More

    ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಮಹಾ ಸಿಎಂ ಉದ್ಧವ್​ ಠಾಕ್ರೆ

    ನವದೆಹಲಿ: ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್​ ಠಾಕ್ರೆ ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದರು.

    ಮಹಾರಾಷ್ಟ್ರ ಸಿಎಂ ಆಗಿ ಅಧಿಕಾರ ವಹಿಸಿಕೊಂಡ ನಂತರ ಮೊದಲ ಬಾರಿಗೆ ನಡೆದ ಭೇಟಿ ಇದಾಗಿದೆ.
    ಸಿಎಂ ಅವರೊಂದಿಗೆ ಪುತ್ರ ಹಾಗೂ ಸಚಿವ ಆದಿತ್ಯ ಠಾಕ್ರೆ ಇದ್ದರು. ಪ್ರಧಾನಿ ಮೋದಿ ಭೇಟಿ ಔಪಚಾರಿಕವಾಗಿದೆ.

    ಇದಕ್ಕೆ ಬೇರೆ ಅರ್ಥ ಕಲ್ಪಿಸಬೇಕಿಲ್ಲ. ಅಧಿಕಾರ ವಹಿಸಿಕೊಂಡ ನಂತರ ಭೇಟಿಯಾಗಬೇಕಿತ್ತು. ಆಗ ದೆಹಲಿ ವಿಧಾನಸಭೆ ಚುನಾವಣೆ ಇದ್ದ ಹಿನ್ನೆಲೆಯಲ್ಲಿ ಸಾಧ್ಯವಾಗಲಿಲ್ಲ. ಹೀಗಾಗಿ ಈಗ ಭೇಟಿ ಮಾಡಿದ್ದೇನೆ ಎಂದು ಸಿಎಂ ಉದ್ಧವ್​ ಠಾಕ್ರೆ ಹೇಳಿದ್ದಾರೆ.

    ಕೇಂದ್ರ ಗೃಹ ಸಚಿವ ಅಮಿತ್​ ಷಾ, ಬಿಜೆಪಿ ಹಿರಿಯ ಮುಖಂಡ ಲಾಲ್​ ಕೃಷ್ಣ ಆಡ್ವಾಣಿ, ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಕೂಡ ಭೇಟಿ ಮಾಡಲಿದ್ದೇನೆ ಎಂದು ಅವರು ಹೇಳಿದರು.

    ಮಹಾರಾಷ್ಟ್ರದ ವಿಧಾನ ಸಭೆ ಚುನಾವಣೆಯಲ್ಲಿ ಯಾವುದೇ ಪಕ್ಷಕ್ಕೆ ಸ್ಪಷ್ಟ ಬಹುಮತ ಬಾರದ ಹಿನ್ನೆಲೆಯಲ್ಲಿ ಶಿವಸೇನಾ, ಕಾಂಗ್ರೆಸ್​ ಹಾಗೂ ಎನ್​ಸಿಪಿ ಸೇರಿ ಮಹಾ ವಿಕಾಸ್​ ಅಘಾಡಿ ಸರ್ಕಾರ ರಚನೆಯಾಗಿದೆ. (ಏಜೆನ್ಸೀಸ್​)

    ಸಿನಿಮಾ

    ಲೈಫ್‌ಸ್ಟೈಲ್

    ಟೆಕ್ನಾಲಜಿ

    Latest Posts