ಪರಸ್ಪರ ಪ್ರೀತಿಯಿಂದ ಸಂಘಟನೆ ಬಲ : ಕಣಿಯೂರು ಸ್ವಾಮೀಜಿ ನುಡಿ

Published on

ಉಳ್ಳಾಲ: ನಾವು ಸತ್ತು ಬದುಕುವುದಕ್ಕಿಂತ ಬದುಕಿ ಸಾಯಬೇಕು. ನಮ್ಮ ಸಂಘಟನೆ ಬಲವಾದರೆ ಇನ್ನೊಬ್ಬನ ಮನೆಬಾಗಿಲಿಗೆ ಹೋಗಬೇಕಿಲ್ಲ. ನಮ್ಮ ನಡುವೆ ಪ್ರೀತಿ ಇದ್ದರೆ ಊರಿನ ಜನ ನಮ್ಮನ್ನು ಪ್ರೀತಿಸುತ್ತಾರೆ ಎಂದು ಶ್ರೀ ಕ್ಷೇತ್ರ ಕಣಿಯೂರಿನ ಶ್ರೀ ಮಹಾಬಲೇಶ್ವರ ಸ್ವಾಮೀಜಿ ನುಡಿದರು.

ಗ್ರಾಮ ಚಾವಡಿ ಕೊಣಾಜೆ ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ವತಿಯಿಂದ ಬ್ರಹ್ಮಶ್ರೀ ನಾರಾಯಣ ಗುರುಗಳ ಪಂಚಲೋಹ ವಿಗ್ರಹದ ಪುನರ್ ಪ್ರತಿಷ್ಠೆ, ಮಹಾಕುಂಭಾಭಿಷೇಕ ಹಾಗೂ ಸಂಘದ 44ನೇ ವಾರ್ಷಿಕೋತ್ಸವದ ಸಭಾ ಕಾರ್ಯಕ್ರಮದಲ್ಲಿ ಆಶೀರ್ವಚನ ನೀಡಿದರು.

ಬಂಟ್ವಾಳ ತಾಲೂಕು ಬಿಲ್ಲವ ಸೇವಾ ಸಮಾಜದ ಅಧ್ಯಕ್ಷ ಸಂಜೀವ ಪೂಜಾರಿ ಬಿ.ಸಿ.ರೋಡು ಸಭಾ ಕಾರ್ಯಕ್ರಮ ಉದ್ಘಾಟಿಸಿದರು. ಮಂಗಳೂರು ತಾಲೂಕು ಬಿಲ್ಲವ ಸಂಘದ ಅಧ್ಯಕ್ಷ ಜಿತೇಂದ್ರ ಜೆ.ಸುವರ್ಣ ಅಧ್ಯಕ್ಷತೆ ವಹಿಸಿದ್ದರು.

ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಸದಾಶಿವ ಉಳ್ಳಾಲ್, ಮುಡಿಪು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರಶಾಂತ ಕಾಜವ, ಅಮ್ಮೆಂಬಳ ಸೇವಾ ಸಹಕಾರಿ ಸಂಘದ ಅಧ್ಯಕ್ಷ ಟಿ.ಜಿ.ರಾಜಾರಾಮ ಭಟ್, ಬಿಜೆಪಿ ಮಂಗಳೂರು ಮಂಡಲ ಅಧ್ಯಕ್ಷ ಜಗದೀಶ್ ಆಳ್ವ ಕೂವೆತ್ತಬೈಲ್, ಉದ್ಯಮಿ ವಿಜೇಶ್ ನಾಯಕ್ ನಡಿಗುತ್ತು, ಮೂರ್ತೆದಾರರ ಮಹಾಮಂಡಲದ ಜಿಲ್ಲಾಧ್ಯಕ್ಷ ಸಂಜೀವ ಪೂಜಾರಿ ಬಿರ್ವ, ಅಸೈಗೋಳಿ ಶ್ರೀ ಗುಳಿಗ ಕೊರಗಜ್ಜ ಕ್ಷೇತ್ರ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷ ರವಿ ರೈ ಪಜೀರ್, ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಚಿತ್ತರಂಜನ್ ಬೋಳಾರ್, ಉದ್ಯಮಿ ರಾಧಾಕೃಷ್ಣ ರೈ ಉಮಿಯ, ಯುವವಾಹಿನಿ ಕೇಂದ್ರ ಸಮಿತಿ ಅಧ್ಯಕ್ಷ ಹರೀಶ್ ಜೆ.ಪೂಜಾರಿ, ಶ್ರೀ ಕ್ಷೇತ್ರ ಗೆಜ್ಜೆಗಿರಿಯ ಅಧ್ಯಕ್ಷ ಪ್ರವೀಣ್ ಚಿಲಿಂಬಿ, ಲೋಕೋಪಯೋಗಿ ಗುತ್ತಿಗೆದಾರರ ಸಂಘದ ಅಧ್ಯಕ್ಷ ಶೈಲೇಶ್ ಕುಚ್ಚಿಗುಡ್ಡೆ, ಮುಡಿಪು ಲಯನ್ಸ್ ಕ್ಲಬ್ ಅಧ್ಯಕ್ಷ ಶಿವರಾಮ ರೈ ಮೇರಾವು, ಕೊಣಾಜೆ ಗ್ರಾ.ಪಂ. ಅಧ್ಯಕ್ಷೆ ಗೀತಾ ಕುಂದರ್, ಪಂಚಲೋಹ ವಿಗ್ರಹ ಪ್ರತಿಷ್ಠಾಪನಾ ಸಮಿತಿ ಅಧ್ಯಕ್ಷ ಯಶವಂತ ದೇರಾಜೆ, ಕಾರ್ಯಾಧ್ಯಕ್ಷೆ ದೇವಕಿ ಆರ್. ಉಳ್ಳಾಲ್ ಮೊದಲಾದವರು ಉಪಸ್ಥಿತರಿದ್ದರು.

ಬ್ರಹ್ಮಶ್ರೀ ನಾರಾಯಣ ಗುರು ಸೇವಾ ಸಂಘದ ಅಧ್ಯಕ್ಷ ರವೀಂದ್ರ ಬಂಗೇರ ಸ್ವಾಗತಿಸಿದರು. ಸುಭಾಷ್ ಬೋಳಿಯಾರ್ ವಂದಿಸಿದರು. ಅಜಿತ್ ಪೂಜಾರಿ ಪಜೀರ್ ಮತ್ತು ರೇಣುಕಾ ಕಣಿಯೂರು ನಿರೂಪಿಸಿದರು.

ಪಂಚಲೋಹ ವಿಗ್ರಹದ ಶೋಭಾಯಾತ್ರೆ

ಕುದ್ರೋಳಿ ಶ್ರೀ ಗೋಕರ್ಣನಾಥ ಕ್ಷೇತ್ರದಿಂದ ಬಿ.ಜನಾರ್ದನ ಪೂಜಾರಿಯವರಿಂದ ಉದ್ಘಾಟನೆಗೊಂಡ ಪಂಚಲೋಹ ವಿಗ್ರಹದ ಶೋಭಾಯಾತ್ರೆ ಅಸೈಗೋಳಿ ಶ್ರೀ ಅಯ್ಯಪ್ಪ ಸ್ವಾಮಿ ಮಂದಿರದ ಬಳಿ ತಲುಪಿ, ಬೃಹತ್ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ ಮಂದಿರ ತಲುಪಿತು.

ನಮಸ್ಕಾರವನ್ನು ಒಂದು ಕೈಯಲ್ಲಿ ಮಾಡದೆ ಹೃದಯಾಂತರಾಳದಿಂದ ಎರಡೂ ಕೈಯಲ್ಲಿ ನಮಸ್ಕಾರ ಮಾಡುವ ಬಗ್ಗೆ ಮಕ್ಕಳಿಗೆ ತಿಳಿಸಿ ಹೇಳಬೇಕಾಗಿದೆ. ನಮ್ಮ ಸಂಸ್ಕೃತಿ, ಸಂಸ್ಕಾರ ಉಳಿಸುವ ಕಾರ್ಯ ನಿರಂತರ ನಡೆಯಬೇಕು. ಶ್ರೀ ಮಹಾಬಲೇಶ್ವರ ಸ್ವಾಮೀಜಿ, ಶ್ರೀ ಕ್ಷೇತ್ರ ಕಣಿಯೂರು. ಜೀವನ ಎನ್ನುವುದು ಕ್ಷಣಿಕ, ನಮ್ಮ ಧರ್ಮಕ್ಕೆ ಚ್ಯುತಿ ಬಾರದಂತೆ ಯಾವುದೇ ಸಂಘರ್ಷ ಇಲ್ಲದೆ ಇತರ ಧರ್ಮೀಯರನ್ನು ಜೊತೆಯಾಗಿ ಕೊಂಡೊಯ್ಯುವುದು ಮುಖ್ಯ. ಇದು ಗುರುಗಳ ಸಂದೇಶವೂ ಆಗಿದೆ. ಧರ್ಮ, ಜಾತಿಗೆ ಸಂಘಟನೆ ಅಗತ್ಯ. ವೈರತ್ವ, ಜಡತ್ವ ಬಿಟ್ಟರೆ ಸಮಾಜದಲ್ಲಿ ಮುಖ್ಯವಾಹಿನಿಗೆ ಬರಲು ಸಾಧ್ಯ. ಮಕ್ಕಳಿಗೆ ಸಂಸ್ಕಾರ, ಸಂಸ್ಕೃತಿ, ವಿದ್ಯೆ, ಬುದ್ಧಿ ಕಲಿಸುವ ಕಾರ್ಯ ಮನೆಯಲ್ಲೇ ನಡೆಯಬೇಕು. ಪ್ರಶಾಂತ್ ಕಾಜವ, ಅಧ್ಯಕ್ಷ, ಮುಡಿಪು ಬ್ಲಾಕ್ ಕಾಂಗ್ರೆಸ್ https://www.vijayavani.net/shambhur-union-quarterly-meeting https://www.vijayavani.net/bantwala-23rd-literary-conference

ವಿಜಯವಾಣಿ ನಂ.1 ದಿನ ಪತ್ರಿಕೆ | Vijayavani | Kannada News
www.vijayavani.net