ್ವೀಕರಿಸಲಿದ್ದು, ಶಿಂಧೆ ಮತ್ತು ಅಜಿತ್ ಏಕನಾಥ್ ಶಿಂಧೆ ಮತ್ತು ಎನ್ಸಿಪಿ ನಾಯಕ ಅಜಿತ್ ಪವಾರ್ ಉಪ ಮುಖ್ಯಮಂತ್ರಿಯಾಗಿ ಅಧಿಕಾರವಹಿಸಿಕೊಳ್ಳಲಿದ್ದಾರೆ. ಮುಂಬೈನ ಅಜಾದ್ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದೆ. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಕೇಂದ್ರದ ಬಹತೇಕ ನಾಯಕರು ಮತ್ತು ಎನ್ಡಿಎ ನಾಯಕರು ಪಾಲ್ಗೋಳಲಿದ್ದಾರೆ ಎಂದು ಮಹಾರಾಷ್ಟ್ರದ ಬಿಜೆಪಿ ಅಧ್ಯಕ್ಷ ಚಂದ್ರಶೇಖರ್ ಬವಾಂಕುಲೆ ತಿಳಿಸಿದ್ದಾರೆ.(ಏಜೆನ್ಸೀಸ್).