More

    ಈಗಲಾದರೂ ಮಹದಾಯಿ ನೀರು ನೀರು ದಕ್ಕೀತೆ?

    ಹುಬ್ಬಳ್ಳಿ: ಸವೋಚ್ಚ ನ್ಯಾಯಾಲಯದ ತೀರ್ಪು ರೈತರ ನಾಲ್ಕು ದಶಕಗಳ ಹೋರಾಟಕ್ಕೆ ಸಿಕ್ಕ ಮತ್ತೊಂದು ಜಯವಾಗಿದೆ. ಇದರಿಂದ ಮುಂದಿನ ವರ್ಷದಲ್ಲಾದರೂ ಕಳಸಾ-ಬಂಡೂರಿ ನಾಲಾ ಯೋಜನೆ ಕಾರ್ಯಗತಗೊಂಡು ರಾಜ್ಯಕ್ಕೆ ಮಹದಾಯಿ ನೀರು ದಕ್ಕುವ ನಿರೀಕ್ಷೆ ಹುಟ್ಟಿದೆ. ನ್ಯಾಯಮೂರ್ತಿ ಜೆ.ಎಂ. ಪಾಂಚಾಲ್ ನೇತೃತ್ವದ ಮಹದಾಯಿ ನದಿ ನೀರು ನ್ಯಾಯಾಧಿಕರಣ 2018ರ ಆ. 14ರಂದು ಕರ್ನಾಟಕಕ್ಕೆ 13.42 ಟಿಎಂಸಿ ಮಹದಾಯಿ ನೀರು ಹಂಚಿಕೆ ಮಾಡಿತ್ತು. ಇದರಲ್ಲಿ 8.02 ಟಿಎಂಸಿ ವಿದ್ಯುಚ್ಛಕ್ತಿ ಉತ್ಪಾದನೆಗೆ, ಉಳಿದದ್ದು ಕುಡಿವ ನೀರಿನ ಉದ್ದೇಶಕ್ಕೆ ಬಳಕೆ ಮಾಡಬಹುದಾಗಿದೆ. ನ್ಯಾಯಾಧಿಕರಣ ತೀರ್ಪಿನ ಬಳಿಕ ನೀರು ಬಳಕೆ ಸಂಬಂಧ ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿ ಸಬೇಕಿತ್ತು. ಇದಕ್ಕೆ ವಿಳಂಬವಾಗಿದ್ದರಿಂದ ರೈತ ಹೋರಾಟಗಾರ ವೀರೇಶ ಸೊಬರದಮಠ ಸವೋಚ್ಚ ನ್ಯಾಯಾಲಯಕ್ಕೆ ಸಾರ್ವಜನಿಕ ಹಿತಾಸಕ್ತಿ ದಾವೆ ಹೂಡಿ ನೀರು ಬಳಕೆ ಮಾಡಿಕೊಳ್ಳಲು ಸೂಚನೆ ನೀಡಬೇಕೆಂದು ಮನವಿ ಮಾಡಿದ್ದರು. ರಾಜ್ಯ ಸರ್ಕಾರವು ಗೆಜೆಟ್ ನೋಟಿಪಿಕೇಶನ್​ಗೆ ಅರ್ಜಿ ಸಲ್ಲಿಸಿತ್ತು. ಗುರುವಾರ ಸವೋಚ್ಚ ನ್ಯಾಯಾಲಯ ರೈತರ ಪರ ತೀರ್ಪು ನೀಡಿದೆ. ಇದರಿಂದ ಕಳಸಾ-ಬಂಡೂರಿ ನಾಲಾ ಯೋಜನೆಗೆ ಇದ್ದ ಅಡೆತಡೆ ನಿವಾರಣೆಯಾದಂತಾಗಿದೆ. ಇದೀಗ ಏನಿದ್ದರೂ ಕೇಂದ್ರ ಸರ್ಕಾರ ತ್ವರಿತವಾಗಿ ಗೆಜೆಟ್ ನೋಟಿಫಿಕೇಶನ್ ಹೊರಡಿಸಬೇಕು. ರಾಜ್ಯ ಸರ್ಕಾರ ತ್ವರಿತವಾಗಿ ಕಳಸಾ-ಬಂಡೂರಿ ನಾಲಾ ಯೋಜನೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು.

    ಬಜೆಟ್ ಮೇಲೆ ಕಣ್ಣು: ರಾಜ್ಯ ಸರ್ಕಾರ ಮಾ.5ರಂದು 2020-21ನೇ ಸಾಲಿನ ಬಜೆಟ್ ಮಂಡಿಸಲಿದೆ. ಕೇಂದ್ರ ಸರ್ಕಾರ ಗೆಜೆಟ್ ನೋಟಿಫಿಕೇಶನ್ ಹೊರಡಿಸುವುದನ್ನು ಕಾಯದೇ ರಾಜ್ಯ ಸರ್ಕಾರ ಬಜೆಟ್​ನಲ್ಲಿ ಕಳಸಾ-ಬಂಡೂರಿ ನಾಲಾ ಯೋಜನೆಗೆ ಅನುದಾನ ಹಂಚಿಕೆ ಮಾಡುವ ಮೂಲಕ ಬದ್ಧತೆ ಪ್ರದರ್ಶಿಸಬೇಕಿದೆ. 2008ರಲ್ಲಿ 93.98 ಕೋಟಿ ರೂ. ಅಂದಾಜು ವೆಚ್ಚಕ್ಕೆ ರಾಜ್ಯ ಸರ್ಕಾರ ಆಡಳಿತಾತ್ಮಕ ಮಂಜೂರಾತಿ ನೀಡಿತ್ತು.ಬಳಿಕ 2016ರಲ್ಲಿ ಪರಿಷ್ಕೃತ ಅಂದಾಜು ವೆಚ್ಚ 757.63 ಕೋಟಿ ರೂ. ಗೆ ತಲುಪಿದೆ. ಕಾಲುವೆ ನಿರ್ಮಾಣಕ್ಕಾಗಿ ಈಗಾಗಲೇ 207 ಕೋಟಿ ರೂ. ಖರ್ಚು ಮಾಡಲಾಗಿದೆ.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts