More

    ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ

    ಮಹಾಲಿಂಗಪುರ: ಸ್ಥಳೀಯ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ಪ್ರಕ್ರಿಯೆ ವೇಳೆ ಮತದಾನಕ್ಕಾಗಿ ಆಗಮಿಸುತ್ತಿದ್ದ ಮೂವರು ಮಹಿಳಾ ಸದಸ್ಯರನ್ನು ಎಳೆದಾಡಿದ ಪ್ರಕರಣವನ್ನು ಖಂಡಿಸಿ ಸೋಮವಾರ ನಾಗರಿಕ ಹಿತರಕ್ಷಣಾ ಸಮಿತಿ, ಕನ್ನಡಪರ ಸಂಘಟನೆಗಳು ಮುಖಂಡರು ಪಟ್ಟಣದ ಚನ್ನಮ್ಮ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಪ್ರತಿಭಟನೆ ನಡೆಸಿದರು.

    ನಾಗರಿಕ ಹಿತರಕ್ಷಣಾ ಸಮಿತಿ ಅಧ್ಯಕ್ಷ ಬಸವರಾಜ ಬಾಳಿಕಾಯಿ ಮಾತನಾಡಿ, ಚುನಾಯಿತ ಮೂವರು ಮಹಿಳಾ ಸದಸ್ಯೆಯರಿಗೆ ಮತದಾನಕ್ಕೆ ಅವಕಾಶ ನೀಡದೆ ಅವರನ್ನು ಸ್ವತಃ ಶಾಸಕ ಸಿದ್ದು ಸವದಿ, ಬೆಂಬಲಿಗರು, ಪುರಸಭೆ ಸದಸ್ಯರು ಎಳೆದಾಡಿರುವುದು ಅಮಾನವೀಯ ಕೃತ್ಯವಾಗಿದೆ ಮತ್ತು ಜನಪ್ರತಿನಿಧಿಗಳಿಂದಲೇ ನಡೆದ ಪ್ರಜಾಪ್ರಭುತ್ವದ ಕಗ್ಗೊಲೆಯಾಗಿದೆ ಎಂದರು.

    ಈ ಘಟನೆ ನಡೆದು 15 ದಿನಗಳು ಕಳೆದರೂ ಜಿಲ್ಲಾಡಳಿತ ಮತ್ತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು ತಪ್ಪಿತಸ್ಥರ ವಿರುದ್ಧ ಯಾವುದೇ ಕ್ರಮ ಕೈಗೊಳ್ಳದೆ ಇರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ. ಈ ಘಟನೆಗೆ ಸಂಬಂಧಿಸಿದಂತೆ ಶೀಘ್ರ ಕ್ರಮ ಜರುಗಿಸಬೇಕು. ಇಲ್ಲದಿದ್ದರೆ ವಿವಿಧ ಸಂಘಟನೆಗಳ ಮೂಲಕ ರಾಜ್ಯವ್ಯಾಪಿ ಬೃಹತ್ ಹೋರಾಟ ನಡೆಸಲಾಗುವುದು ಎಂದು ಹೇಳಿದರು.

    ರೇವಣಯ್ಯ ಹಿರೇಮಠ, ದೇವೇಂದ್ರ ಅಡಕಿ, ಎಚ್.ಎ.ರಾಯಚೂರು, ಶಿರಾಜ್ ಪಾಂಡು, ರಾಮನಗೌಡ ಪಾಟೀಲ, ಶ್ರೀಶೈಲ ಪಾಟೀಲ, ದಾದಾಪೀರ ಕರೋಶಿ, ಯಾಸೀನ ಸಾತಬಚ್ಚೆ, ಸಿದ್ದರಾಜ ಉಳಗೊಂಡ ಸೇರಿ ಹಲವರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.





    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts