More

    ರೋಗಿಗಳಿಗೆ ತೊಂದರೆ ಆಗದಂತೆ ಮುಂಜಾಗ್ರತೆ ವಹಿಸಿ

    ಮಹಾಲಿಂಗಪುರ: ಪಟ್ಟಣದ ವೆಂಕಟೇಶ ಆಸ್ಪತ್ರೆಯ ಕೋವಿಡ್ ಸೆಂಟರ್‌ಗೆ ಬಾಗಲಕೋಟೆ ಜಿಲ್ಲೆಯ ನೂತನ ಜಿಲ್ಲಾ ಉಸ್ತುವಾರಿ ಸಚಿವ ಉಮೇಶ ಕತ್ತಿ ಬುಧವಾರ ಭೇಟಿ ನೀಡಿ, ಆಸ್ಪತ್ರೆಯಲ್ಲಿನ ಬೆಡ್ ಮತ್ತು ಆಕ್ಸಿಜನ್ ಲಭ್ಯತೆ, ಕೋವಿಡ್ ಚಿಕಿತ್ಸೆ ಹಾಗೂ ಕುಂದುಕೊರತೆಗಳ ಕುರಿತು ಪರಿಶೀಲನೆ ನಡೆಸಿದರು.

    ನಂತರ ವೈದ್ಯರೊಂದಿಗೆ ಮಾತನಾಡಿದ ಅವರು, ಯಾವುದೇ ಕಾರಣಕ್ಕೂ ಸೋಂಕಿತ ರೋಗಿಗಳಿಗೆ ಆಕ್ಸಿಜನ್ ಕೊರತೆ ಆಗದಂತೆ ಮುಂಜಾಗ್ರತೆ ವಹಿಸಬೇಕು. ಕೋವಿಡ್ ಸೆಂಟರ್‌ಗಳಲ್ಲಿ ಸ್ವಚ್ಛತೆೆ, ಪರಸ್ಪರ ಅಂತರ ಸೇರಿ ಸರ್ಕಾರದ ಕೋವಿಡ್ ನಿಯಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು ಎಂದು ಸೂಚಿಸಿದರು.

    ಈಗಾಗಲೇ ಜಿಲ್ಲೆಯಲ್ಲಿ ಅಧಿಕಾರಿಗಳ ಸಭೆ ನಡೆಸಿ, ಸದ್ಯ ಬಾಗಲಕೋಟೆ ಜಿಲ್ಲೆಯಲ್ಲಿ 215 ರೆಮ್‌ಡೆಸಿವಿರ್ ಇಂಜೆಕ್ಷನ್‌ಗಳು ಲಭ್ಯವಿದ್ದು, ಅದರ ಸಂಪೂರ್ಣ ನಿರ್ವಹಣೆಯನ್ನು ಜಿಪಂ ಸಿಇಒ ಅವರಿಗೆ ಒಪ್ಪಿಸಲಾಗಿದೆ. ಕೋವಿಡ್ ಸೆಂಟರ್‌ಗಳ ವೈದ್ಯರು ಮಾತ್ರ ಯಾವ ರೋಗಿಗೆ ಅದರ ಅವಶ್ಯಕತೆ ಇದೆಯೋ ಅಂಥವರ ಮಾಹಿತಿ ನೀಡಿ, ಜಿಪಂ ಸಿಇಒ ಅವರಿಂದ ರೆಮ್‌ಡೆಸಿವಿಯರ್ ಇಂಜೆಕ್ಷನ್‌ಗಳನ್ನು ಪಡೆದುಕೊಳ್ಳಬಹುದಾಗಿದೆ ಎಂದರು.

    ಪಟ್ಟಣದ ಅಂದಾನಿ ಕೋವಿಡ್ ಆಸ್ಪತ್ರೆಯಲ್ಲಿ 24 ರೋಗಿಗಳು ಆಕ್ಸಿಜನ್ ಮೂಲಕ ಚಿಕಿತ್ಸೆ ಪಡೆಯುತ್ತಿದ್ದಾರೆ. ಅಲ್ಲಿ ಆಕ್ಸಿಜನ್ ಕೊರತೆ ಇದೆ. ಆದಷ್ಟುಬೇಗ ಆ ಆಸ್ಪತ್ರೆಗೆ ಆಕ್ಸಿಜನ್ ಪೂರೈಸಬೇಕೆಂದು ಸಂದೀಪ ದೂಳನ್ನವರ, ವಿನೋದ ಸಿಂಪಿ ಅವರು ಜಿಲ್ಲಾ ಉಸ್ತುವಾರಿ ಸಚಿವರಿಗೆ ಒತ್ತಾಯಿಸಿದರು.

    ಯುವಕರ ಮನವಿಗೆ ಸ್ಪಂದಿಸಿದ ಸಚಿವರು ರಾತ್ರಿ 9 ಗಂಟೆಯೊಳಗೆ ಆಸ್ಪತ್ರೆಗೆ ಆಕ್ಸಿಜನ್ ಪೂರೈಸಲಾಗುವುದು. ಯಾವುದೇ ಕಾರಣಕ್ಕೂ ಹೆದರಿಕೆ ಬೇಡ ಎಂದರು.

    ತೇರದಾಳ ಮತಕ್ಷೇತ್ರದ ಶಾಸಕ ಸಿದ್ದು ಸವದಿ, ಜಮಖಂಡಿ ಎಸಿ ಸಿದ್ದು ಹುಲ್ಲೋಳ್ಳಿ, ರಬಕವಿ-ಬನಹಟ್ಟಿ ತಹಸೀಲ್ದಾರ್ ಸಂಜಯ ಇಂಗಳೆ, ಟಿಎಚ್‌ಓ ಡಾ. ಜಿ.ಎಸ್.ಗಲಗಲಿ, ಕಂದಾಯ ಅಧಿಕಾರಿ ಬಿ.ಆರ್.ತಾಳಿಕೋಟಿ, ಡಾ.ಅಜೀತ ಕನಕರಡ್ಡಿ, ಮುಖ್ಯಾಧಿಕಾರಿ ಎಚ್.ಎಸ್.ಚಿತ್ತರಗಿ, ಕಿರಿಯ ಆರೋಗ್ಯ ನಿರೀಕ್ಷಕ ಸಿದ್ದು ಅಳ್ಳಿಮಟ್ಟಿ, ಎಂ.ಬಿ.ಗೋಣಿ, ಬಿಜೆಪಿ ಮುಖಂಡರಾದ ಜಿ.ಎಸ್.ಗೊಂಬಿ, ಶಿವಾನಂದ ಅಂಗಡಿ, ಶ್ರೀಶೈಲ ಹಿಪ್ಪರಗಿ ಮತ್ತಿತರರು ಇದ್ದರು.

    
    
    Community-verified icon

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts