25.7 C
Bangalore
Sunday, December 15, 2019

ಈಶ್ವರ ದೇವಸ್ಥಾನದಲ್ಲಿ ಮಹಾ ಕುಂಭಾಭಿಷೇಕ

Latest News

ನಗ ನಗದುಗಳೊಂದಿಗೆ ಮಾವನ ಮನೆಯಿಂದ ರಾತ್ರೋರಾತ್ರಿ ಪರಾರಿಯಾದ ಮಧುಮಗಳು; ಮಧುಮಗ ಕಂಗಾಲು!

ಬದೌನ್​ (ಉತ್ತರಪ್ರದೇಶ): ಹೊಸದಾಗಿ ಮದುವೆಯಾಗಿದ್ದ ಮಧುಮಗಳು ಗಂಡನ ಮನೆಯವರಿಗೆ ಆಹಾರದಲ್ಲಿ ಮತ್ತು ಬರುವ ಔಷಧ ಬೆರಸಿ ಮನೆಯಲ್ಲಿದ್ದ ನಗ ನಾಣ್ಯ ದೋಚಿ ಪರಾರಿಯಾಗಿದ್ದಾಳೆ. ಬದೌನ್​ ಜಿಲ್ಲೆಯ ಚೋಟಾ...

ಪೌರತ್ವ ತಿದ್ದುಪಡಿ ಕಾಯ್ದೆ ಶೇ.1000 ಪಟ್ಟು ಸರಿ: ಪ್ರತಿಭಟನೆಗಳಿಗೆ ಕಾಂಗ್ರೆಸ್​​ ಮಿತ್ರಪಕ್ಷಗಳು ಕಾರಣ

ನವದೆಹಲಿ: ಪೌರತ್ವ ತಿದ್ದುಪಡಿ ಕಾನೂನಿಗೆ ಸಂಬಂಧಿಸಿದಂತೆ ನಡೆಯುತ್ತಿರುವ ಪ್ರತಿಭಟನೆಗಳಿಗೆ ಕಾಂಗ್ರೆಸ್​ ಮತ್ತು ಅದರ ಮಿತ್ರ ಪಕ್ಷಗಳೇ ಕಾರಣ ಎಂದು ಪ್ರಧಾನಿ ನರೇಂದ್ರ ಮೋದಿ...

ಕಳ್ಳಬಟ್ಟಿ ಸಾರಾಯಿ ಮಾರಾಟಗಾರನ ಬಂಧನ

ರಾಯಬಾಗ: ತಾಲೂಕಿನ ಮೊರಬ ಗ್ರಾಮದಲ್ಲಿ ಕಳ್ಳಬಟ್ಟಿ ಸಾರಾಯಿ ಮಾರಾಟ ಮಾಡುತ್ತಿದ್ದ ವ್ಯಕ್ತಿಯ ಮೇಲೆ ಅಬಕಾರಿ ಅಧಿಕಾರಿಗಳು ದಾಳಿ ಮಾಡಿ, ಆರೋಪಿಯನ್ನು ಬಂಧಿಸಿ, ಆತನಿಂದ...

ತುಳು ಶಿವಳ್ಳಿ ಬ್ರಾಹ್ಮಣರ ಪ್ರಥಮ ವಿಶ್ವ ಸಮ್ಮೇಳನ

ಉಡುಪಿ: ತುಳು ಭಾಷಿಗ ತುಳು ಶಿವಳ್ಳಿ ಬ್ರಾಹ್ಮಣರು ಮಾತೃಭಾಷೆ ಮರೆಯುತ್ತಿದ್ದಾರೆ. ಅದು ಸಲ್ಲದು. ನಮ್ಮ ಸಂಸ್ಕೃತಿ-ಸಂಸ್ಕಾರಗಳ ಉಳಿವಿಗಾಗಿ ಶ್ರಮಿಸುವುದು ಗಾಯತ್ರಿ ಮಂತ್ರವನ್ನು ನಿತ್ಯವೂ...

ಕ್ರಿಕೆಟ್ ಪಂದ್ಯಾವಳಿ, ಡಿಎಆರ್ ಮೈದಾನದಲ್ಲಿ ಲಾಠಿಗೆ ಮಣಿದ ಲೇಖನಿ

ಬಳ್ಳಾರಿ: ಪೊಲೀಸ್ ವಾರ್ಷಿಕ ಕ್ರೀಡಾಕೂಟ ಹಿನ್ನೆಲೆಯಲ್ಲಿ ನಗರದ ಜಿಲ್ಲಾ ಪೊಲೀಸ್ ಕ್ರೀಡಾಂಗಣದಲ್ಲಿ ಭಾನುವಾರ ಪೊಲೀಸರು ಮತ್ತು ಪತ್ರಕರ್ತರ ಮಧ್ಯೆ ನಡೆದ ಕ್ರಿಕೆಟ್ ಪಂದ್ಯಾವಳಿಯಲ್ಲಿ...

ಕೊಳ್ಳೇಗಾಲ: ಪಟ್ಟಣದ ಭೀಮನಗರ ಬಡಾವಣೆಯಲ್ಲಿ ಜೀರ್ಣೋದ್ಧಾರಗೊಂಡ ಶ್ರೀಬಸವಲಿಂಗಪ್ಪಸ್ವಾಮಿ, ಶ್ರೀಗುಡ್ಡದಮ್ಮದೇವಿ ಹಾಗೂ ಶ್ರೀ ಈಶ್ವರ ದೇವರ ದೇವಸ್ಥಾನದ ಅಷ್ಠಬಂಧನ ಹಾಗೂ ಮಹಾ ಕುಂಭಾಭಿಷೇಕ ಪೂಜಾ ಕೈಂಕರ್ಯಗಳು ಶುಕ್ರವಾರ ವಿಜೃಂಭಣೆಯಿಂದ ನೆರವೇರಿತು.

ಗುರುವಾರ ಬೆಳಗ್ಗೆ 9 ಗಂಟೆಯಲ್ಲಿ ದಾಸನಪುರ ಬಳಿಯ ಕಾವೇರಿ ನದಿಯಿಂದ ತೀರ್ಥ ಸಂಗ್ರಹಣೆಯೊಂದಿಗೆ ದೇಗುಲದ ಪೂಜಾ ಕೈಂಕರ್ಯ ಆರಂಭಗೊಂಡಿತು. 11 ಗಂಟೆಗೆ ಗಣಪತಿ ಪೂಜೆ, ಪುಣ್ಯಾಹವಾಚನ, ಗಣಹೋಮ, ನವಗ್ರಹ ಪೂಜೆ ನೆರವೇರಿತು. ಸಂಜೆ 5 ಗಂಟೆಗೆ ಕಳಸ ಸ್ಥಾಪನೆ, ಮೃತಿಕಾ ಸಂಗ್ರಹಣ ವಾಸ್ತುಪೂಜೆ, ರಾತ್ರಿ 9 ಗಂಟೆಗೆ ರತ್ನಸ್ಯಾಸ, ಯಂತ್ರಸ್ಥಾಪನೆ ಅಷ್ಠಬಂಧನ ಕ್ರಿಯೆ ನಡೆಸಲಾಯಿತು.
ಶುಕ್ರವಾರ ಬೆಳಗ್ಗೆ ಕಳಶಾರ್ಚನೆ ನಡೆಯಿತು. ಮಧ್ಯಾಹ್ನ 12-30 ಗಂಟೆಗೆ ಮಹಾಮಂಗಳಾರತಿ ಮತ್ತು ತೀರ್ಥ ಪ್ರಸಾದ ವಿತರಿಸಲಾಯಿತು.

ತಾಲೂಕಿನ ಕುರುಬನಕಟ್ಟೆ ಕ್ಷೇತ್ರದ ಧರ್ಮಾಧಿಕಾರಿ ಬಿ.ಎಸ್.ವರುಣ್‌ಲಿಂಗರಾಜೇಅರಸ್ ಸಾನ್ನಿಧ್ಯ ವಹಿಸಿದರೆ, ಪಟ್ಟಣದ ಶ್ರೀ ಮರಳೇಶ್ವರಸ್ವಾಮಿ ದೇವಸ್ಥಾನದ ಆಗಮಿಕ ನಾಗೇಂದ್ರ ಭಟ್ ನೇತೃತ್ವದಲ್ಲಿ ದೇಗುಲದ ಪೂಜಾ ಕೈಂಕರ್ಯಗಳು ಶ್ರದ್ಧಾ ಭಕ್ತಿಯಿಂದ ಜರುಗಿದವು.

ಇದೇ ವೇಳೆ ದೇಗುಲದ ಆವರಣದಲ್ಲಿ ನೂರಾರು ಭಕ್ತರಿಗೆ ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು. ದೇಗುಲದ ಉದ್ಘಾಟನೆ ಹಿನ್ನೆಲೆ ಬಡಾವಣೆಯ ಬೀದಿಗಳನ್ನು ಹಸಿರು ತಳಿರು ತೋರಣ ಮತ್ತು ವರ್ಣ ರಂಚಿತ ವಿದ್ಯುತ್ ದೀಪಗಳಿಂದ ಅಲಂಕಾರಗೊಳಿಸಲಾಗಿತ್ತು.

ಮಾಜಿ ಸಂಸದ ಆರ್.ಧ್ರುವನಾರಾಯಣ್, ಮಾಜಿ ಸಚಿವ ಎಚ್.ಸಿ.ಮಹದೇವಪ್ಪ, ಮಾಜಿ ಶಾಸಕರಾದ ಎಸ್.ಜಯಣ್ಣ, ಎ.ಆರ್.ಕೃಷ್ಣಮೂರ್ತಿ, ಕೆಎಂಎಫ್ ನಿರ್ದೇಶಕ ನಂಜುಂಡಸ್ವಾಮಿ, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ತೋಟೇಶ್, ನಗರಸಭಾ ಮಾಜಿ ಅಧ್ಯಕ್ಷರಾದ ಬಸ್ತಿಪುರ ಶಾಂತರಾಜು, ಪಿ.ಮಲ್ಲಿಕಾರ್ಜುನ್ ಸೇರಿದಂತೆ ಇತರರು ದೇಗುಲಕ್ಕೆ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು.

ಭೀಮನಗರದ ಯಜಮಾನರಾದ ಕುಮಾರ್, ಹುಚ್ಚಪ್ಪ, ಸೋಮಶೇಖರ್, ಸಿದ್ಧಾರ್ಥ, ನಟರಾಜು, ಮಹದೇವಸ್ವಾಮಿ, ಚಿಕ್ಕಲಿಂಗಯ್ಯ, ಮಾಜಿ ಯಜಮಾನರಾದ ಸಿದ್ದರಾಜು, ಶಿವರಾಳ, ನಿಂಗರಾಜು, ಚಿಕ್ಕುಚ್ಚಯ್ಯ, ಎಲ್.ಲಿಂಗರಾಜು, ಕೆ.ಜೆ.ಜವರಪ್ಪ, ನಾರಾಯಣ್, ನಗರಸಭಾ ಸದಸ್ಯ ಎಸ್.ಮಂಜುನಾಥ್, ಮುಖಂಡರಾದ ಡಿ.ಸಿದ್ದರಾಜು, ಬಸವರಾಜು, ಪಿ.ಕೃಷ್ಣರಾಜ್, ರಾಚಪ್ಪ, ಚಿನ್ನಸ್ವಾಮಿ ಮಾಳಿಗೆ, ಪರಮೇಶ್ ಹಾಗೂ ಇತರರು ಹಾಜರಿದ್ದರು.

 

Stay connected

278,751FansLike
588FollowersFollow
628,000SubscribersSubscribe

ವಿಡಿಯೋ ನ್ಯೂಸ್

VIDEO| ಕ್ರಿಕೆಟ್​​ ಮೈದಾನಕ್ಕೆ ಎಂಟ್ರಿ ಕೊಟ್ಟು ಪಂದ್ಯವನ್ನೇ ಕೆಲಕಾಲ ನಿಲ್ಲಿಸಿದ...

ಹೈದರಾಬಾದ್​: ಮಳೆಯ ಕಾರಣದಿಂದಾಗಿ ಕ್ರಿಕೆಟ್​ ಪಂದ್ಯಗಳು ಕೆಲಕಾಲ ಸ್ಥಗಿತಗೊಳ್ಳುವುದನ್ನು ನಾವು ನೋಡಿದ್ದೇವೆ. ಆದರೆ, ಹಾವಿನಿಂದಾಗಿ ಪಂದ್ಯ ಕೆಲಕಾಲ ನಿಲ್ಲುವುದನ್ನು ಎಂದಾದರೂ ನೋಡಿದ್ದೀರಾ? ಇಲ್ಲ ಎಂದಾದಲ್ಲಿ ನಾವು ತೋರಿಸುತ್ತೇವೆ ನೋಡಿ.... ಡಿಸೆಂಬರ್​ 9ರ...

VIDEO: ನಮಾಮಿ ಗಂಗಾ ಯೋಜನೆ ಪ್ರಗತಿ ಪರಿಶೀಲನೆ ಮುಗಿಸಿ ವಾಪಸ್​...

ಲಖನೌ: ಪ್ರಧಾನಿ ನರೇಂದ್ರ ಮೋದಿಯವರು ನ್ಯಾಷನಲ್ ಗಂಗಾ ಕೌನ್ಸಿಲ್​ನ ಮೊದಲ ಸಭೆಯನ್ನು ಇಂದು ಕಾನ್ಪುರದಲ್ಲಿ ನಡೆಸಿದ್ದಾರೆ. ಸಭೆಯಲ್ಲಿ ನಮಾಮಿ ಗಂಗಾ ಯೋಜನೆಯ ಮುಂದಿನ ಹಂತಗಳು, ನದಿ ಸ್ವಚ್ಛತೆಗೆ ತೆಗೆದುಕೊಳ್ಳಬೇಕಾದ ಕ್ರಮಗಳ ಬಗ್ಗೆ ನರೇಂದ್ರ ಮೋದಿ...

ವಿಡಿಯೋ | ಪತ್ನಿಗಾಗಿ ಆತ ಮಾಡಿದ ಆ ಕೆಲಸಕ್ಕೆ ನೆಟ್ಟಿಗರ...

ಈತ ತನ್ನ ಮಡದಿಗಾಗಿ ಮಾಡಿದ ಆ ಕೆಲಸದಿಂದ ಸಾಮಾಜಿಕ ಜಾಲತಾಣಗಳಲ್ಲಿ ಅಪಾರ ಪ್ರಶಂಸೆ ಪಡೆದಿದ್ದಾನೆ. ಚೀನಾದ ಹೆಗಾಂಗ್​ನ ಪೊಲೀಸರು ಇಂತಹ ವೀಡಿಯೊಂದನ್ನು ಹಂಚಿಕೊಂಡಿದ್ದಾರೆ. ಈ ವಿಡಿಯೋ ವೀಕ್ಷಿಸಿದ ಸಾವಿರಾರು ಮಂದಿ ಅದಕ್ಕೆ ಮೆಚ್ಚುಗೆ ಸೂಚಿಸಿದ್ದಾರೆ. ಆ...

VIDEO: ಕಾನ್ಪುರದಲ್ಲಿ ನ್ಯಾಷನಲ್​ ಗಂಗಾ ಕೌನ್ಸಿಲ್​ ಮೊದಲ ಸಭೆ: ಅಟಲ್​...

ಕಾನ್ಪುರ: ಪ್ರಧಾನಿ ನರೇಂದ್ರ ಮೋದಿಯವರು ಇಂದು ಕಾನ್ಪುರಕ್ಕೆ ತೆರಳಿದ್ದು ನ್ಯಾಷನಲ್​ ಗಂಗಾ ಕೌನ್ಸಿಲ್​ನ ಮೊದಲ ಸಭೆ ನಡೆಸಿದ್ದಾರೆ. ಉತ್ತರ ಪ್ರದೇಶದ ಕಾನ್ಪುರಕ್ಕೆ ತಲುಪಿದ ಅವರನ್ನು ಅಲ್ಲಿನ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರು ಸ್ವಾಗತಿಸಿದರು. ಬಳಿಕ...

ಮನೆಗೆಲಸದ ಯುವತಿ ಮೇಲೆ ಮೌಲ್ವಿಯಿಂದ ಅತ್ಯಾಚಾರ: ಐರನ್​ ಬಾಕ್ಸ್​ನಿಂದ ಮೈಯೆಲ್ಲ...

ಬೆಂಗಳೂರು: ಮನೆಯ ಕೆಲಸಕ್ಕಿದ್ದ ಯುವತಿಯ ಮೇಲೆ ಅತ್ಯಾಚಾರ ಎಸಗಿ, ಐರನ್​ ಬಾಕ್ಸ್​ನಿಂದ ಮೈಯೆಲ್ಲಾ ಸುಟ್ಟು ಮೌಲ್ವಿಯೊಬ್ಬ ವಿಕೃತ ಮೆರೆದಿರುವ ಆರೋಪ ರಾಜ್ಯ ರಾಜಧಾನಿಯಲ್ಲಿ ಕೇಳಿಬಂದಿದೆ. ನಗರದ ಕೋರಮಂಗಲದಲ್ಲಿ ಪೈಶಾಚಿಕ ಕೃತ್ಯ ನಡೆದಿದೆ...

ಕಾಂಗ್ರೆಸ್​ನಿಂದ ಭಾರತ್​ ಬಚಾವೋ ಬೃಹತ್​ ರ‍್ಯಾಲಿ: ಬಿಜೆಪಿ ವಿರುದ್ಧ ಹರಿಹಾಯ್ದ...

ನವದೆಹಲಿ: ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಹಲವು ಕ್ರಮಗಳು ಹಾಗೂ ದೇಶದಲ್ಲಿ ಕುಸಿಯುತ್ತಿರುವ ಅರ್ಥ ವ್ಯವಸ್ಥೆ ಹಾಗೂ ಉದ್ಯೋಗಾವಕಾಶಗಳ ಬಗ್ಗೆ ಜನರಿಗೆ ತಿಳಿಸಲು ಕಾಂಗ್ರೆಸ್,​ ರಾಷ್ಟ್ರ ರಾಜಧಾನಿಯಲ್ಲಿ "ಭಾರತ್​ ಬಚಾವೋ"...