22.8 C
Bengaluru
Saturday, January 18, 2020

ವಾರ ಕಳೆದರೂ ಹಂಚಿಕೆಯಾಗದ ಖಾತೆ: ಪ್ರಮುಖ ಸಚಿವ ಸ್ಥಾನಗಳಿಗೆ ಮಹಾ ವಿಕಾಸ ಆಘಾಡಿಯಲ್ಲಿ ಮುಂದುವರಿದ ಹಗ್ಗಜಗ್ಗಾಟ

Latest News

PHOTOS| ಉಡುಪಿಯಲ್ಲಿ ವೈಭವದ ಅದಮಾರು ಪರ್ಯಾಯ ಮೆರವಣಿಗೆ

ಉಡುಪಿ: ಪರ್ಯಾಯ ಶ್ರೀ ಅದಮಾರು ಮಠದ ಈಶಪ್ರಿಯತೀರ್ಥ ಸ್ವಾಮೀಜಿಯವರ ಪ್ರಥಮ ಪರ್ಯಾಯದ ಮೆರವಣಿಗೆಗೆ ಕಲಾತಂಡಗಳು ಹೆಚ್ಚಿನ ಮೆರಗು ನೀಡಿತು. ಶನಿವಾರ ಮುಂಜಾನೆ 2.30ಕ್ಕೆ...

ಬೈಕ್​ ಅಪಘಾತದಲ್ಲಿ ಮೃತ ಪಟ್ಟ ಮಗನ ಅಂಗಾಂಗವನ್ನು ಹಾಸನದ ಹಿಮ್ಸ್​ಗೆ ದಾನ ಮಾಡಿದ ಪಾಲಕರು

ಹಾಸನ: ಅಪಘಾತದಲ್ಲಿ ಮೃತಪಟ್ಟ ಮಗನ ಅಂಗಾಂಗ ದಾನ ಮಾಡಿ ಪಾಲಕರು ಮಾನವೀಯತೆ ಮೆರೆದಿದ್ದಾರೆ. ಹಾಸನ ತಾಲೂಕಿನ ಮರ್ಕೂಲಿ ಗ್ರಾಮದ ರಂಗಸ್ವಾಮಿ ಮತ್ತು ಶಿವಮ್ಮ ದಂಪತಿಯ ಪುತ್ರ ಸಚಿನ್...

PHOTOS| ಅದಮಾರು ಪರ್ಯಾಯ ವೈಭವದ ಶೋಭಯಾತ್ರೆ | ಬೀದಿ, ಬೀದಿಗಳಲ್ಲಿ ಪರ್ಯಾಯ ಸಂಭ್ರಮ

ಉಡುಪಿ: ಕೃಷ್ಣನಗರಿ ಉಡುಪಿ ನಾಡಹಬ್ಬ ಪರ್ಯಾಯ ಅದಮಾರು ಶ್ರೀ ಈಶಪ್ರಿಯ ತೀರ್ಥ ಸ್ವಾಮೀಜಿ ಅವರ ಪರ್ಯಾಯೋತ್ಸವದಲ್ಲಿ ಸಂಭ್ರಮದಿಂದ ಮಿಂದೆದ್ದಿತು. ಸಹಸ್ರಾರು ಮಂದಿ ಭಕ್ತರು...

‘ವಿಜಯವಾಣಿ’ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್: ಟ್ರಾಫಿಕ್ ಜಾಮ್​ ಸಂಚಾರ ನೀತಿಯ ಸಮಸ್ಯೆ!

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಡ್ರಗ್ಸ್ ನಿಯಂತ್ರಿಸದಿದ್ದರೆ ಶಿಕ್ಷಣ ಸಂಸ್ಥೆ ವಿರುದ್ಧ ಕ್ರಮ; ‘ವಿಜಯವಾಣಿ ಫೋನ್ ಇನ್ ಕಾರ್ಯಕ್ರಮದಲ್ಲಿ ನಗರ ಪೊಲೀಸ್ ಆಯುಕ್ತ ಭಾಸ್ಕರ್ ರಾವ್

ಬಡ್ಡಿ ಆಸೆಗೆ ವಂಚಕ ಕಂಪನಿಗಳಲ್ಲಿ ಹಣ ಹೂಡಿಕೆ ಮಾಡಿ ಮೋಸ ಹೋಗದಂತೆ ಜನರಿಗೆ ಎಚ್ಚರಿಕೆ, ಹೆಣ್ಣಿನ ರಕ್ಷಣೆಗೆ ‘ವೀರವನಿತೆ’ ಪಡೆ, ಸರಗಳ್ಳತನ, ಮನೆಗಳ್ಳತನ, ದರೋಡೆಯಂಥ ಅಪರಾಧ ಕೃತ್ಯ...

ಮುಂಬೈ: ಶಿವಸೇನೆ, ಎನ್​ಸಿಪಿ ಮತ್ತು ಕಾಂಗ್ರೆಸ್​ನ ಮಹಾರಾಷ್ಟ್ರ ವಿಕಾಸ ಆಘಾಡಿ (ಎಂವಿಎ) ಸರ್ಕಾರ ರಚನೆಯಾಗಿ ಒಂದು ವಾರ ಕಳೆದರೂ ಸಿಎಂ ಉದ್ಧವ್ ಠಾಕ್ರೆ ಜತೆಗೆ ಪ್ರಮಾಣವಚನ ಸ್ವೀಕರಿಸಿದ ಆರು ಸಚಿವರಿಗೆ ಇನ್ನೂ ಖಾತೆ ಹಂಚಿಕೆ ಆಗಿಲ್ಲ. ಪ್ರಮುಖವಾದ ಹಣಕಾಸು, ಕಂದಾಯ, ಗೃಹ, ವಸತಿ ಖಾತೆಗಳ ಮೇಲೆ ಮೂರೂ ಪಕ್ಷಗಳು ಕಣ್ಣಿಟ್ಟಿರುವ ಕಾರಣ ಖಾತೆ ಹಂಚಿಕೆ ಆಗಿಲ್ಲವೆಂದು ಹೇಳಲಾಗುತ್ತಿದೆ.

ಖಾತೆ ಹಂಚಿಕೆ ಮಾಡದಿರುವುದು ಒಳ್ಳೆಯ ಲಕ್ಷಣವಲ್ಲ. ಏನೇ ಗೊಂದಲವಿದ್ದರೂ ಸಿಎಂ ಠಾಕ್ರೆ ಮತ್ತು ಎನ್​ಸಿಪಿ ಮುಖ್ಯಸ್ಥ ಶರದ್ ಪವಾರ್ ಅದನ್ನು ಬಗೆಹರಿಸಿಕೊಳ್ಳಬೇಕು. ಎಲ್ಲ ಸಚಿವರಿಗೂ ಖಾತೆ ಹಂಚಿಕೆ ಮಾಡಬೇಕು. ಖಾತೆ ಹಂಚಿಕೆಯಾಗದ ಕಾರಣ ಆಡಳಿತಾತ್ಮಕ ಕಾರ್ಯಗಳು ಸ್ಥಗಿತಗೊಂಡಿವೆ. ಡಿ. 16ರಿಂದ ಚಳಿಗಾಲದ ಅಧಿವೇಶನ ಆರಂಭವಾಗುತ್ತಿದ್ದು, ಪ್ರಬಲವಾಗಿರುವ ವಿರೋಧ ಪಕ್ಷವನ್ನು ಸಮರ್ಥವಾಗಿ ಎದುರಿಸಬೇಕಾದರೆ ಖಾತೆ ಹಂಚಿಕೆ ಶೀಘ್ರದಲ್ಲೇ ಆಗಬೇಕು ಎಂದು ಹೆಸರು ಹೇಳಲು ಇಚ್ಛಿಸದ ಸಚಿವರೊಬ್ಬರು ಹೇಳಿದ್ದಾರೆ. ಚಳಿಗಾಲದ ಅಧಿವೇಶನದ ನಂತರ ಸಂಪುಟ ವಿಸ್ತರಣೆ ಮಾಡುವುದು ಸೂಕ್ತ ಎಂಬ ಅಭಿಪ್ರಾಯ ಮೂರೂ ಪಕ್ಷಗಳಲ್ಲಿ ಇದೆ. ಹೀಗಾಗಿ ಅಧಿವೇಶನದ ಬಳಕವಷ್ಟೆ ಸಂಪುಟ ವಿಸ್ತರಣೆ ಸಾಧ್ಯತೆ ಎಂದು ಅವರು ತಿಳಿಸಿದ್ದಾರೆ.

ಎಂವಿಎನಲ್ಲಿ ಪ್ರಮುಖ ಖಾತೆಗಳಿಗೆ ಕಿತ್ತಾಟವಿದೆ. ಹೀಗಾಗಿ ಖಾತೆ ಹಂಚಿಕೆ ಮಾಡಲು ಸಿಎಂ ಉದ್ಧವ್ ಠಾಕ್ರೆಗೆ ಆಗಿಲ್ಲ. ಈ ಮೂರು ಪಕ್ಷಗಳಲ್ಲೇ ಖಾತೆಗಾಗಿ ಜಗಳ ನಡೆಯುತ್ತಿದೆ ಎಂದು ಬಿಜೆಪಿ ಮುಖಂಡ ಆಶಿಷ್ ಶೆಲರ್ ಆರೋಪಿಸಿದ್ದಾರೆ. ಶಿವಸೇನೆಯಿಂದ ಏಕನಾಥ್ ಶಿಂಧೆ ಮತ್ತು ಸುಭಾಷ್ ದೇಸಾಯಿ, ಎನ್​ಸಿಪಿಯ ಜಯಂತ್ ಪಾಟೀಲ್ ಹಾಗೂ ಛಗನ್ ಬುಜಬಲ್, ಕಾಂಗ್ರೆಸ್​ನ ಬಾಳಾಸಾಹೇಬ್ ಥರೋಟ್ ಮತ್ತು ನಿತಿನ್ ರಾವತ್ ಸಚಿವರಾಗಿದ್ದಾರೆ.

ಆರೆಸ್ಸೆಸ್ ಬೆಂಬಲಿತ ಸಂಸ್ಥೆಗೆ ವಿನಾಯ್ತಿ ರದ್ದು

ಬಿಜೆಪಿ-ಶಿವಸೇನೆ ಸರ್ಕಾರದ ಆಡಳಿತದಲ್ಲಿ ಆರ್​ಎಸ್​ಎಸ್ ಜತೆಗೆ ನಂಟು ಹೊಂದಿರುವ ನಾಗಪುರ ಮೂಲದ ಭಾರತೀಯ ಶಿಕ್ಷಣ ಮಂಡಲ್ ಸಂಶೋಧನಾ ಸಂಸ್ಥೆಗೆ ನೀಡಲಾಗಿದ್ದ ನೋಂದಣಿ ಶುಲ್ಕದಿಂದ ವಿನಾಯ್ತಿಯನ್ನು ತ್ರಿಪಕ್ಷ ಕೂಟದ ಸರ್ಕಾರ ರದ್ದು ಮಾಡಿದೆ. ಭಾರತೀಯ ಶಿಕ್ಷಣ ಮಂಡಲ್ ಕರೋಲ್ ತಾಲ್ಲೂಕಿನಲ್ಲಿ 105 ಹೆಕ್ಟೇರ್ ಭೂಮಿ ಖರೀದಿಸಿದೆ. ಇದರ ನೋಂದಣಿಗೆ ಪಾವತಿಸಬೇಕಾದ (-ಠಿ; 1.50 ಕೋಟಿ) ಶುಲ್ಕದಿಂದ ಆಗಿನ ಸಿಎಂ ಫಡ್ನವೀಸ್ ವಿನಾಯಿತಿ ನೀಡಿದ್ದರು.

ವಿಡಿಯೋ ನ್ಯೂಸ್

VIDEO| ತನ್ನ ಆಹಾರವನ್ನು ಮೀನು ಬಾಯಿಗಿಡುವ ಬಾತುಕೋಳಿ: ವೈರಲ್​ ವಿಡಿಯೋ...

ನವದೆಹಲಿ: ಪ್ರಾಣಿಗಳ ನಡುವಿನ ಅನ್ಯೋನ್ಯತೆಗೆ ಸಂಬಂಧಿಸಿದ ಸಾಕಷ್ಟು ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ನೋಡಿದ್ದೇವೆ. ಅದರಲ್ಲೂ ಪರಸ್ಪರ ವೈರುಧ್ಯವುಳ್ಳ ಜೀವಿಗಳೆರಡು ಒಂದಕ್ಕೊಂದು ಪೋಷಿಸುವುದನ್ನು ನೋಡಿದರೆ ಅಚ್ಚರಿಯಾಗದೇ ಇರದು. ಅಂತಹದ್ದೇ ವಿಡಿಯೋವೊಂದು ಇದೀಗ...

VIDEO| ನಾವೆಲ್ಲ ಕಾಳಿಯನ್ನು ಪೂಜಿಸುವವರು, ನಮಗೆ ಮೃತ್ಯು ಬಹಳ ದೊಡ್ಡ...

ಬೆಂಗಳೂರು: ಯುವ ಬ್ರಿಗೇಡ್​ ಸಂಸ್ಥಾಪಕ ಚಕ್ರವರ್ತಿ ಸೂಲಿಬೆಲೆ ಹಾಗೂ ಸಂಸದ ತೇಜಸ್ವಿಸೂರ್ಯ ಸೇರಿದಂತೆ ಹಿಂದು ಮುಖಂಡರ ಹತ್ಯೆಗೆ ಸಂಚು ನಡೆಸಿರುವ ಆಘಾತಕಾರಿ ಘಟನೆ ಬಯಲಾಗಿ, 6 ಮಂದಿಯನ್ನು ಬಂಧಿಸದ ಬೆನ್ನಲ್ಲೇ...

VIDEO| ಮಗಳ ಸಾವನ್ನು ಮುಂದಿಟ್ಟಕೊಂಡು ರಾಜಕೀಯ ಮಾಡುತ್ತಿದ್ದಾರೆ; ನಿರ್ಭಯಾ ಪ್ರಕರಣದ...

ನವದೆಹಲಿ: ನಿರ್ಭಯಾ ಪ್ರಕರಣ ಅಪರಾಧಿಗಳ ಗಲ್ಲು ಮುಂದೂಡುತ್ತಿರುವುದಕ್ಕೆ ಸಂತ್ರಸ್ಥೆ ತಾಯಿ ತೀವ್ರ ಬೇಸರ ವ್ಯಕ್ತಪಡಿಸಿದ್ದಾರೆ. ಮಾಧ್ಯಮಗಳ ಜತೆ ಮಾತನಾಡಿದ ಅವರು, ಈವರಗೆ ನಾನು ರಾಜಕೀಯದ ಬಗ್ಗೆ ಮಾತನಾಡಿಲ್ಲ. 2012ರಲ್ಲಿ ಪ್ರಕರಣ ನಡೆದಾಗ, ಅದನ್ನು ಖಂಡಿಸಿ...

VIDEO: ಪಕ್ಕೆಲುಬು ಆಯ್ತು…ಈಗ ಪುಳಿಯೊಗರೆ; ಮತ್ತೊಂದು ಸರ್ಕಾರಿ ಶಾಲೆಯಿಂದ ಹೊರಬಿತ್ತು...

ಸಕಲೇಶಪುರ: ಪಕ್ಕೆಲುಬು ಹೇಳಲು ಬಾರದ ವಿದ್ಯಾರ್ಥಿಯ ವಿಡಿಯೋ ಮಾಡಿ ಸಾಮಾಜಿಕ ಜಾಲತಾಣದಲ್ಲಿ ಹರಿಬಿಡುವ ಮೂಲಕ ಶಿಕ್ಷಕನೋರ್ವ ವಿವಾದ ಸೃಷ್ಟಿಸಿದ್ದ. ಬಾಲಕ ಪಕ್ಕೆಲುಬು ಹೇಳಲಾಗದೆ ಕಷ್ಟಪಡುತ್ತಿದ್ದರೆ ಅದನ್ನು ವಿಡಿಯೋ ಮಾಡಿದ್ದ ಕುರುವತ್ತಿ ಸರ್ಕಾರಿ ಹಿರಿಯ ಪ್ರಾಥಮಿಕ...

ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನಸೆಳೆದಿದ್ದ ಟೀಂ ಇಂಡಿಯಾ ಸೂಪರ್​ ಫ್ಯಾನ್​...

ನವದೆಹಲಿ: ಕಳೆದ ವಿಶ್ವಕಪ್​ನಲ್ಲಿ ಇಡೀ ಜಗತ್ತಿನ ಗಮನ ಸೆಳೆದಿದ್ದ ಟೀಂ ಇಂಡಿಯಾದ ಸೂಪರ್​ ಫ್ಯಾನ್​ ಚಾರುಲತಾ ಪಟೇಲ್​ (87) ನಿಧನರಾಗಿದ್ದಾರೆ. 2019ರಲ್ಲಿ ವಿಶ್ವಕಪ್​ನಲ್ಲಿ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಪಂದ್ಯದಲ್ಲಿ ಚಾರುಲತಾ ಪಟೇಲ್​ ಕ್ಯಾಮರಾಕಣ್ಣಿಗೆ...

VIDEO| ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರೋ ಆಸ್ಟ್ರೇಲಿಯಾ ಮೇಲೆ ವರುಣನ ಕೃಪೆ:...

ಸಿಡ್ನಿ: ಭೀಕರ ಕಾಡ್ಗಿಚ್ಚಿಗೆ ತುತ್ತಾಗಿರುವ ಕಾಂಗರೂ ನಾಡು ಆಸ್ಟ್ರೇಲಿಯಾ ಮೇಲೆ ಇದೀಗ ವರುಣ ದೇವ ಕೃಪೆ ತೋರಿದ್ದಾನೆ. ಇದರ ನಡುವೆ 18 ತಿಂಗಳ ಮಗುವೊಂದು ಮೊದಲ ಬಾರಿಗೆ ಮಳೆ ಸುರಿಯುವುದನ್ನು...