More

    ಮಹಾಮಾರಿ ಕರೊನಾತಂಕ ಮಧ್ಯೆಯೂ ಸಿಇಟಿ ಸುಸೂತ್ರ

    ಬೆಳಗಾವಿ/ಚಿಕ್ಕೋಡಿ: ಕರೊನಾ ವೈರಸ್ ಆತಂಕದ ಮಧ್ಯೆಯೂ ಜಿಲ್ಲಾದ್ಯಂತ ಗುರುವಾರದಿಂದ ಆರಂಭಗೊಂಡಿರುವ ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕಾಗಿ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ) ಸುಗಮವಾಗಿ ನಡೆಯಿತು.

    ಬೆಳಗಾವಿ ಶೈಕ್ಷಣಿಕ ಜಿಲ್ಲೆಯ 14 ಕೇಂದ್ರಗಳಲ್ಲಿ ಬೆಳಗ್ಗೆ ನಡೆದ ಜೀವಶಾಸ ವಿಷಯದ ಪರೀಕ್ಷೆಗೆ ನೋಂದಣಿಯಾಗಿದ್ದ 5,316 ವಿದ್ಯಾರ್ಥಿಗಳ ಪೈಕಿ 4,117 ವಿದ್ಯಾರ್ಥಿಗಳು ಹಾಜರಾದರು. 1,199 ವಿದ್ಯಾರ್ಥಿಗಳು ಗೈರು ಉಳಿದಿದ್ದರು. ಮಧ್ಯಾಹ್ನ ನಡೆದ ಗಣಿತ ವಿಷಯದ ಪರೀಕ್ಷೆಗೆ ನೋಂದಣಿಯಾಗಿದ್ದ 5,316 ವಿದ್ಯಾರ್ಥಿಗಳ ಪೈಕಿ 4,692 ವಿದ್ಯಾರ್ಥಿಗಳು ಹಾಜರಾದರೆ, 624 ವಿದ್ಯಾರ್ಥಿಗಳು ಗೈರಾಗಿದ್ದರು.

    ಚಿಕ್ಕೋಡಿಯ 15 ಕೇಂದ್ರಗಳಲ್ಲಿ ಜೀವಶಾಸ ವಿಷಯದ ಪರೀಕ್ಷೆಗೆ ನೋಂದಣಿಗೊಂಡಿದ್ದ 6,247 ವಿದ್ಯಾರ್ಥಿಗಳ ಪೈಕಿ 5,557 ವಿದ್ಯಾರ್ಥಿಗಳು ಹಾಜರಾಗಿದ್ದು, 690 ವಿದ್ಯಾರ್ಥಿಗಳು ಗೈರು ಉಳಿದಿದ್ದರು. ಗಣಿತ ವಿಷಯದ ಪರೀಕ್ಷೆಗೆ ನೋಂದಣಿಯಾಗಿದ್ದ 6,247 ವಿದ್ಯಾರ್ಥಿಗಳ ಪೈಕಿ 5,807 ವಿದ್ಯಾರ್ಥಿಗಳು ಹಾಜರಾದರು. 440 ವಿದ್ಯಾರ್ಥಿಗಳು ಗೈರಾಗಿದ್ದರು.

    ಕರೊನಾ ಸೋಂಕು ಹರಡುವಿಕೆ ನಿಯಂತ್ರಣಕ್ಕಾಗಿ ಎಲ್ಲ ಕೇಂದ್ರಗಳಲ್ಲೂ ಸ್ಯಾನಿಟೈಸರ್ ವ್ಯವಸ್ಥೆ ಮಾಡಲಾಗಿತ್ತು. ವಿದ್ಯಾರ್ಥಿಗಳು ದೈಹಿಕ ಅಂತರ ಕಾಪಾಡಿಕೊಂಡು ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಕೇಂದ್ರದ ಸುತ್ತಲಿನ ಪ್ರದೇಶದಲ್ಲಿ ಪೊಲೀಸರು ಬಿಗಿ ಭದ್ರತೆ ಕೈಗೊಂಡಿದ್ದರು. ಜಿಲ್ಲಾಡಳಿತ ಹಾಗೂ ಪದವಿಪೂರ್ವ ಶಿಕ್ಷಣ ಇಲಾಖೆ ಅಧಿಕಾರಿಗಳು ವಿವಿಧ ಕೇಂದ್ರಗಳಿಗೆ ಭೇಟಿ ನೀಡಿ, ಪರೀಕ್ಷಾ ವ್ಯವಸ್ಥೆ ಕುರಿತು ಪರಿಶೀಲಿಸಿದರು.

    ಕರೊನಾ ಸೋಂಕಿತನಿಗೆ ಪ್ರತ್ಯೇಕ ವ್ಯವಸ್ಥೆ: ಬೆಳಗಾವಿಯ ಕುಮಾರಸ್ವಾಮಿ ಲೇಔಟ್‌ನಲ್ಲಿರುವ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೆಟ್ರಿಕ್ ನಂತರದ ಬಾಲಕಿಯರ ವಸತಿ ನಿಲಯದ ಕೋವಿಡ್ ಕೇರ್ ಸೆಂಟರ್‌ನಲ್ಲಿ ಕರೊನಾ ಸೋಂಕಿತ ವಿದ್ಯಾರ್ಥಿಗೆ ಪ್ರತ್ಯೇಕವಾಗಿ ಪರೀಕ್ಷೆ ಬರೆಯಲು ಅವಕಾಶ ಕಲ್ಪಿಸಲಾಗಿತ್ತು. ಆಂಬುಲೆನ್ಸ್‌ನಲ್ಲಿ ಆತನನ್ನು ಕರೆತರಲಾಯಿತು.

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts