More

    ರಾಮಲಲ್ಲಾ ಪ್ರಾಣ ಪ್ರತಿಷ್ಠಾಪನೆ; ಮಹಾರಾಷ್ಟ್ರ, ಪುದುಚೇರಿಯಲ್ಲಿ ರಜೆ ಘೋಷಣೆ

    ನವದೆಹಲಿ: ಅಯೋಧ್ಯೆಯಲ್ಲಿ ರಾಮ ಮಂದಿರ ಉದ್ಘಾಟನೆ, ರಾಮ ಮಂದಿರದ ಗರ್ಭ ಗೃಹದಲ್ಲಿ ರಾಮ ಲಲ್ಲಾ ವಿಗ್ರಹದ ಪ್ರಾಣ ಪ್ರತಿಷ್ಠಾಪನೆ ಹಿನ್ನೆಲೆಯಲ್ಲಿ ಜ.22 ರಂದು ಕೇಂದ್ರಾಡಳಿತ ಪ್ರದೇಶ ಪುದುಚೇರಿ ಹಾಗೂ ಮಹಾರಾಷ್ಟ್ರ ಸರ್ಕಾರಗಳು ಸಾರ್ವತ್ರಿಕ ರಜೆ ಘೋಷಣೆ ಮಾಡಲಾಗಿದೆ. ರಾಜಸ್ಥಾನ ಸರ್ಕಾರ ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ ಎಂದು ಘೋಷಣೆ ಮಾಡಿದೆ.

    ಇದನ್ನೂ ಓದಿ:ಬಿಹಾರ ಬಳಿಕ ಆಂಧ್ರದಲ್ಲಿ ಜಾತಿಗಣತಿ ಶುರು!

    ಈ ಕುರಿತು ಮಹಾರಾಷ್ಟ್ರ ಮತ್ತು ಪುದುಚೇರಿ ಸರ್ಕಾರಗಳು ಅಧಿಕೃತ ಪ್ರಕಟಣೆ ಹೊರಡಿಸಿವೆ. ಆ ದಿನ ಎಲ್ಲಾ ಸರ್ಕಾರಿ ಕಚೇರಿಗಳು ಹಾಗೂ ಶಿಕ್ಷಣ ಸಂಸ್ಥೆಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಧಾರ್ಮಿಕ ಆಚರಣೆಗಳಲ್ಲಿ ಭಾಗವಹಿಸಲು ಅನುಕೂಲವಾಗುವಂತೆ ನೌಕರರಿಗೆ ರಜೆ ಘೋಷಣೆ ಮಾಡಲಾಗಿದೆ ಎಂದು ಮಹಾರಾಷ್ಟ್ರ ಸರ್ಕಾರ ಹೇಳಿದೆ.

    ಏತನ್ಮಧ್ಯೆ ರಾಜಸ್ಥಾನ ಸರ್ಕಾರವು ಅಯೋಧ್ಯೆಯಲ್ಲಿ ಭಗವಾನ್ ರಾಮನ ಪ್ರತಿಷ್ಠಾಪನೆಯ ಅರ್ಧ ದಿನವನ್ನು ಘೋಷಿಸಿದೆ. ಸಾಮಾನ್ಯ ಆಡಳಿತ ಇಲಾಖೆ ಹೊರಡಿಸಿರುವ ಆದೇಶದ ಪ್ರಕಾರ, ಜ.22 ರಂದು ಮಧ್ಯಾಹ್ನ 2 ಗಂಟೆಯವರೆಗೆ ಎಲ್ಲಾ ಸರ್ಕಾರಿ ಕಚೇರಿಗಳು ಮುಚ್ಚಲ್ಪಡುತ್ತವೆ ಎನ್ನಲಾಗಿದೆ.

    ಉತ್ತರ ಪ್ರದೇಶದಲ್ಲಿ ಸಂಭ್ರಮದ ವಾತಾವರಣ ನಿರ್ಮಾಣವಾಗಿದೆ. ಶ್ರೀರಾಮ ಜನ್ಮ ಭೂಮಿಯಲ್ಲಿ ಪ್ರಾಣ ಪ್ರತಿಷ್ಠಾಪನಾ ಕಾರ್ಯಕ್ರಮಕ್ಕೆ ಭರದ ಸಿದ್ದತೆಗಳು ನಡೆಯುತ್ತಿವೆ. ಪ್ರಧಾನಿ ಮೋದಿ ಅವರು ಪ್ರಾಣ ಪ್ರತಿಷ್ಠಾಪನೆ ದಿನ ಮುಖ್ಯ ಯಜಮಾನನ ಪಾತ್ರ ವಹಿಸಲಿದ್ದು, ಈ ಕಾರ್ಯಕ್ರಮಕ್ಕೆ ಚಿತ್ರ ನಟರು, ಕ್ರಿಕೆಟಿಗರು ಸೇರಿದಂತೆ ಸಮಾಜದ ಹಲವು ರಂಗಗಳ ಗಣ್ಯರು ಆಗಮಿಸಲಿದ್ದಾರೆ.

    ರಜೆ ಘೋಷಣೆ ಕುರಿತು ಸಾರ್ವಜನಿಕರಿಂದ ದೊಡ್ಡ ಬೇಡಿಕೆಯಿತ್ತು. ಜನರ ಭಾವನೆಗಳಿಗೆ ಬೆಲೆಕೊಟ್ಟು ಈ ನಿರ್ಧಾರ ಮ ಮಾಡಲಾಗಿದೆ ಎಂದು ಮಹಾರಾಷ್ಟ್ರ ಮತ್ತು ಪುದುಚೇರಿ ಸರ್ಕಾರ ಹೇಳಿದೆ.

    ಹಲವು ರಾಜ್ಯಗಳಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ : ಅಯೋಧ್ಯಾ ಶ್ರೀರಾಮ ಮಂದಿರ ಉದ್ಘಾಟನೆ ಹಿನ್ನೆಲೆಯಲ್ಲಿ ಉತ್ತರ ಪ್ರದೇಶ, ಮಹಾರಾಷ್ಟ್ರ, ಪುದುಚೇರಿ, ಛತ್ತೀಸ್‌ಗಢ, ಗೋವಾ ಹಾಗೂ ಹರ್ಯಾಣ ರಾಜ್ಯಗಳಲ್ಲಿ ಶಾಲೆ, ಕಾಲೇಜುಗಳಿಗೆ ಅಲ್ಲಿನ ರಾಜ್ಯ ಸರ್ಕಾರಗಳು ರಜೆ ಘೋಷಿಸಿವೆ. ಇದೇ ರೀತಿ ಬಿಜೆಪಿ ಆಡಳಿತದ ಇತರ ರಾಜ್ಯಗಳಾದ ಅಸ್ಸಾಂ, ಮಹಾರಾಷ್ಟ್ರ ಹಾಗೂ ಮಧ್ಯ ಪ್ರದೇಶ ರಾಜ್ಯಗಳಲ್ಲೂ ರಜೆ ಘೋಷಣೆ ಆಗುವ ಸಾಧ್ಯತೆ ಇದೆ.

    ಬಿಗ್ ಬ್ಯಾಷ್ ಟಿ20: ನಾಯಕತ್ವದಿಂದ ಕೆಳಗಿಳಿದ ಮ್ಯಾಕ್ಸ್‌ವೆಲ್!

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts