

ಪುತ್ತೂರು ಗ್ರಾಮಾಂತರ: ಶುದ್ಧ ಮನಸ್ಸು ಹಾಗೂ ಪ್ರಾಮಾಣಿಕ ಕೈಂಕರ್ಯ ಯಶಸ್ವಿಯಾಗಿ ನೆರವೇರುತ್ತದೆ. ದೇವಸ್ಥಾನದ ಅಭಿವೃದ್ಧಿ, ಜೀರ್ಣೋದ್ಧಾರ ನಮ್ಮ ಉದ್ದೇಶ. ಈ ನಿಟ್ಟಿನಲ್ಲೇ ಶಾಸಕರ ಮಾರ್ಗದರ್ಶನದಂತೆ ಪ್ರತಿ ಗ್ರಾಮಗಳಲ್ಲಿ ಸಮಿತಿ ರಚನೆ ಮಾಡುತ್ತಿದ್ದೇವೆ. ಎಲ್ಲಾ ಕಡೆ ದೇವರ ಕಾರ್ಯಕ್ಕೆ ಉತ್ತಮ ಸ್ಪಂದನೆ ಲಭಿಸಿದೆ ಎಂದು ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಪಂಜಿಗುಡ್ಡೆ ಈಶ್ವರ ಭಟ್ ಹೇಳಿದರು.
ಮಜಲುಮಾರು ಶ್ರೀ ಉಮಾಮಹೇಶ್ವರೀ ದೇವಸ್ಥಾನದಲ್ಲಿ ಪುತ್ತೂರು ಮಹಾಲಿಂಗೇಶ್ವರ ದೇವಸ್ಥಾನದ ಅಭಿವೃದ್ಧಿ ಮತ್ತು ಜೀರ್ಣೋದ್ಧಾರದ ಹಿನ್ನೆಲೆಯಲ್ಲಿ ಮಹಾಲಿಂಗೇಶ್ವರ ದೇವರ ಭಕ್ತ ಸಮಿತಿ ರಚನಾ ಸಭೆ ಉದ್ಘಾಟಿಸಿ ಮಾತನಾಡಿದರು.
ಮಹಾಲಿಂಗೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಸದಸ್ಯರಾದ ಸುಭಾಷ್ ರೈ ಬೆಳ್ಳಿಪ್ಪಾಡಿ, ವಿನಯ ಕುಮಾರ್ ಬಿ.ಮುಗೇರಡ್ಕ, ಬಿ.ಈಶ್ವರ ನಾಯ್ಕ, ಮಜಲುಮಾರು ಉಮಾಮಹೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲಕ್ಷ್ಮೀಶ ತಂತ್ರಿ ಕೆಮ್ಮಿಂಜೆ, ಮಜಲುಮಾರು ಉಮಾಮಹೇಶ್ವರ ಸೇವಾ ಟ್ರಸ್ಟ್‌ನ ಗೌರವಾಧ್ಯಕ್ಷ ಜಯರಾಮ ಕೆದಿಲಾಯ ಶಿಬರ, ಉಪಾಧ್ಯಕ್ಷ ಬೆಳಿಯಪ್ಪ ಗೌಡ ಕೆದ್ಕಾರ್, ಕಾರ್ಯದರ್ಶಿ ಕೇಶವ ಪೂಜಾರಿ ಮುಕ್ವೆ, ಕೋಶಾಧಿಕಾರಿ ನವೀನ್ ರೈ ಶಿಬರ, ಸದಸ್ಯರಾದ ಸುಜಯ್ ತಂತ್ರಿ ಕೆಮ್ಮಿಂಜೆ, ಪ್ರಸನ್ನ ಭಟ್ ಪಂಚವಟಿ, ಗಿರೀಶ್ ರೈ ಮಣಿಯ, ರವಿ ಮಣಿಯ, ಸುಧೀರ್ ಹೆಬ್ಬಾರ್ ಮಣಿಯ, ಪದ್ಮನಾಭ ಪೂಜಾರಿ ಬೆದ್ರಾಳ, ಮೋನಪ್ಪ ಪುರುಷ ಮುಗೇರಡ್ಕ, ಗಣೇಶ್ ಭಟ್ ಮಜಲುಮಾರು, ಗಣೇಶ್ ಶೆಟ್ಟಿ ಶಿಬರ, ಚಂದ್ರಕಲಾ ಮುಕ್ವೆ, ರಾವೇಂದ್ರ ನಾಯಕ್, ಅರ್ಚಕ ಪ್ರಸಾದ್ ಅಡಿಗ, ವಸಂತ ಪೂಜಾರಿ ಮತ್ತಿತರರಿದ್ದರು.
ಭಕ್ತ ಸಮಿತಿ ರಚನೆ
ಸಭೆಯಲ್ಲಿ ಮಹಾಲಿಂಗೇಶ್ವರ ದೇವರ ಭಕ್ತ ಸಮಿತಿ ರಚಿಸಲಾಯಿತು. ಗೌರವಾಧ್ಯಕ್ಷರಾಗಿ ಮಜಲುಮಾರು ಉಮಾಮಹೇಶ್ವರ ದೇವಸ್ಥಾನ ವ್ಯವಸ್ಥಾಪನಾ ಸಮಿತಿ ಅಧ್ಯಕ್ಷ ಲಕ್ಷ್ಮೀಶ ತಂತ್ರಿ, ಅಧ್ಯಕ್ಷರಾಗಿ ವಸಂತ ಪೂಜಾರಿ ಕಲ್ಲರ್ಪೆ, ಉಪಾಧ್ಯಕ್ಷರಾಗಿ ಮಂಜುನಾಥ ಶೇಖ ಮತ್ತು ಚಂದ್ರಕಲಾ, ಪ್ರಧಾನ ಕಾರ್ಯದರ್ಶಿಯಾಗಿ ಚೆನ್ನಪ್ಪ ಗೌಡ, ಜತೆ ಕಾರ್ಯದರ್ಶಿಯಾಗಿ ವಿಶ್ವನಾಥ ಪುರುಷ ಅವರನ್ನು ಆಯ್ಕೆ ಮಾಡಲಾಯಿತು. ಭಕ್ತ ಸಮಿತಿ ನೂತನ ಪದಾಧಿಕಾರಿಗಳನ್ನು ಮಹಾಲಿಂಗೇಶ್ವರ ದೇವಸ್ಥಾನ ವತಿಯಿಂದ ಗೌರವಿಸಲಾಯಿತು.